ಬೆಂಗಳೂರು, (ಅ.12): ಮಳೆ ಕೊರತೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಉಂಟಾಗಿರುವ ವಿದ್ಯುತ್ ಕೊರತೆ ನೀಗಿಸಲು ಹೆಚ್ಚುವರಿ ವಿದ್ಯುತ್ ಪೂರೈಸುವಂತೆ ರಾಜ್ಯ ಇಂಧನ ಖಾತೆ ಸಚಿವ ಕೆ.ಜೆ.ಜಾರ್ಜ್ ಅವರು, ಕೇಂದ್ರ ವಿದ್ಯುತ್, ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಆರ್.ಕೆ.ಸಿಂಗ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಇಂದು ನವದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿಯಾಗಿರುವ ಜಾರ್ಜ್ ಅವರು, ಕರ್ನಾಟಕದ ಇಂಧನ ಪರಿಸ್ಥಿತಿಯ ಕುರಿತು ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತಂತೆ ಜಾರ್ಜ್ ಎಕ್ಸ್ (ಟ್ವಿಟ್) ಮಾಡಿದ್ದು, ಕೇಂದ್ರೀಯ ಉತ್ಪಾದನಾ ಕೇಂದ್ರಗಳಲ್ಲಿ ನಮ್ಮ ರಾಜ್ಯಕ್ಕೆ ಹೆಚ್ಚಿನ ಪಾಲು ನೀಡುವ ಮೂಲಕ ಕರ್ನಾಟಕದ ಹೆಚ್ಚುವರಿ ವಿದ್ಯುತ್ ಅಗತ್ಯವನ್ನು ಪೂರೈಸಲು ಸಹಕಾರ ನೀಡಬೇಕೆಂದು ವಿನಂತಿಸಿದೆ ಎಂದಿದ್ದಾರೆ.
ಈ ವೇಳೆ ಕರ್ನಾಟಕ ಸರಕಾರದ ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಇದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….