ಬೆಂಗಳೂರು, (ಅ.13): ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹುಬ್ಬಳ್ಳಿಗೆ ಹೋಗಿದ್ದ ವಿಮಾನ ಲ್ಯಾಂಡ್ ಆಗದೇ ವಾಪಸ್ ಆಗಮಿಸಿದೆ.
ಇದರಿಂದ ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ ಪ್ರಯಾಣಿಕರು ಅರೇ ಇದೇನಿದು ವಿಮಾನ ವಾಪಸ್ ಬೆಂಗಳೂರಿಗೆ ಬಂದಿದೆ ಎಂದು ಹೌಹಾರಿದ್ದಾರೆ.
ಹುಬ್ಬಳ್ಳಿಯಲ್ಲಿ ಮಳೆಯಾಗುತ್ತಿದೆ. ಇದರಿಂದ ವಿಮಾನವನ್ನು ಲ್ಯಾಂಡ್ ಮಾಡಲು ಸಾಧ್ಯವಾಗದಿದ್ದರಿಂದ ಪೈಲೆಟ್, ವಿಮಾನವನ್ನು ವಾಪಸ್ ಬೆಂಗಳೂರಿಗೆ ತಿರುಗಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ ಪ್ರಯಾಣಿಕರು ಕಂಗಾಲಾಗಿದ್ದಾರೆ.
ಶುಕ್ರವಾರ ಬೆಳಗ್ಗೆ 05:50ಕ್ಕೆ 6E7227 ನಂಬರಿನ ಇಂಡಿಗೋ ವಿಮಾನ ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಹುಬ್ಬಳ್ಳಿಗೆ ತೆರಳಿದ್ದು, ಬೆಳಗ್ಗೆ 7 ಗಂಟೆಗೆ ಲ್ಯಾಂಡ್ ಆಗಬೇಕಿತ್ತು. ಆದರೆ, ಹುಬ್ಬಳ್ಳಿಯಲ್ಲಿ ಹವಾಮಾನ ವೈಪರೀತ್ಯ ಕಾರಣದಿಂದ ವಿಮಾನವನ್ನು ಲ್ಯಾಂಡ್ ಮಾಡಲು ಪೈಲೆಟ್ಗೆ ಸರಿಯಾಗಿ ರನ್ವೇ ಕಾಣಿಸಿಲ್ಲ.
ಇದರಿಂದ ವಿಮಾನ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗದೇ ವಾಪಸ್ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿದೆ. ಇದರಿಂದ ಹುಬ್ಬಳ್ಳಿಗೆ ಹೋಗಬೇಕೆಂದು ಸಾವಿರಾರು ರೂಪಾಯಿ ಕೊಟ್ಟು ವಿಮಾನ ಬುಕ್ ಮಾಡಿದ್ದ ಪ್ರಯಾಣಿಕರು ಪರದಾಡುವಂತಾಗಿದೆ.
(ಸಾಂದರ್ಭಿಕ ಚಿತ್ರ ಬಳಸಲಾಗಿದೆ)
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….