ಹೊಸಪೇಟೆ, (ಅ.13): ಪ್ಯಾಲೆಸ್ಟಿನ್ ಪರವಾಗಿ ತನ್ನ ವಾಟ್ಸಾಪ್‌ನಲ್ಲಿ ಸ್ಟೇಟಸ್ ಹಾಕಿಕೊಂಡಿದ್ದ ಹಾಗೂ ಮೊಬೈಲ್‌ನಲ್ಲಿ ಪ್ಯಾಲೆಸ್ಟೀನ್ ದೇಶದ ಜನರಿಗೆ ಬೆಂಬಲ ನೀಡುವಂತಹ ವಿಡಿಯೊ ಇಟ್ಟುಕೊಂಡಿದ್ದ ಆರೋಪದ ಮೇರೆಗೆ ಅಲ್ಪಸಂಖ್ಯಾತ ಇಲಾಖೆ ಕಚೇರಿಯಲ್ಲಿ ಅಟೆಂಡರ್ ಕೆಲಸ ಮಾಡುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಇಸ್ರೇಲ್ ಪ್ಯಾಲೆಸ್ಟೀನ್ ಯುದ್ಧದ ಬೆನ್ನಲ್ಲೇ ಪ್ಯಾಲೆಸ್ಟಿನ್ ಪರವಾಗಿ ತನ್ನ ವಾಟ್ಸಾಪ್‌ನಲ್ಲಿ ಸ್ಟೇಟಸ್ ಹಾಕಿಕೊಂಡಿದ್ದ ಹಾಗೂ ಮೊಬೈಲ್‌ನಲ್ಲಿ ಪ್ಯಾಲೆಸ್ಟೀನ್ ದೇಶದ ಜನರಿಗೆ ಬೆಂಬಲ ನೀಡುವಂತಹ ವಿಡಿಯೊ ಇಟ್ಟುಕೊಂಡಿದ್ದ ಆರೋಪದ ಮೇರೆಗೆ ಇಲ್ಲಿನ ಸಿದ್ದಲಿಂಗಪ್ಪ ಚೌಕಿಯ ನಿವಾಸಿ, ಅಲ್ಪಸಂಖ್ಯಾತ ಇಲಾಖೆ ಕಚೇರಿಯಲ್ಲಿ ಅಟೆಂಡರ್ ಕೆಲಸ ಮಾಡುತ್ತಿದ್ದ ಆಲಂ ಬಾಷಾ (20 ವರ್ಷ) ಎಂಬಾತನನ್ನು ಪಟ್ಟಣ ಪೊಲೀಸ್ ಠಾಣೆಯ ಪೊಲೀಸರು ಗುರುವಾರ ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಪಿಯ ವಿರುದ್ಧ ಸ್ವಯಂ ಪ್ರೇರಣೆಯಿಂದ ಪ್ರಕರಣ ದಾಖಲಿಸಿ ತಹಶೀಲ್ದಾರ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಮುಂದಿನ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧಿಕಾರಿಗಳು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಆರೋಪಿ ಇಂತಹ ಸ್ಟೇಟಸ್ ಇಟ್ಟುಕೊಂಡು ರಾಜದ್ರೋಹದಂತಹ ಕೃತ್ಯ ಪ್ರಚಾರ ಮಾಡುತ್ತಿದ್ದುದು ಗೊತ್ತಾಗಿದೆ. ಇದರಿಂದ ಸಾರ್ವಜನಿಕ ಶಾಂತಿಗೆ ಭಂಗವಾಗುವ ಸಾಧ್ಯತೆ ಇದೆ ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….