ಲೋಡ್‌ ಶೆಡ್ಡಿಂಗ್‌ ಆಗದಂತೆ ಎಚ್ಚರಿಕೆ: ರೈತರಿಗೆ ಕನಿಷ್ಠ ಐದು ಗಂಟೆಗಳ ಕಾಲ ವಿದ್ಯುತ್‌ – ಸಿಎಂ ಖಡಕ್ ಸೂಚನೆ

ಬೆಂಗಳೂರು, (ಅ.13): ರೈತರಿಗೆ ವಿದ್ಯುತ್ ಕೊರತೆ ಆಗದಂತೆ ಆಕಸ್ಮಿಕ‌ ಸಂದರ್ಭಕ್ಕೆ ಅಗತ್ಯವಾದ ಯೋಜನೆ/ ಸಿದ್ಧತೆ ಏಕೆ ಮಾಡಿಕೊಂಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂಧನ ಇಲಾಖೆ ಅಧಿಕಾರಿಗಳನ್ನು ಖಾರವಾಗಿ ಪ್ರಶ್ನಿಸಿದರು. 

ಗೃಹ ಕಚೇರಿ ಕೃಷ್ಣಾದಲ್ಲಿ  ಇಂದು ಇಂಧನ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸುವ ವೇಳೆಯಲ್ಲಿ ಹಲವು ಜಿಲ್ಲೆಗಳಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗಳನ್ನು ಪ್ರಸ್ತಾಪಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. 

ಇರುವ ವಿದ್ಯುತ್ ಅನ್ನು ವೈಜ್ಞಾನಿಕವಾಗಿ ಬೇರೆ ಬೇರೆ ಬ್ಯಾಚ್ ಗಳಲ್ಲಿ ಸರಬರಾಜು ಮಾಡಲು ಕ್ರಮ ವಹಿಸಬೇಕು. ಮೊದಲೇ ಹೀಗೆ ಮಾಡಿದ್ದರೆ ವಿದ್ಯುತ್ ಕೊರತೆಯ ನಡುವೆಯೂ ರೈತರಿಗೆ ಸಮಸ್ಯೆ ಆಗದಂತೆ ನಿರ್ವಹಿಸಬಹುದಿತ್ತು. ಕಚೇರಿಯಲ್ಲೇ ಕುಳಿತರೆ ಸಮಸ್ಯೆ ಬಗೆಹರಿಯುವುದಿಲ್ಲ. ಚೀಫ್ ಎಂಜಿನಿಯರ್ ಗಳು ಫೀಲ್ಡ್ ಗೆ ಹೋಗಬೇಕು. ಪರಿಸ್ಥಿತಿಯನ್ನು ರೈತರಿಗೆ ಮನವರಿಕೆ ಮಾಡಿಸಿ ಅವರ ಸಮಸ್ಯೆಗಳನ್ನು ಆಲಿಸಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು. 

ಹಿಂದಿನ ಸರ್ಕಾರದಲ್ಲಿ ಉತ್ತಮವಾದ ಅಗತ್ಯ ಮಳೆ ಆಗಿದ್ದರೂ ವಿದ್ಯುತ್ ಉತ್ಪಾದನೆ ಮಾಡಲಿಲ್ಲ. ನಮ್ಮ ಸರ್ಕಾರ ಬಂದ ಮೇಲೆ ಮಳೆ ಕೊರತೆ ಆಗಿ, ಬರಗಾಲ ಬಂದಿದೆ. ಇದನ್ನು ರೈತರಿಗೆ ಮನವರಿಕೆ ಮಾಡಿಸಬೇಕು. ರೈತರಿಗೆ ಯಾವ ವೇಳೆ ಎಷ್ಟು ವಿದ್ಯುತ್ ಅಗತ್ಯವಿದೆ ಎನ್ನುವುದನ್ನು ಸರಿಯಾಗಿ ಅರ್ಥಮಾಡಿಕೊಂಡು ಇರುವ ವಿದ್ಯುತ್ ಅನ್ನೇ ಅವರಿಗೆ ಅಗತ್ಯ ವೇಳೆಯಲ್ಲಿ ಸರಬರಾಜು ಮಾಡಬೇಕು ಎಂದು ಸೂಚಿಸಿದರು. 

ವಿದ್ಯುತ್ ಕಳ್ಳತನ ಮತ್ತು ವಿದ್ಯುತ್ ಸೋರಿಕೆ ಬಗ್ಗೆ ಏನು ಕ್ರಮ ಕೈಗೊಂಡಿದ್ದೀರಿ ? ವಿಚಕ್ಷಣಾ ದಳದಲ್ಲಿ ಎಷ್ಟು SP ಗಳು ಇದ್ದೀರಿ ? ಏನು ಮಾಡುತ್ತಿದ್ದೀರಿ? ಇವರು ಎಷ್ಟು ವಿದ್ಯುತ್ ಕಳ್ಳತನ ಪತ್ತೆ ಹಚ್ಚಿದ್ದಾರೆ ಎನ್ನುವುದನ್ನು ನಿಗಾ ವಹಿಸಿ ಕ್ರಿಯಾಶೀಲವಾಗಿ ಕೆಲಸ ಮಾಡಲು ಸೂಚನೆ ನೀಡಿ ಎನ್ನುವ ನಿರ್ದೇಶನವನ್ನು ಮುಖ್ಯಮಂತ್ರಿಗಳು ನೀಡಿದರು. 

ಸಭೆಯಲ್ಲಿ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತಾ, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ವಿದ್ಯುತ್‌ ಉತ್ಪಾದನೆ, ಪ್ರಸರಣೆ ಮತ್ತು ವಿತರಣೆಗೆ ಸಂಬಂಧಿಸಿದ ಸಂಸ್ಥೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. 

ಸಭೆಯ ಮುಖ್ಯಾಂಶಗಳು

1. ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ವಿದ್ಯುತ್‌ ಬೇಡಿಕೆ ಗಣನೀಯವಾಗಿ ಹೆಚ್ಚಿರುವುದರಿಂದ ರೈತರಿಗೆ ಪ್ರತಿದಿನ ಮೂರು ಪಾಳಿಗಳಲ್ಲಿ ನಿರಂತರ ಐದು ಗಂಟೆಗಳ ಕಾಲ ವಿದ್ಯುತ್‌ ಪೂರೈಕೆ ಮಾಡುವಂತೆ ಹಾಗೂ ಲೋಡ್‌ ಶೆಡ್ಡಿಂಗ್‌ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಸ್ಕಾಂಗಳ ಎಂ.ಡಿ.ಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. 

2. ಕೃಷಿ ಕ್ಷೇತ್ರದಲ್ಲಿ ವಿದ್ಯುತ್‌ಗೆ ಬೇಡಿಕೆ ಹೆಚ್ಚಾಗಿದ್ದು, ರೈತರಿಗೆ ಕನಿಷ್ಠ ಐದು ಗಂಟೆ ನಿರಂತರ ವಿದ್ಯುತ್‌ ಒದಗಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. 

3. ಲಭ್ಯವಿರುವ ವಿದ್ಯುತ್ತಿನ ದಕ್ಷ ಹಂಚಿಕೆಯೂ ಅತಿ ಮುಖ್ಯವಾಗಿದ್ದು, ಎಸ್ಕಾಂಗಳ ಎಂ.ಡಿ.ಗಳು ಈ ಕುರಿತು ಹೆಚ್ಚಿನ ನಿಗಾ ವಹಿಸಿ ರೈತರಿಗೆ ತೊಂದರೆಯಾಗದಂತೆ ಕ್ರಮ ವಹಿಸಬೇಕು. ಎಲ್ಲ ಮುಖ್ಯ ಎಂಜಿನಿಯರುಗಳನ್ನು ಜಿಲ್ಲೆಗೊಬ್ಬರಂತೆ ನೋಡಲ್‌ ಅಧಿಕಾರಿಗಳಾಗಿ ನೇಮಕ ಮಾಡಲಾಗಿದ್ದು, ಅವರು ನಿರಂತರ 5 ಗಂಟೆ ವಿದ್ಯುತ್‌ ಪೂರೈಕೆ ಯಾವುದೇ ಅಡಚಣೆಯಿಲ್ಲದೆ ಆಗುವಂತೆ ಖಾತರಿಪಡಿಸಬೇಕು ಎಂದು ಸೂಚಿಸಿದರು.

4. ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಇಂದಿನ ಸಭೆಯ ತೀರ್ಮಾನಗಳ ಪಾಲನೆಯಾಗುತ್ತಿರುವುದನ್ನು ಖಾತರಿಪಡಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.

5. ಕಳೆದ ಐದು ವರ್ಷಗಳಿಂದ ವಿದ್ಯುತ್‌ ಉತ್ಪಾದನೆಯ ಸ್ಥಾಪಿತ ಸಾಮರ್ಥ್ಯ ಹೆಚ್ಚಳ ಕೇವಲ 4000 ಮೆಗಾವ್ಯಾಟ್ ನಷ್ಟು ಮಾತ್ರ ಇದೆ. ರಾಜ್ಯದ ಒಟ್ಟಾರೆ ವಿದ್ಯುತ್‌ ಉತ್ಪಾದನಾ ಸಾಮರ್ಥ್ಯ 32,000 ಮೆಗಾವ್ಯಾಟ್‌ ಇದ್ದರೂ ಇದರಲ್ಲಿ 16 ಸಾವಿರ ಮೆಗಾವ್ಯಾಟ್‌ ಸೌರ ವಿದ್ಯುತ್‌ ಆಗಿದ್ದು, ಇದು ಹಗಲು ಹೊತ್ತಿನಲ್ಲಿ ಮಾತ್ರ ಉತ್ಪಾದನೆ ಆಗುವುದರಿಂದ ಬೇಡಿಕೆ ನಿರ್ವಹಣೆಯಲ್ಲಿ ವ್ಯತ್ಯಯವಾಗುತ್ತಿದೆ. ಜೊತೆಗೆ ಕಲ್ಲಿದ್ದಲಿನಲ್ಲಿ ಕೆಲವು ಸಮಸ್ಯೆಗಳಿದ್ದುದನ್ನು ನಿವಾರಿಸಲಾಗಿದ್ದು, ಇದೀಗ ಆಮದು ಕಲ್ಲಿದ್ದಲು ಖರೀದಿಗೆ ಟೆಂಡರ್‌ ಕರೆಯಲಾಗಿದೆ ಎಂದು ಅಧಿಕಾರಿಗಳು ವಿವರಿಸಿದರು.

6. IEX/ BILATERAL ನಲ್ಲಿ ವಿದ್ಯುತ್‌ ಪಡೆಯಲು ಕ್ರಮ: ನವೆಂಬರ್‌ನಿಂದ  ಉತ್ತರ ಪ್ರದೇಶದಿಂದ 300 ಮೆ.ವ್ಯಾ., ಪಂಜಾಬ್‌ ನಿಂದ 600 ಮೆ.ವ್ಯಾ. ವಿದ್ಯುತ್‌ ಪಡೆಯಲಾಗುವುದು. ಕೆ.ಇ.ಆರ್.ಸಿ.. ಅನುಮೋದನೆಯೊಂದಿಗೆ 1500 ಮೆಗಾವ್ಯಾಟ್‌ ಅಲ್ಪಾವಧಿ ವಿದ್ಯುತ್‌ ಖರೀದಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. 

7. ರಾಜ್ಯದಲ್ಲಿನ ವಿದ್ಯುತ್‌ ಉತ್ಪಾದಕರಿಂದ ವಿದ್ಯುತ್‌ ಪಡೆಯಲು ರಾಷ್ಟ್ರೀಯ ವಿಪತ್ತಿನಡಿಯಲ್ಲಿ ವಿದ್ಯುತ್‌ ಕಾಯ್ದೆಯ ಸೆಕ್ಷನ್‌ 11ನ್ನು ಜಾರಿಗೊಳಿಸಲಾಗಿದೆ. ಆ ಮೂಲಕ ವಿದ್ಯುತ್‌ ಕೊರತೆಯನ್ನು ನಿವಾರಿಸಲಾಗುವುದು ಎಂದು ಅಧಿಕಾರಿಗಳು ವಿವರಿಸಿದರು.

9.‌ ದಕ್ಷಿಣದ ಎಲ್ಲ ರಾಜ್ಯಗಳಲ್ಲಿ ವಿದ್ಯುತ್‌ ಕೊರತೆ ತೀವ್ರವಾಗಿದೆ. ಪ್ರತಿ ವರ್ಷ ನೀವು contingency plan ಹೊಂದಿರಬೇಕು. ಯುದ್ಧ ಕಾಲೇ ಶಸ್ತ್ರಾಭ್ಯಾಸ ಎಂಬಂತೆ ಕಾರ್ಯಪ್ರವೃತ್ತರಾದರೆ ಸಮಸ್ಯೆ ಬಗೆಹರಿಯುವುದಿಲ್ಲ ಎಂದು ಎಚ್ಚರಿಸಿದರು.

10. ಶೇ.13 ರಷ್ಟು ವಿದ್ಯುತ್‌ ವಿತರಣಾ ನಷ್ಟವಾಗುತ್ತಿದೆ. ವಿದ್ಯುತ್‌ ಕಳವು ಗೃಹ ಜ್ಯೋತಿಯಿಂದ ಕಡಿಮೆಯಾಗಿದೆ. ಕೈಗಾರಿಕಾ ವಿದ್ಯುತ್‌ ಕಳವು ಅತಿ ಕಡಿಮೆ ಎನ್ನುವುದು ಅಧಿಕಾರಿಗಳ ಅಭಿಪ್ರಾಯ. 

11. ಕಬ್ಬಿನ ಬೆಳೆಗೆ ನೀರು ಹಾಯಿಸಲು ಕೆಲವು ಜಿಲ್ಲೆಗಳಲ್ಲಿ ವಿದ್ಯುತ್‌ ಬೇಡಿಕೆ ಹೆಚ್ಚಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಕಬ್ಬಿನ ಕಟಾವು, ಅರೆಯುವಿಕೆ ಪ್ರಾರಂಭವಾದ ಕೂಡಲೇ ಬೇಡಿಕೆ ಇಳಿಕೆಯಾಗಲಿದ್ದು, ಕಬ್ಬು ಅರೆಯುವಿಕೆಯೊಂದಿಗೆ ಕೊ-ಜೆನರೇಶನ್‌ ನಿಂದ ವಿದ್ಯುತ್‌ ಲಭ್ಯವಾಗುತ್ತದೆ ಎಂದು ಸಭೆಗೆ ವಿವರಿಸಲಾಯಿತು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಮುಖ್ಯಮಂತ್ರಿಗಳು ಮಾನ್ಯ ಸುಪ್ರೀಂ ಕೋರ್ಟಿನ ಆದೇಶವನ್ನೂ ಸರಿಯಾಗಿ ಪಾಲನೆ ಮಾಡಿದಂತೆ ಕಾಣುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="112894"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!