ಬೆಂಗಳೂರು, (ಸೆ.26): 2022-23ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿಗೆ ದೊಡ್ಡಬಳ್ಳಾಪುರದ ತಾಲೂಕಿನ ಸಾಸಲು ಸೇರಿದಂತೆ 237 ಗ್ರಾಮ ಪಂಚಾಯಿತಿಗಳನ್ನು ಆಯ್ಕೆ ಮಾಡಲಾಗಿದೆ.
ಪಂಚಾಯತ್ ರಾಜ್ ಇಲಾಖೆ ಪ್ರತಿ ವರ್ಷ ಈ ಪ್ರಶಸ್ತಿ ನೀಡುತ್ತ ಬಂದಿದೆ. ಈ ಬಾರಿ 233 ಗ್ರಾಮ ಪಂಚಾಯಿತಿಗಳಿಗೆ ಗಾಂಧಿ ಗ್ರಾಮ ಪುರಸ್ಕಾರ ನೀಡಲಾಗಿದೆ. ಉಡುಪಿ ಜಿಲ್ಲೆ ಕುಂದಾಪುರ ತಾಲೂಕು ಹೊಸಾಡು, ಉಡುಪಿ ತಾಲೂಕು 80 ಬಡಗೆಬೆಟ್ಟು, ಉತ್ತರ ಕನ್ನಡ ಜಿಲ್ಲೆ ತಟ್ಟೇಗೇರಿ ಹಾಗೂ ಬೆಳವಟಿಕೆ ಗ್ರಾಮ ಪಂಚಾಯಿತಿಗಳು ವಿಶೇಷ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಮಾಡಲಾಗಿದೆ.
ಆಯ್ಕೆಯಾದ ಗ್ರಾಮ ಪಂಚಾಯತಿಗಳಿಗೆ ಅಕ್ಟೋಬರ್ 2 ರಂದು ಬೆಳಗ್ಗೆ 10ಕ್ಕೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಯೋಜಿಸಾಗಿದೆ. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಭಾಗವಹಿಸಿ ಪುಶಸ್ತಿ ಸ್ವೀಕರಿಸಲು ಸೂಚಿಸಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….