ಮೈಸೂರು, (ಅ.13): ಮಹಿಷ ದಸರಾ ಹೆಸರಿನಲ್ಲಿ ತಾಯಿ ಚಾಮುಂಡೇಶ್ವರಿಗೆ ಅವಾಚ್ಯ ಶಬ್ದಗಳಿಂದ ಅಪಮಾನ ಮಾಡ್ತಾರೆ. ಈ ಕಾರಣಕ್ಕೆ ನಾನು ಮಹಿಷ ದಸರಾ ವಿರೋಧ ಮಾಡುತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.
ಅವರು ಫೇಸ್‌ಬುಕ್ ಲೈವ್‌ನಲ್ಲಿ ಮಾತನಾಡಿ, ಈ ಮಹಿಷ ದಸರಾ ತಂಡ ಚಾಮುಂಡಿಗೆ ರವಿಕೆ ಹಾಕೋನು ಗಂಡು, ಸೀರೆ ಉಡಿಸೋನು ಗಂಡಸು ಅಂತ ಕೆಟ್ಟದಾಗಿ ಮಾತನಾಡುತ್ತಾರೆ. ನಿಮ್ಮ ತಾಯಿ ಬಗ್ಗೆ ಹೀಗೆ ಕೆಟ್ಟದಾಗಿ ಮಾತನಾಡಿದ್ರೆ ಯಾರಾದ್ರೂ ಒಪ್ಪಿಕೊಳೀರಾ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು, ಮಹಿಷನ ಬಗ್ಗೆ ಇವರಲ್ಲಿ ಯಾವುದೇ ದಾಖಲೆ ಇಲ್ಲ. ದಲಿತರೇ ಚಾಮುಂಡಿ ಹಬ್ಬವನ್ನು ಹೆಚ್ಚು ಮಾಡೋದು. ಈಗ ರಾಜಕೀಯಕ್ಕಾಗಿ ನನ್ನನ್ನು ದಲಿತ ವಿರೋಧಿ ಎಂದು ಬಿಂಬಿಸಲು ಹೊರಟಿದ್ದಾರೆ ಎಂದು ಅವರು ಕಿಡಿಕಾರಿದರಲ್ಲದೆ, ಮಹಿಷಯಾವಾಗ ದಲಿತನಾದ, ಬೌದ್ಧ ಬಿಕ್ಕು ಆಗಿದ್ದ? ತಾಯಿ ಚಾಮುಂಡಿ ಉಲ್ಲೇಖ ಬರೋದು ಕೃತ ಯುಗದಲ್ಲಿ, ಬುದ್ದ ಬಂದಿದ್ದು ಕಲಿಯುಗದಲ್ಲಿ, ಇವರು ಹೇಳುವ ವಿಚಾರಕ್ಕೂ ಕಾಲಮಾನಕ್ಕೂ ತಾಳಮೇಳವಿಲ್ಲ. ಇದೆಲ್ಲ ಕಪೋಲಕಲ್ಪಿತ ಎಂದರು.
ಮಹಿಷಾ ಯಾವಾಗ ದಲಿತನಾದ. ಮಹಿಷಾ ಬೌದ್ಧ ಬಿಕ್ಕು ಆಗಿದ್ದ ಅಂತ ಹೇಳುತ್ತಾರೆ. ತಾಯಿ ಚಾಮುಂಡಿ ಉಲ್ಲೇಖ ಬರುವುದು ಕೃತ ಯುಗದಲ್ಲಿ. ಬುದ್ದ ಬಂದಿದ್ದು ಕಲಿಯುಗದಲ್ಲಿ. ಅಶೋಕ ಇದ್ದಿದ್ದು ಕ್ರಿ.ಪೂ 3 ನೇ ಶತಮಾನದಲ್ಲಿ. ಇವರ ಹೇಳುವ ವಿಚಾರ ಸಮಯಕ್ಕೆ ತಾಳ ಮೇಳ ಇಲ್ಲ. ಇದೆಲ್ಲ ಕಪೋಲ ಕಲ್ಪಿತ ವಿಚಾರಗಳು ಎಂದು ವಾಗ್ದಾಳಿ ಮಾಡಿದ್ದಾರೆ.
ಹಿಂದೂ ಧರ್ಮ ಒಡೆಯುವ ಪ್ರಯತ್ನಕ್ಕೆ ಇದೆಲ್ಲ ಮಾಡುತ್ತಿದ್ದಾರೆ. ಕೆಲವರು ನನ್ನ ಬಗ್ಗೆ ವಿರೋಧ ಮಾಡುತ್ತಿದ್ದಾರೆ. ಇದೆಲ್ಲ ವೈಯಕ್ತಿಕ ಲಾಭ ನಷ್ಟದಿಂದ ಆಗಿರುವುದು. ನಿಜವಾದ ದಲಿತ ವಿರೋಧಿಗಳು ನೀವುಗಳು. ಲಲಿತ ನಾಯಕ್ರಿಂದ ಉದ್ಘಾಟನೆ ಮಾಡಿಸಲು ಮುಂದಾದ್ರಿ. ಆಕೆಯ ಪುತ್ರ ಅಂಬೇಡ್ಕರ್ ಪುತ್ಥಳಿಗೆ ಮದ್ಯ ಕುಡಿಸಿದ್ದ. ನೀವು ಅಂಬೇಡ್ಕರ್ ವಾದಿಗಳು ಅಂತಿರಾ, ಆದರೆ ಅಂಬೇಡ್ಕರ್ ಪುತ್ಥಳಿಗೆ ಮದ್ಯ ಕುಡಿಸಿದ ತಾಯಿಯಿಂದ ಉದ್ಘಾಟನೆ ಮಾಡಿಸುತ್ತಿದ್ದೀರಿ. ಸುಮನೆ ನನ್ನ ದಲಿತ ವಿರೋಧಿ ಅಂತ ಹೇಳುವುದು ಬೇಡ ಎಂದಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….