ಹಾಸನ, (ಸೆ.27): ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ತಮಿಳುನಾಡಿನ ರಾಜಕಾರಣಿಗಳಲ್ಲಿರುವ ಒಗ್ಗಟ್ಟು ನಮ್ಮಲ್ಲಿಲ್ಲ. ಕಾವೇರಿ ನೀರಿಗಾಗಿ ಕರೆಕೊಟ್ಟಿರುವ ಬಂದ್ ವಿಚಾರದಲ್ಲೇ ನಮ್ಮಲ್ಲಿ ಒಗ್ಗಟ್ಟಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಬೇಸರ ವ್ಯಕ್ತಪಡಿಸಿದರು.
ಮಂಗಳವಾರ ಸುದ್ದಿಗಾರರ ಜತೆಗೆ ಮಾತನಾಡಿ, ಎಚ್.ಡಿ.ಕುಮಾರಸ್ವಾಮಿ ಅವರು ಕಾವೇರಿಕೊಳ್ಳದ ಪ್ರತಿ ಅಣೆಕಟ್ಟೆಯ ಸ್ಥಳ ಪರಿಶೀಲನೆ ಮಾಡಿ ನೀರು ಎಷ್ಟಿದೆ ಎಂದು ವಿವರ ತಂದಿದ್ದಾರೆ. ಅದೇ ವರದಿ ಆಧರಿಸಿ ನಾನು ಪ್ರಧಾನಿ ಅವರಿಗೆ ಪತ್ರ ಬರೆದಿದೇನೆ. ನಿಷ್ಪಕ್ಷಪಾತವಾಗಿ ರಾಜ್ಯ ಗಳಸ್ಥಿತಿ ಅಧ್ಯಯನ ಮಾಡಲು ತಜ್ಞರ ಸಮಿತಿ ಕಳಿಸಿ ಎಂದು ಆ ಪತ್ರದಲ್ಲಿ ಕೇಳಿದ್ದೇನೆ.
ನಾನು ಬರೆದ ಪತ್ರವನ್ನು ಮುಖ್ಯಮಂತ್ರಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪ, ಬೊಮ್ಮಾಯಿ ಎಲ್ಲರೂ ಸ್ವಾಗತಿಸಿದ್ದಾರೆ.
ನಮ್ಮ ಬೆಳೆ ಉಳಿಸಿಕೊಳ್ಳಲು 70 ಟಿಎಂಸಿ ನೀರು ಬೇಕು. ನಾನು ಹಿರಿಯ ರಾಜಕಾರಣಿಯಾಗಿ ನಮ್ಮಲ್ಲಿ ಐಕ್ಯತೆ ಇಲ್ಲ ಎಂದು ಹಲವು ಬಾರಿ ಹೇಳಿದ್ದೇನೆ. ಆದರೆ ತಮಿಳುನಾಡಿನ ಪರಿಸ್ಥಿತಿ ಬೇರೆ ಇದೆ. ಈ ವಿಚಾರದಲ್ಲಿ ಸರ್ಕಾರದ ನಿಲುವು ಬಂದ ಮೇಲೆ ನಾವು ಪ್ರತಿಕ್ರಿಯೆ ನೀಡುತ್ತೇವೆ ಎಂದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….