ಬಿಜೆಪಿ ಜತೆ ಮೈತ್ರಿಗೆ ನಾನೇ ಅನುಮತಿ ಕೊಟ್ಟಿದ್ದು; BJP-JDS ಮೈತ್ರಿಗೆ ನನ್ನ ಒಪ್ಪಿಗೆ ಇದೆ ಎಂದ ಹೆಚ್.ಡಿ.ದೇವೇಗೌಡ

ಬೆಂಗಳೂರು, (ಸೆ.27): ವಿನಾಕಾರಣ ನಮ್ಮ ಪಕ್ಷದ ಮೇಲೆ ದೂರು ಹಾಕುವ ಕೆಲಸ ನಡೆಯುತ್ತಿದೆ. ನಾವೇನು ಮುಚ್ಚುಮರೆ ಮಾಡುತ್ತಿಲ್ಲ. ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳುವ ಮೂಲಕ ಜೆಡಿಎಸ್ ಜಾತ್ಯತೀತ ತತ್ವಗಳನ್ನು ಗಾಳಿಗೆ ತೂರಿದೆ ಎನ್ನುವ ಆರೋಪ ಸರಿಯಲ್ಲ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಅವರು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದರು. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರೂ ಉಪಸ್ಥಿತರಿದ್ದ ಈ ಗೋಷ್ಠಿಯಲ್ಲಿ ಮಾಜಿ ಪ್ರಧಾನಿಗಳು ಹಲವು ಗಂಭೀರ ವಿಷಯಗಳನ್ನು ಹಂಚಿಕೊಂಡರು.

ಬಿಜೆಪಿ ಜತೆ ಮೈತ್ರಿಗೆ ಸ್ವತಃ ನಾನೇ ಒಪ್ಪಿಗೆ ನೀಡಿದ್ದೇನೆ. ನಾನೇ ಈ ಮೈತ್ರಿಗೆ ಅನುಮತಿ ಕೊಟ್ಟಿದ್ದೇನೆ. ನಮ್ಮ ಪಕ್ಷದ ಎಲ್ಲಾ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರ ಆಬಿಫ್ರಾಯ ಪಡೆದೇ ಈ ನಿರ್ಧಾರಕ್ಕೆ ಬಂದಿದ್ದೇವೆ ಎಂದು ಮಾಜಿ ಪ್ರಧಾನಿಗಳು ಒತ್ತಿ ಹೇಳಿದರು.

ಕದ್ದುಮುಚ್ಚಿ ಮಾತನಾಡಿಲ್ಲ: ನಾವು ಜಾತ್ಯಾತೀತ ಸಿದ್ಧಾಂತವನ್ನು ಗಾಳಿಗೆ ತೂರುವ ರಾಜಕಾರಣವನ್ನು ಯಾವತ್ತೂ ಮಾಡಿಲ್ಲ. ಬಿಜೆಪಿ ನಾಯಕರ ಜೊತೆ ಕದ್ದುಮುಚ್ಚಿ ಮಾತನಾಡುವ ಅವಶ್ಯಕತೆ ನಮಗಿಲ್ಲ. ಕಳೆದ ಅರವತ್ತು ವರ್ಷಗಳಿಂದ ಯಾವುದೇ ಸಮುದಾಯಕ್ಕೆ ಅನ್ಯಾಯವಾಗಲು ಬಿಟ್ಟಿಲ್ಲ. ಮುಂದೆಯೂ ನಾವು ಎಲ್ಲರ ಪರವಾಗಿ ಇರುತ್ತೇವೆ ಎಂದು ಅವರು ಹೇಳಿದರು.

ಅನಗತ್ಯವಾಗಿ ಮೈತ್ರಿಯಲ್ಲಿ ತಪ್ಪು ಹುಡುಕುವ ವ್ಯರ್ಥ ಪ್ರಯತ್ನವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಟೀಕಾಪ್ರಹಾರ ನಡೆಸಿದ ಅವರು; ರಾಜ್ಯದಲ್ಲಿ ನಮ್ಮ ಬಿಜೆಪಿ ಸರಕಾರ ಬರಲು ಅವಕಾಶ ಮಾಡಿಕೊಟ್ಟಿದ್ದು ಯಾರು? ಕಾಂಗ್ರೆಸ್ ಪಕ್ಷದ ನಾಯಕರಾದ ಗುಲಾಂ ನಭಿ ಅಜಾದ್, ರಾಜಾಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್ ಸೇರಿ ಎಲ್ಲರೂ ಒತ್ತಡ ಹೇರಿ 2018ರಲ್ಲಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದರು. ಯಾವ ಕಾರಣಕ್ಕೂ ನಿಮ್ಮ ಸಹವಾಸ ಬೇಡ ಎಂದು ನಾನು ಕಾಂಗ್ರೆಸ್ ನಾಯಕರಿಗೆ ಹೇಳಿದ್ದೆ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿ ಜತೆ ಮೈತ್ರಿ ಯಾಕೆ ಅಂತ ಪ್ರಶ್ನೆಯನ್ನು ಎಲ್ಲರೂ ಕೇಳುತ್ತಿದ್ದಾರೆ. ಅದಕ್ಕೆ ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಅಪಾರ್ಥ ಕಲ್ಪಿಸಿ ರಾಜ್ಯಕ್ಕೆ ತಪ್ಪು ಸಂದೇಶ ನೀಡುತ್ತಿದೆ. ಆದರೆ, ರಾಜಕೀಯ ಬೆಳವಣಿಗೆ, ಪಕ್ಷದ ಹಿತದೃಷ್ಟಿಯಿಂದ ಕೆಲವು ಹೆಜ್ಜೆಗಳನ್ನು ಇಟ್ಟಿದ್ದೇವೆ. ಜೆಡಿಎಸ್ ಬಗ್ಗೆ ಲಘುವಾಗಿ ಯಾರೂ ಮಾತನಾಡುವುದು ಬೇಡ. ಇದು ಅವಕಾಶವಾದಿ ರಾಜಕಾರಣ ಅಲ್ಲ. ಪಕ್ಷ ಉಳಿಸಲು ಹೋರಾಟ ಮಾಡುತ್ತಿದ್ದೇವೆ ಎಂದು ಅವರು ಹೇಳಿದರು.

ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ: ನಾನು‌ ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಿ ಮಾತಾಡಿದ್ದೇನೆ. ಕರ್ನಾಟಕ ರಾಜ್ಯದ ಪರಿಸ್ಥಿತಿ ಏನಿದೆ ಎಂಬುದರ ಬಗ್ಗೆ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಜತೆ ಮಾತಾಡಿದ್ದೇನೆ. ಏನೆಲ್ಲಾ ನಡೆಯಿತು, ಏನೇನು ಆಗುತ್ತಿದೆ ಎಂಬುದನ್ನು ಪಕ್ಷದ ಎಲ್ಲಾ ಸಭೆಗಳಲ್ಲಿ ಎಲ್ಲಾ ನಾಯಕರ ಗಮನಕ್ಕೆ ತಂದಿದ್ದೇವೆ. ಯಾವುದೇ ಸಮುದಾಯಕ್ಕೆ ಈ ಪಕ್ಷದಿಂದ ಅನ್ಯಾಯ ಆಗಲು ಬಿಟ್ಟಿಲ್ಲ. ಆದರೆ, ಇವತ್ತು ಯಾಕೆ ಹೀಗಾಯಿತು? ಕುಮಾರಸ್ವಾಮಿ ಅವರ ಸರಕಾರ ತೆಗೆದಿದ್ದು ಯಾರು? ಹದಿನೇಳು ಜನ ಶಾಸಕರನ್ನು ಮುಂಬಾಯಿಗೆ ಕಳಿಸಿಕೊಟ್ಟಿದ್ದು ಯಾರು? ಎಂದು ಪರೋಕ್ಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮಾಜಿ ಪ್ರಧಾನಿಗಳು ಟೀಕಾಪ್ರಹಾರ ನಡೆಸಿದರು.

ಕಾಂಗ್ರೆಸ್ ಗೆ ನೈತಿಕತೆ ಇಲ್ಲ: ಬಾಯಿಮಾತಿನಲ್ಲಿ ಜಾತ್ಯತೀತ ತತ್ವವನ್ನು ಹೇಳುತ್ತಿರುವ ಕಾಂಗ್ರೆಸ್ ಇತಿಹಾಸದ ಉದ್ದಕ್ಕೂ ಮಾಡಿದ್ದು ಜಾತ್ಯತೀತತೆ ಅಪಚಾರವನ್ನೇ. ಕರ್ನಾಟಕದಲ್ಲಿಯೇ ಅದಕ್ಕೆ ಅನೇಕ ಉದಾಹರಣೆಗಳು ಇವೆ. ಬಿ.ಎಂ. ಫಾರೂಕ್ ಅವರನ್ನು ರಾಜ್ಯಸಭೆ ಚುನಾವಣೆಗೆ ನಿಲ್ಲಿಸಿದೆವು. ಅವರ ಸೋಲಿಗೆ ಕಾರಣ ಆಗಿದ್ದು ಯಾರು? ಆಮೇಲೆ ಕುಪ್ಪೇಂದ್ರ ರೆಡ್ಡಿ ಅವರನ್ನು ಸೋಲಿಸಿದವರು ಯಾರು? ಕಾಂಗ್ರೆಸ್ ನಾಯಕರೇ ಅದನ್ನೆಲ್ಲ ಮಾಡಿದ್ದು ಎನ್ನುವುದು ಗೊತ್ತಿಲ್ಲವೇ? ಆಗ ಇವರೆಲ್ಲರಿಗೂ ಜಾತ್ಯತೀತತೆ ನೆನಪು ಇರಲಿಲ್ಲವೇ? ಜೆಡಿಎಸ್ ಪಕ್ಷವನ್ನು ಬಿಜೆಪಿ ಬಿ ಟೀಂ ಎನ್ನುವ ಇವರಿಗೆ ಯಾವ ನೈತಿಕತೆ ಇದೆ ಎಂದು ಮಾಜಿ ಪ್ರಧಾನಿಗಳು ಖಾರವಾಗಿ ಪ್ರಶ್ನಿಸಿದರು.

ಮೈತ್ರಿಯಿಂದ ಯಾವ ಸಮಸ್ಯೆಯೂ ಇಲ್ಲ:  ಮೈತ್ರಿಯಿಂದ ನಮ್ಮ ಪಕ್ಷದಲ್ಲಿ ಯಾವುದೇ ಸಮಸ್ಯೆ ಇಲ್ಲ. ಅದರ ಬಗ್ಗೆ ಯಾರಿಗೂ ಕಳವಳ ಬೇಕಿಲ್ಲ. ಅಮಿತ್ ಶಾ, ಜೆ.ಪಿ.ನಡ್ಡಾ ಅವರ ಜತೆ ಚರ್ಚೆ ಆಗಿದೆ. ಪ್ರಧಾನಿಗಳ ಜತೆ ಇನ್ನೂ ಮಾತುಕತೆ ಆಗಿಲ್ಲ. ಬಿಜೆಪಿ ಜತೆ ನೇರವಾಗಿ ಅಥವಾ ಪರೋಕ್ಷವಾಗಿ ಮಡಿವಂತಿಕೆ  ಕಾಪಾಡಿಕೊಂಡಿರುವ ಒಂದು ಪಕ್ಷ ಇದ್ದರೆ ತೋರಿಸಿ ಈ ದೇಶದಲ್ಲಿ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಸೋಲಿಸಬೇಕು ಎಂದು ಬಿಜೆಪಿ ಜತೆ ಎಡಪಕ್ಷಗಳ ಕೆಲ ಮುಖಂಡರು ಕೆಲಸ ಮಾಡಿದ್ದು ನಮಗೂ ಗೊತ್ತಿದೆ ಎಂದು ಮಾಜಿ ಪ್ರಧಾನಿಗಳು ಖಾರವಾಗಿ ನುಡಿದರು.

ನಮ್ಮ ಪಕ್ಷಕ್ಕೆ ಈ ಮೈತ್ರಿಯಿಂದ ಧಕ್ಕೆ ಆಗುವುದಿಲ್ಲ. ಯಾರೂ ಪಕ್ಷ ತೊರೆಯುವುದಿಲ್ಲ. ಕರೆದು ಮಾತನಾಡುತ್ತೇನೆ. ಹೆಚ್.ಡಿ.ಕುಮಾರಸ್ವಾಮಿ ತಿಂಗಳು ಪಂಚರತ್ನ ರಥಯಾತ್ರೆ ನಡೆಸಿದ್ದರು. ಜಲಧಾರೆ ಕಾರ್ಯಕ್ರಮ ನೀಡಿದ್ದರು. ಆದರೆ ಚುನಾವಣೆಯಲ್ಲಿ ಗೆಲ್ಲಲಾಗಲಿಲ್ಲ. ಅದಕ್ಕೆ ನಾವೇನೂ ಹೆದರುವ ಅವಶ್ಯಕತೆ ಇಲ್ಲ ಎಂದರು ಅವರು.

ದೇವದುರ್ಗ ಶಾಸಕಿ ಕರೆಮ್ಮ ನಾಯಕ ಅವರು ಮಂಗಳವಾರ ರಾತ್ರಿ ನನಗೆ ದೂರವಾಣಿ ಕರೆ ಮಾಡಿದ್ದರು. ನಿಮ್ಮಿಂದ ಮತ್ತು ಕುಮಾರಸ್ವಾಮಿ ಅವರಿಂದ ನನ್ನನ್ನು ಯಾರೂ ಬೇರ್ಪಡಿಸಲು ಸಾಧ್ಯವಿಲ್ಲ ಎಂದು ಹೇಳಿದರು. ನೀವಿಬ್ಬರೂ ಬದುಕಿರುವ ತನಕ ನಾನು ಎಲ್ಲಿಗೂ ಹೋಗುವುದಿಲ್ಲ ಎಂದು ತಿಳಿಸಿದ್ದಾರೆ. ಆದರೆ, ಕೆಲವರು ಅನಗತ್ಯವಾಗಿ ಗೊಂದಲ ಸೃಷ್ಟಿ ಮಾಡುವ ಕೆಲಸ ಮಾಡುತ್ತಿದ್ದಾರೆ, ಅವರ ಕುಯುಕ್ತಿ ಫಲಿಸುವುದಿಲ್ಲ ಎಂದು ಮಾಜಿ ಪ್ರಧಾನಿಗಳು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಮಾಜಿ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿ, ಮಾಜಿ ಸಂಸದ ಕುಪೆಂದ್ರ ರೆಡ್ಡಿ, ಶಾಸಕ ಎಂ.ಟಿ.ಕೃಷ್ಣಪ್ಪ, ವಿಧಾನ ಪರಿಷತ್ ಸದಸ್ಯರಾದ ಟಿ.ಎ.ಶರವಣ, ಬಿ.ಎಂ.ಫಾರೂಕ್, ಮಂಜೇಗೌಡ, ಪಕ್ಷದ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಚೌಡರೆಡ್ಡಿ ತೂಪಲ್ಲಿ ಮುಂತಾದವರು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!