ಬೆಂಗಳೂರು, (ಅ.12): ಲೋಕಸಭಾ ಚುನಾವಣೆಯ ವೇಳೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತಷ್ಟು ರಾಜ್ಯದಲ್ಲಿ ಬಲ ಪಡೆಯಲಿದೆ. ಜೆಡಿಎಸ್ ಮತ್ತು ಬಿಜೆಪಿ ಪಕ್ಷವನ್ನು ತೊರೆದು ಸುಮಾರು 40 ಕ್ಕೂ ಹೆಚ್ಚು ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸುಳಿವು ನೀಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಬಿಜೆಪಿ ತೊರೆದ ಮಾಜಿ ಶಾಸಕ ರಾಮಪ್ಪ ಲಮಾಣಿಯವರನ್ನು ಪಕ್ಷಕ್ಕೆ ಸ್ವಾಗತಿಸಿ ಅವರು ಮಾತನಾಡಿದರು.
40 ನಾಯಕರು ನನ್ನ ಮುಂದೆ ಅರ್ಜಿ ಹಾಕಿಕೊಂಡಿದ್ದಾರೆ. ಅನಿವಾರ್ಯವಾಗಿ ಈ ವಿಷಯವನ್ನು ನಾನಿಂದು ಬಹಿರಂಗಪಡಿಸುತ್ತಿದ್ದೇನೆ ಎಂದು ನುಡಿದ ಡಿಕೆ ಶಿವಕುಮಾರ್, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಾಗುತ್ತಿರುವುದು ನಾಯಕರು ಪಕ್ಷ ತೊರೆದು ಕಾಂಗ್ರೆಸ್ ಸೇರಲು ಕಾರಣವಾಗಿದೆ ಎಂದು ನುಡಿದರು.
ಆಮ್ ಆದ್ಮಿ ಪಕ್ಷದಿಂದ ಸ್ಪರ್ಧಿಸಿದ್ದ ನೂರಕ್ಕೂ ಹೆಚ್ಚು ಅಭ್ಯರ್ಥಿಗಳು ಕಾಂಗ್ರೆಸ್ ಸೇರಲು ತುದಿಗಾಲಿನಲ್ಲಿ ನಿಂತಿದ್ದಾರೆ ಎಂದು ನುಡಿದ ಅವರು, ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ ಸೇರಲು ಸಿದ್ಧವಾಗಿರುವವರ ದೊಡ್ಡ ಪಟ್ಟಿಯೇ ಇದೆ. ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ್ ಸವದಿಯವರೊಡನೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….