ಹಮಾಸ್ ಸರ್ವನಾಶಕ್ಕೆ ಮುಗಿಬಿದ್ದ ಇಸ್ರೇಲ್: ಭಾರತೀಯರ ರಕ್ಷಣೆಗೆ ಆಪರೇಷನ್ ಅಜಯ್ / ಮೊದಲ ವಿಮಾನ ಇಂದು ಇಸ್ರೇಲ್‌ಗೆ

ಜೆರುಸಲೇಂ, (ಅ12): ಇಸ್ರೇಲ್- ಹಮಾಸ್ ಯುದ್ಧ 6ನೇ ದಿನವು ಮುಂದುವರಿದಿದ್ದು, ತನ್ನ ಮೇಲೆ ದಾಳಿ ನಡೆಸಿದ ಗಾಜಾಪಟ್ಟಿಯ ಹಮಾಸ್ ಉಗ್ರರನ್ನು ಸರ್ವನಾಶ ಮಾಡುವುದಾಗಿ ಶಪಥ ಮಾಡಿ ರುವ ಇಸ್ರೇಲ್, ಬುಧವಾರ ಕ್ಷಿಪಣಿಗಳ ಮಳೆಯನ್ನೇ ಸುರಿಸಿದೆ. ಗಾಜಾಪಟ್ಟಿಗೆ ಎಲ್ಲಾ ದಿಕ್ಕುಗಳಿಂದಲೂ ಸಂಪರ್ಕ ಕಡಿತಗೊಳಿಸಿದ್ದು, ಶೀಘ್ರದಲ್ಲೇ ಭೂದಾಳಿ ನಡೆಸುವುದಾಗಿ ಪ್ರಕಟಿಸಿದೆ. ಜೊತೆಗೆ ಗಾಜಾ ಪಟ್ಟಿ ಪ್ರದೇಶವನ್ನು ‘ಟೆಂಟ್ ಸಿಟಿ’ ಮಾಡುವುದಾಗಿ ಎಚ್ಚರಿಸಿದೆ.

ಇಂಥ ಎಚ್ಚರಿಕೆ ನಡುವೆಯೇ ತನ್ನ ವೈಮಾನಿಕ ದಾಳಿ ಮೇಲೆ ನಿಗಾ ಇಡಲು ಉಗ್ರರು ಬಳಸುತ್ತಿದ್ದ ‘ಅಡ್ವಾನ್ಸ್ ಡಿಟೆಕ್ಷನ್ ಸಿಸ್ಟಂ’ ಅನ್ನು ಇಸ್ರೇಲಿಸೇನೆಸಂಪೂರ್ಣವಾಗಿ ನಿರ್ನಾಮ ಮಾಡಿದೆ. ಅಲ್ಲದೆ ಹಮಾಸ್‌ಗೆ ಹಣಕಾಸು ಪೂರೈಕೆ ಮಾಡುತ್ತಿದ್ದ 2 ಬ್ಯಾಂಕ್ ಶಾಖೆಗಳು, ಒಂದು ಸುರಂಗ, ಹಮಾಸ್ ಉಗ್ರರ ಕಾರ್ಯಾಚರಣೆಯ 2 ಕಮಾಂಡ್ ಕ್ಯಾಂಪ್ ಧ್ವಂಸ ಮಾಡಲಾಗಿದೆ.

ಆಯುಧ ಸಂಗ್ರಹಣಾ ವ್ಯವಸ್ಥೆ, ತರಬೇತಿಗೆ ಬಳಕೆಯಾಗುತ್ತಿದ್ದ 2 ಪ್ರದೇಶಗಳು, ಶಸ್ತ್ರಾಸ್ತ್ರ ಉತ್ಪಾದನಾ ಘಟಕಗಳನ್ನು ನಾಶ ಮಾಡಲಾಗಿದೆ ಎಂದು ಇಸ್ರೇಲ್ ಸೇನೆ ಹೇಳಿದೆ.

ಈ ನಡುವೆ ಕಳೆದ 5 ದಿನಗಳಿಂದ ನಡೆಯುತ್ತಿರುವ ಇಸ್ರೇಲ್-ಹಮಾಸ್ ಯುದ್ಧದಲ್ಲಿ ಮೃತಪಟ್ಟವರ ಸಂಖ್ಯೆ 2200 ಅನ್ನು ದಾಟಿದೆ. ಗಾಜಾ ನಗರ ಮಾತ್ರವಲ್ಲದೆ ಸುತ್ತಮುತ್ತಲ ಪ್ರದೇಶಗಳ ಮೇಲೂ ಇಸ್ರೇಲ್ ತೀವ್ರ ದಾಳಿ ನಡೆಸುತ್ತಿದ್ದು, ಕಟ್ಟಡಗಳು ನೆಲಸಮಗೊಂಡು ಅವು ಗಳಡಿಯಲ್ಲಿ ಅಸಂಖ್ಯ ಜನರು ಸಿಲುಕಿದ್ದಾರೆ ಎಂದು ಹೇಳಲಾಗಿದೆ. ಮತ್ತೊಂದೆಡೆ ಹಮಾಸ್ ಉಗ್ರರ ವಶದಲ್ಲಿ ರುವ 150 ಒತ್ತೆಯಾಳುಗಳ ಸ್ಥಿತಿ ಏನಾಗಿದೆ ಎಂಬ ಬಗ್ಗೆ ಇನ್ನು ಯಾವುದೇ ಮಾಹಿತಿ ಸಿಗದ ಕಾರಣ ಕುಟುಂಬ ಸದಸ್ಯರು ಆತಂಕದಲ್ಲೇ ದಿನ ಕಳೆಯುವಂತಾಗಿದೆ.

ಬಾಹ್ಯ ಸಂಪರ್ಕ ಕಳಕೊಂಡ ಹಮಾಸ್: 40 ಕಿ.ಮೀ. ಉದ್ದ ಹಾಗೂ 10 ಕಿ.ಮೀ. ಅಗಲದ, 23 ಲಕ್ಷ ಜನಸಂಖ್ಯೆಯ ಗಾಜಾಪಟ್ಟಿಯ ಒಂದು ದಿಕ್ಕಿನಲ್ಲಿ ಮೆಡಿಟರೇನಿಯನ್ ಸಮುದ್ರ ಹಾಗೂ ಇನ್ನುಳಿದ ಮೂರು ದಿಕ್ಕಿನಲ್ಲಿ ಇಸ್ರೇಲ್ ಇದೆ. ಒಂದು ತುದಿಯಲ್ಲಿ ಈಜಿಪ್ಟ್ ಜೊತೆಗೆ ಸಣ್ಣ ಗಡಿ ಇದೆ. ಪ್ಯಾಲೆಸ್ತೀನ್‌ನ ಆಡಳಿತದಲ್ಲಿದ್ದ ಗಾಜಾಪಟ್ಟಿಯನ್ನು 2007ರಲ್ಲಿ ಹಮಾಸ್ ಉಗ್ರರು ವಶಪಡಿಸಿಕೊಂಡ ಮೇಲೆ ಈಜಿಪ್ಟ್ ಕೂಡ ಆ ಗಡಿಯನ್ನು ಮುಚ್ಚಿದೆ. ಆದರೆ ಇಂಧನ, ಔಷಧ ಹಾಗೂ ತುರ್ತು ಅಗತ್ಯಗಳಿಗಾಗಿ ಆ ಗಡಿ ಸೀಮಿತ ಪ್ರಮಾಣದಲ್ಲಿ ಈಗಲೂ ಬಳಕೆಯಾಗುತ್ತಿತ್ತು. ಅದರ ಮೇಲೀಗ ಇಸ್ರೇಲ್ ಕ್ಷಿಪಣಿ ದಾಳಿ ನಡೆಸಿ ಬಂದ್ ಮಾಡಿದೆ. ಹೀಗಾಗಿ ಗಾಜಾಪಟ್ಟಿ ಬಾಹ್ಯ ಜಗತ್ತಿನಿಂದ ಸಂಪೂರ್ಣ ಸಂಪರ್ಕ ಕಳೆದುಕೊಂಡಿದೆ.

ವಿದ್ಯುತ್, ಇಂಧನ, ಔಷಧ ಇಲ್ಲ: ಗಾಜಾಪಟ್ಟಿಯಲ್ಲಿ ವಿದ್ಯುತ್‌ ಪೂರೈಕೆಗೆ ಸಂಪೂರ್ಣವಾಗಿ ಜನರೇಟರ್ ಗಳನ್ನೇ ಅವಲಂಬಿಸಲಾಗಿದೆ. ಇಂಧನ ಪೂರೈಕೆ ಸ್ಥಗಿತಗೊಂಡಿರುವುದರಿಂದ ಅವು ಬಂದ್ ಆಗಿವೆ. ಹೀಗಾಗಿ ಇಡೀ ಗಾಜಾಪಟ್ಟಿಯೀಗ ಕತ್ತಲಲ್ಲಿ ಸಿಲುಕಿದೆ. ಹೊರಗಿನಿಂದ ಔಷಧಗಳೂ ಪೂರೈಕೆಯಾಗುವುದು ನಿಂತಿದೆ. ಹೀಗಾಗಿ ಯುದ್ಧದಿಂದಾಗಿ ಆಸ್ಪತ್ರೆಗಳಿಗೆ ದಾಖ ಲಾಗುತ್ತಿರುವ ಜನರಿಗೆ ಚಿಕಿತ್ಸೆ ನೀಡಲು ಔಷಧಗಳು ಇಲ್ಲ ದಂತಾಗಿದೆ. ಆಸ್ಪತ್ರೆಗಳು ಕೂಡ ಕತ್ತಲಿನಲ್ಲಿ ಮುಳುಗಿವೆ.

ಇಸ್ಲಾಮಿಕ್ ವಿವಿ ಮೇಲೆ ದಾಳಿ: ಇಸ್ರೇಲ್‌ನ ಕ್ಷಿಪಣಿಗಳು 3 ಗಾಜಾಪಟ್ಟಿಯಲ್ಲಿರುವ ಇಸ್ಲಾಮಿಕ್ ವಿವಿ ಮೇಲೆ ದಾಳಿ ನಡೆಸಿ ನೆಲಸಮಗೊಳಿಸಿವೆ. ಈ ವಿಶ್ವವಿದ್ಯಾಲಯವು ಹಮಾಸ್ ಉಗ್ರರಿಗೆ ತರಬೇತಿ ಕ್ಯಾಂಪ್ ರೀತಿ ಬಳಕೆಯಾಗುತ್ತಿತ್ತು. ಜೊತೆಗೆ ಅಲ್ಲಿ ಶಸ್ತ್ರಾಸ್ತ್ರಗಳನ್ನು ಕೂಡ ತಯಾರಿಸಲಾಗುತ್ತಿತ್ತು. ಭಯೋತ್ಪಾದನೆಗೆ ಹಣ ಸಂಗ್ರಹಿಸಲು ಅಲ್ಲಿ ಹಮಾಸ್ ಉಗ್ರರು ವಿಚಾರ ಸಂಕಿರಣಗಳನ್ನು ನಡೆಸುತ್ತಿದ್ದರು. ಅದನ್ನು ನಾಶಪಡಿಸುವ ಮೂಲಕ ಹಮಾಸ್‌ಗೆ ಇಸ್ರೇಲ್ ದೊಡ್ಡ ಆಘಾತ ನೀಡಿದೆ.

ಭಾರತೀಯರ ರಕ್ಷಣೆಗೆ ಆಪರೇಷನ್ ಅಜಯ್‌: ಇಸ್ರೇಲ್‌ನಲ್ಲಿ ಸಿಕ್ಕಿಬಿದ್ದಿರುವ ಭಾರತೀಯ ರಕ್ಷಣೆಗೆ ಕೇಂದ್ರ ಸರ್ಕಾರ ‘ಆಪರೇಷನ್‌ ಅಜಯ್’ ಹೆಸರಿನಲ್ಲಿ ಕಾರ್ಯಾಚರಣೆ ನಡೆಸಲು ನಿರ್ಧರಿಸಿದೆ. ಇಸ್ರೇಲ್‌ನಲ್ಲಿ ಅಂದಾಜು 18000 ಭಾರತೀಯರು ಇದ್ದಾರೆ ಎನ್ನಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ವಿದೇಶಾಂಗ ಸಚಿವ ಎಸ್‌. ಜೈಶಂಕರ್, ‘ಇಸ್ರೇಲ್‌ನಲ್ಲಿದ್ದು ಭಾರತಕ್ಕೆ ಮರಳಲು ಬಯಸಿರುವ ನಾಗರಿಕರಿಗಾಗಿ `ಆಪರೇಷನ್ ಅಜಯ್‌’ ಕಾರ್ಯಾಚರಣೆಗೆ ನಿರ್ಧರಿಸಲಾಗಿದೆ. ಇದಕ್ಕಾಗಿವಿಶೇಷವಿಮಾನಮತ್ತು ಇತರೆ ವ್ಯವಸ್ಥೆಗಳನ್ನು ಸನ್ನದ್ದ ಸ್ಥಿತಿಯಲ್ಲಿಡಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

ಈ ನಡುವೆ, ಭಾರತೀಯರ ಕರೆತರಲು ಮೊದಲ ವಿಮಾನ ಗುರುವಾರ ಇಸ್ರೇಲ್‌ಗೆ ಪ್ರಯಾಣ ಬೆಳೆಸಲಿದೆ ಎಂದು ವರದಿಗಳು ತಿಳಿಸಿವೆ.

Pic: Daily Loud

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!