4ನೇ ಸುತ್ತಿನ ಕಾಲುಬಾಯಿ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ: ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ರೈತರ ಕಾಳಜಿ‌ ಅಗತ್ಯ – ಬಿ.ಸಿ.ಆನಂದ್ ಕುಮಾರ್

ದೊಡ್ಡಬಳ್ಳಾಪುರ, (ಸೆ.26): ಕಾಲು ಬಾಯಿ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಸುಗಳಿಗೆ  ಲಸಿಕೆಯನ್ನು ಹಾಕುವುದರಿಂದ ಕಾಲು ಬಾಯಿ ರೋಗವನ್ನು ಸಂಪೂರ್ಣವಾಗಿ ತಡೆಗಟ್ಟಬಹುದು. ಸೆ.26 ರಿಂದ ಅ.25ರವರೆಗೆ 4ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮದಲ್ಲಿ ಎಲ್ಲಾ ಜಾನುವಾರುಗಳಿಗೆ ಲಸಿಕೆ ಕೊಡಿಸಬೇಕಿದೆ ಎಂದು ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ ಹೇಳಿದರು.

ತಾಲೂಕಿನ ಪಿಂಡಕೂರು ತಿಮ್ಮನಹಳ್ಳಿಯ  ಡೈರಿ ಆವರಣದಲ್ಲಿ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಬೆಂಗಳೂರು ಹಾಲು ಒಕ್ಕೂಟದ ಸಹಯೋಗದೊಂದಿಗೆ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದ 4ನೇ ಸುತ್ತಿನ ಕಾಲು ಬಾಯಿ ಜ್ವರ ನಿಯಂತ್ರಣ ಲಸಿಕಾ ಅಭಿಯಾನದ ಅಂಗವಾಗಿ ಕಾಲು ಬಾಯಿ ರೋಗ ಲಸಿಕಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಈ ರೋಗಕ್ಕೆ ಯಾವುದೇ ನಿರ್ದಿಷ್ಟ ಚಿಕಿತ್ಸೆ ಇರದ ಕಾರಣ, ಕಾಲು-ಬಾಯಿ ರೋಗ ನಿಯಂತ್ರಿಸಲು ರಾಸುಗಳಿಗೆ ಲಸಿಕೆ ಹಾಕಿಸುವುದೇ ಏಕೈಕ ಮಾರ್ಗವಾಗಿದೆ. ರೈತರು ಸರ್ಕಾರದ  ಹಾಗೂ ಬಮೂಲ್‍ನ  ಸೌಲಭ್ಯಗಳನ್ನು ಸದುಪಯೋಗ‌ ಪಡಿಸಿಕೊಂಡು ಮುಂದೆ ಆಗಬಹುದಾದ ತೊಂದರೆಗಳಿಂದ ರಕ್ಷಿಸಿಕೊಳ್ಳಬೇಕಿದೆ  ಎಂದರು.

ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ತಾಲೂಕು ಮುಖ್ಯ ಪಶುವೈದ್ಯಾಕಾರಿ ಡಾ.ವಿಶ್ವನಾಥ್ ಮಾತನಾಡಿ, ರೈತರು ರಾಸುಗಳಿಗೆ ಲಸಿಕೆ ಹಾಕಿಸಿಕೊಳ್ಳುವುದರಿಂದ ರಾಸುಗಳಲ್ಲಿನ ಹಾಲಿನ ಪ್ರಮಾಣ ಕಡಿಮೆ ಆಗುವುದಿಲ್ಲ, ರಾಸುಗಳ ಗಾಯಗಳ ಸೂಕ್ತ ಉಪಚಾರದ ಜೊತೆಯಲ್ಲಿ ಖನಿಜ ಮಿಶ್ರಣ ರೋಗ ನಿರೋಧಕ ಶಕ್ತಿ ವೃದ್ಧಿಸುವ ಔಷಗಳನ್ನು ಬಳಸುವುದರಿಂದ ಜಾನುವಾರುಗಳು ನಿಶ್ಯಕ್ತವಾಗುವುದನ್ನು ತಪ್ಪಿಸಬಹುದು.  ಕಾಲು ಬಾಯಿ(ಗೆರಸಲು) ಜ್ವರ ರೋಗವು ವೈರಾಣುವಿನಿಂದ ಉಂಟಾಗಲಿದ್ದು, ಇದು ಸೀಳು ಗೊರಸುಗಳುಳ್ಳ ರಾಸುಗಳಲ್ಲಿ ಕಂಡುಬರುತ್ತದೆ. ಈ ದಿಸೆಯಲ್ಲಿ ತಾಲೂಕಿನ ಎಲ್ಲಾ ಗ್ರಾಮಗಳ ಸುಮಾರು 48,933 ಸಾವಿರ ದನ ಮತ್ತು ಎಮ್ಮೆಗಳಿಗೆ ಮುಂಜಾಗ್ರತಾ ಕ್ರಮವಾಗಿ ಲಸಿಕೆ ಹಾಕಲಾಗುತ್ತಿದೆ.  

ತಾಲೂಕಿಗೆ 27,250 ಡೋಸ್‍ಗಳ ಲಸಿಕೆ ಸರಬರಾಜಾಗಿದ್ದು,  ಪ್ರತಿ ದಿನ ಬೆಳಿಗ್ಗೆ 6.30 ಗಂಟೆಯಿಂದ 11 ಗಂಟೆಯವರೆಗೆ ನಿಗದಿತ ವೇಳಾಪಟ್ಟಿಯಂತೆ ಗ್ರಾಮಗಳಿಗೆ ಭೇಟಿ ನೀಡಿ, ಜಾನುವಾರುಗಳಿಗೆ ಉಚಿತವಾಗಿ ಲಸಿಕೆ ನೀಡಲಿದ್ದಾರೆ. 

ತಾಲೂಕಿನಲ್ಲಿ 24ತಂಡಗಳಲ್ಲಿ ಒಟ್ಟು 100 ಸಿಬ್ಬಂದಿಗಳು ರಾಸುಗಳಿಗೆ ಲಸಿಕೆ ಹಾಕಲಿದ್ದು, ರೈತ ಬಾಂಧವರು ತಮ್ಮ 3 ತಿಂಗಳ ಮೇಲ್ಪಟ್ಟ ಎಲ್ಲಾ ರಾಸುಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಬಮೂಲ್ ಉಪವ್ಯವಸ್ಥಾಪಕ ಡಾ.ಎಲ್.ಬಿ.ನಾಗರಾಜ್, ಪಿಂಡಕೂರುತಿಮ್ಮನಹಳ್ಳಿ  ಎಂಪಿಸಿಎಸ್ ಅಧ್ಯಕ್ಷ ಆನಂದ್, ಕಾರ್ಯದರ್ಶಿ ರವಿಕುಮಾರ್, ಮತ್ತಿತರರು ಹಾಜರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!