ಲಕ್ನೋ, (ಅ.13): ಉತ್ತರಪ್ರದೇಶದಲ್ಲಿ ಇಸ್ರೇಲ್ – ಹಮಾಸ್ ಯುದ್ಧದ ಕುರಿತಂತೆ ಭಾರತ ಸರ್ಕಾರದ ನಿಲುವಿನ ವಿರುದ್ಧ ಮಾತಾಡುವ ಮುನ್ನ ಯೋಚಿಸಬೇಕಿದೆ. ಏಕೆಂದರೆ ಸಾಮಾಜಿಕ ಜಾಲತಾಣಗಳಲ್ಲಿ ಬೇಕಾಬಿಟ್ಟಿ ಪೋಸ್ಟ್ ಬರೆಯುವ ಮತ್ತು ಹೇಳಿಕೆ ನೀಡುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ.
ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ಭಯೋತ್ಪಾದಕ ಸಂಘಟನೆ ಹಮಾಸ್ ನಡುವೆ ನಡೆಯುತ್ತಿರುವ ಯುದ್ಧದ ಪರಿಣಾಮ ಭಾರತದಲ್ಲೂ ಕಾಣುತ್ತಿದೆ. ಇತ್ತೀಚೆಗೆ, ಪ್ಯಾಲೆಸ್ತೀನ್ ಮತ್ತು ಹಮಾಸ್ ಅನ್ನು ಬೆಂಬಲಿಸಿ ಕೆಲವರು ಅಲಿಘರ್ ವಿಶ್ವವಿದ್ಯಾಲಯದಲ್ಲಿ ಮೆರವಣಿಗೆಯನ್ನು ನಡೆಸಿದ್ದರು, ಈ ಬಗ್ಗೆ ಯೋಗಿ ಸರ್ಕಾರವು ಇದೀಗ ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದೆ.
ಭಾರತ ಸರ್ಕಾರ ನಿಲುವಿನ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅಥವಾ ಧಾರ್ಮಿಕ ಸ್ಥಳಗಳಲ್ಲಿ ಯಾವುದೇ ಹೇಳಿಕೆ ನೀಡಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಯೋಗಿ ಎಚ್ಚರಿಕೆ ನೀಡಿದ್ದಾರೆ.
ಇಸ್ರೇಲ್-ಹಮಾಸ್ ಯುದ್ಧದಲ್ಲಿ ಭಾರತ ಸರ್ಕಾರದ ನಿಲುವಿಗೆ ವಿರುದ್ಧವಾದ ಯಾವುದೇ ಹೇಳಿಕೆ ಅಥವಾ ಚಟುವಟಿಕೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಯೋಗಿ ಸರ್ಕಾರ ಆದೇಶಿಸಿದೆ.
ಯೋಗಿ ಆದಿತ್ಯನಾಥ್ ಕಟ್ಟುನಿಟ್ಟಿನ ಕ್ರಮದ ಸೂಚನೆ ನೀಡಿದರು: ನವರಾತ್ರಿ ಮತ್ತು ಮುಂಬರುವ ಹಬ್ಬಗಳ ಕುರಿತು ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಎಂ ಯೋಗಿ ಎಲ್ಲಾ ಜಿಲ್ಲೆಗಳ ಡಿಎಂಗಳೊಂದಿಗೆ ಸಭೆ ನಡೆಸಿದರು.
ಈ ವೇಳೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಸ್ರೇಲ್ ಯುದ್ಧದಲ್ಲಿ ಭಾರತ ಸರ್ಕಾರದ ಅಭಿಪ್ರಾಯಕ್ಕೆ ವಿರುದ್ಧವಾಗಿ ಯಾವುದೇ ಚಟುವಟಿಕೆ ನಡೆಸಬಾರದು ಎಂದು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….