ಈ ದಿನದ ವಿಶೇಷ; ಕರ್ನಾಟಕ ಸಂಭಮ 50 ವರ್ಷ

ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ವಿಶೇಷ ರೀತಿಯಲ್ಲಿ ಆಚರಿಸಲಾಗುತ್ತಿದೆ.

ನವೆಂಬರ್ 1 ರಂದು ಜಿಲ್ಲೆಯ ಎಲ್ಲಾ ಮನೆಗಳ ಮುಂದೆ ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿಗಳನ್ನು ಬಿಡಿಸಿ ಕರ್ನಾಟಕ ಸಂಭ್ರಮ-50 “ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಎಂಬ ಘೋಷ ವಾಕ್ಯವನ್ನು ಬರೆಯಲಾಗುತ್ತಿದೆ.

ನವೆಂಬರ್ 1 ರ ಬೆಳಿಗ್ಗೆ 9.00 ಗಂಟೆಗೆ ಎಲ್ಲಾ ಆಕಾಶವಾಣಿ ಕೇಂದ್ರಗಳಲ್ಲಿ (ರೇಡಿಯೋ) ನಾಡ ಗೀತೆಯನ್ನು ಪ್ರಸಾರ ಮಾಡಲಾಗುತ್ತಿದ್ದು, ಆ ಸಮಯದಲ್ಲಿ ಕನ್ನಡ ನಾಡಿನ ಸಮಸ್ತ ನಾಗರಿಕರು ಎದ್ದು ನಿಂತು ರಾಷ್ಟ್ರ ಗೀತೆಗೆ ಗೌರವ ಸಲ್ಲಿಸುವ ರೀತಿಯಲ್ಲಿ ನಾಡ ಗೀತೆಗೂ ಗೌರವ ಸಲ್ಲಿಸಬೇಕು ಎಂದು ಆದೇಶಿಸಲಾಗಿದೆ.

ನವೆಂಬರ್ 1 ರ ಸಂಜೆ 5.00 ಗಂಟೆಗೆ  ಜಿಲ್ಲೆಯ ಎಲ್ಲಾ ಗ್ರಾಮಗಳ ಮೈದಾನಗಳಲ್ಲಿ ಕೆಂಪು ಹಳದಿ ಬಣ್ಣದ ಗಾಳಿಪಟಗಳನ್ನು ಆಕಾಶಕ್ಕೆ ಹಾರಿ ಬಿಡುವ ಮೂಲಕ ಸುವರ್ಣ ಸಂಭ್ರಮ ಗಾಳಿಪಟ ಉತ್ಸವ ಆಚರಿಸಲು ಉದ್ದೇಶಿಸಲಾಗಿದೆ.

ನವೆಂಬರ್ 1 ರ ಸಂಜೆ 7.00 ಗಂಟೆಗೆ ಜಿಲ್ಲೆಯ ಎಲ್ಲಾ ಗ್ರಾಮಗಳ ಮನೆಗಳ ಮುಂದೆ, ಕಛೇರಿಗಳ ಮುಂದೆ ಹಾಗೂ ಅಂಗಡಿ-ಮಳಿಗೆಗಳ ಮುಂದೆ ಹಣತೆ’ (ದೀಪ) ಹಚ್ಚುವ ಮೂಲಕ ಕನ್ನಡ ಜ್ಯೋತಿ ಬೆಳಗುತ್ತಿದೆ.

ಕರ್ನಾಟಕದಲ್ಲಿ ಕನ್ನಡವನ್ನು ಮಾತನಾಡುವಂತಹ ವಾತಾವರಣ, ಕನ್ನಡದ ಅನಿವಾರ್ಯತೆಯನ್ನು ಸೃಷ್ಟಿಸುವ ಅಗತ್ಯವಿದೆ.

ನಾವೆಲ್ಲರೂ ಕನ್ನಡಿಗರು, ಕರ್ನಾಟಕದ ಏಕೀಕರಣವಾದಾಗಿನಿಂದ ವಿವಿಧ ಭಾಷೆಗಳನ್ನು ಮಾತನಾಡುವ ಜನರು ಕನ್ನಡ ನಾಡಿನಲ್ಲಿ ನೆಲೆಸಿದ್ದಾರೆ. ಈ ನಾಡಿನಲ್ಲಿ ವಾಸಿಸುವ ಪ್ರತಿಯೊಬ್ಬರೂ ಕೂಡ ಕನ್ನಡ ಭಾಷೆ ಮಾತನಾಡುವುದನ್ನು ಕಲಿಯಬೇಕು. ತಮಿಳುನಾಡು, ಕೇರಳ, ತೆಲಂಗಾಣ, ಉತ್ತರಪ್ರದೇಶ ರಾಜ್ಯಗಳಲ್ಲಿ ಅಲ್ಲಿನ ಭಾಷೆ ಕಲಿಯದೇ ಕನ್ನಡ ಮಾತನಾಡಿಕೊಂಡು ಬದುಕಲು ಸಾಧ್ಯವಿಲ್ಲ. ಆದರೆ ಕರ್ನಾಟಕದಲ್ಲಿ ಕನ್ನಡ ಬಾರದೇ ಇದ್ದರೂ ಬದುಕಬಹುದು. ಇದೇ ನಮ್ಮ ರಾಜ್ಯಕ್ಕೂ ಹಾಗೂ ಪಕ್ಕದ ರಾಜ್ಯಗಳಿಗೂ ಇರುವ ವ್ಯತ್ಯಾಸ.

ಕನ್ನಡಿಗರ ಔದಾರ್ಯ ಹೆಚ್ಚು: ಕರ್ನಾಟಕದ ಏಕೀಕರಣವಾಗಿ 68 ವರ್ಷಗಳು ಸಂದರೂ, ರಾಜ್ಯದಲ್ಲಿ ಕನ್ನಡದ ವಾತಾವರಣವನ್ನು ನಿರ್ಮಿಸಲು ಸಾಧ್ಯವಾಗದಿರುವುದು ಸರಿಯಲ್ಲ. ಕನ್ನಡಿಗರು ನಮ್ಮ ಭಾಷೆಯನ್ನು ಬೇರೆಯವರಿಗೆ ಕಲಿಸುವ ಬದಲು , ಅವರ ಭಾಷೆಯನ್ನೇ ನಾವು ಮೊದಲು ಕಲಿಯುತ್ತಿದ್ದೇವೆ.  ಕನ್ನಡಿಗರ ಈ ವರ್ತನೆ ಭಾಷಾ ಬೆಳವಣಿಗೆ ಹಾಗೂ ನಾಡು, ನುಡಿ, ಸಂಸ್ಕೃತಿ  ಅಭಿವೃದ್ಧಿಯ ದೃಷ್ಟಿಯಿಂದ ಒಳ್ಳೆಯದಲ್ಲ. ರಾಜ್ಯದ ಕೆಲವು ಭಾಗಗಳಲ್ಲಿ ಪರಭಾಷಿಗರು ಕನ್ನಡವನ್ನು ಮಾತನಾಡುವುದೇ ಇಲ್ಲ. ಕನ್ನಡಿಗರು ಅಭಿಮಾನ ಶೂನ್ಯರಲ್ಲ. ಆದರೆ ಹೆಚ್ಚಿನ ಉದಾರತೆಯಿಂದಾಗಿ ಈ ರೀತಿ ಆಗಿದೆ. ಬೇರೆ ಭಾಷಿಗರನ್ನು , ಧರ್ಮದವರನ್ನೂ ಪ್ರೀತಿಸಬೇಕು ಆದರೆ ನಮ್ಮ ಭಾಷೆಯನ್ನು ಮರೆಯಬಾರದು.

ಆಡಳಿತದಲ್ಲಿ ಕನ್ನಡ ಪಾಲನೆಯಾಗದಿರಲು ನಿರ್ಲಕ್ಷ್ಯವೇ ಕಾರಣ: ನಮ್ಮಲ್ಲಿ ಇಂಗ್ಲೀಷ್ ವ್ಯಾಮೋಹವೂ ಹೆಚ್ಚಾಗಿದೆ. ಬಹಳ ವರ್ಷಗಳಿಂದ ಕನ್ನಡವನ್ನು ಆಡಳಿತ ಭಾಷೆಯಾಗಿದ್ದರೂ ಕೂಡ , ಇದು ಪಾಲನೆಯಾಗದಿರುವುದಕ್ಕೆ ನಿರ್ಲಕ್ಷ್ಯವೂ ಕಾರಣವಿರಬಹುದು. ಈ ಪರಿಸ್ಥಿತಿ ಸುಧಾರಿಸಬೇಕು. 1983 ರಲ್ಲಿ ಕನ್ನಡ ಭಾಷಾ ಕಾವಲು ಸಮಿತಿಯ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. 2023 ನವೆಂಬರ್ 1 ರಿಂದ ಒಂದು ವರ್ಷ ಕರ್ನಾಟಕ ಸಂಭ್ರಮವನ್ನು ಆಚರಿಸುವ ಮೂಲಕ, ಜನರಲ್ಲಿ ಕನ್ನಡ ಭಾಷಾ ಜಾಗೃತಿಯನ್ನು ಮೂಡಿಸಲಿದೆ.

ಕರ್ನಾಟಕ ಎಂದು ಮರುನಾಮಕರಣ: ಕರ್ನಾಟಕ ಏಕೀಕರಣವಾದ್ದು 1956 ನವೆಂಬರ್ 1 ರಂದು. ಕರ್ನಾಟಕ ಏಕೀಕರಣಕ್ಕೂ ಮುನ್ನ ಅನೇಕ ರಾಜ್ಯಗಳಲ್ಲಿ ಕನ್ನಡ ನಾಡು ಹರಿದು ಹಂಚಿಹೋಗಿದ್ದವು. ಭಾಷಾವಾರು ಪ್ರಾಂತ್ಯ ವಿಂಗಡನೆ ಘೋಷಣೆಯಾದ ಮೇಲೆ ಕರ್ನಾಟಕ ಏಕೀಕರಣವಾಗಬೇಕೆಂದು ಆಲೂರು ವೆಂಕಟರಾಯರ ನೇತೃತ್ವದಲ್ಲಿ ಅನೇಕರು  ಏಕೀಕರಣಕ್ಕಾಗಿ ಹೋರಾಟ ಮಾಡಿದರು.

ಸಾಂಪ್ರದಾಯಿಕವಾಗಿ ರಾಜ್ಯೋತ್ಸವ ಆಚರಿಸಿಕೊಂಡು ಬರುತ್ತಿದ್ದರೂ ಮೈಸೂರು ರಾಜ್ಯವೆಂದೇ ಕರೆಯಲಾಗುತ್ತಿತ್ತು. ಮೈಸೂರು ರಾಜವಂಶಸ್ಥರು ಆಳಿದ್ದರಿಂದ ಆ ಹೆಸರಿತ್ತು. ವಿಶಾಲ ಕರ್ನಾಟಕವಾದ ನಂತರ ಮುಂಬೈ ಕರ್ನಾಟಕ, ಆಂಧ್ರ, ತಮಿಳುನಾಡು ರಾಜ್ಯಗಳಿಂದ ಹಲವು ಪ್ರದೇಶಗಳು ಒಗ್ಗೂಡಿ ಕರ್ನಾಟಕವಾಯಿತು. ದೇವರಾಜ ಅರಸು ಅವರು ಮುಖ್ಯಮಂತ್ರಿಯಾದ ಸಂದರ್ಭದಲ್ಲಿ 1973, ನವೆಂಬರ್ 01, ರಂದು  ಕರ್ನಾಟಕ ಎಂದು ಮರುನಾಮಕರಣವಾಯಿತು. ಕರ್ನಾಟಕ ಗತವೈಭವ ಎಂಬ ಆಲೂರು ವೆಂಕಟರಾಯರ ಪುಸಕ್ತದಿಂದ ಆಯ್ದು ಅಖಂಡ ಕರ್ನಾಟಕಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಲಾಯಿತು 

ಹಿಂದಿನ ಸರ್ಕಾರ ಆಚರಿಸಬೇಕಿತ್ತು: ನವೆಂಬರ್ 01, 2023 ಕ್ಕೆ 50 ವರ್ಷಗಳು ತುಂಬುತ್ತದೆ. ವಾಸ್ತವವಾಗಿ ಕಳೆದ ವರ್ಷವೇ ಇದನ್ನು ಆಚರಿಸಬೇಕಿತ್ತು. ಆದರೆ ಹಿಂದಿನ ಸರ್ಕಾರದವರು ಮಾಡಿಲ್ಲ. ಈ ಬಾರಿಯ ಬಜೆಟ್ ಮಂಡಿಸುವ ಸಂದರ್ಭದಲ್ಲಿ ಇದೊಂದು  ಮಹತ್ವದ ಘಟನೆ. ಇದನ್ನು ವಿಶೇಷವಾಗಿ ಆಚರಿಸದೇ ಹೋದರೆ ಲೋಪವಾಗುತ್ತದೆ ಎಂದು ತೀರ್ಮಾನಿಸಿ, ಬಜೆಟ್ ನಲ್ಲಿ ಘೋಷಣೆ ಮಾಡಿ 2023 ನವೆಂಬರ್ 1 ರಿಂದ 2024 ನವೆಂಬರ್ 1 ರವರೆಗೆ ವರ್ಷವಿಡೀ ಕರ್ನಾಟಕ ಸಂಭ್ರಮವನ್ನು ಆಚರಿಸಲಾಗುತ್ತಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್

“ಮೂಲಸೌಕರ್ಯ, ಮಾನವ ಸಂಪನ್ಮೂಲ, ನವೋದ್ಯಮ, ಅನ್ವೇಷಣೆ ವಿಚಾರದಲ್ಲಿ ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ. ಬೇರೆಯವರು ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ” ಎಂದು ಆಂಧ್ರ ಐಟಿ ಸಚಿವ ನಾರಾ ಲೋಕೇಶ್ (Nara

[ccc_my_favorite_select_button post_id="115011"]

ಬೆದರಿಕೆ ಕರೆ.. Video ಪೋಸ್ಟ್ ಮಾಡಿದ ಸಚಿವ

[ccc_my_favorite_select_button post_id="115009"]

300 ರೂ. ಊಟ ಕೊಟ್ಟು 300 ಕೋಟಿ

[ccc_my_favorite_select_button post_id="114973"]

Bihar Election; ಬಿಜೆಪಿ ಪಟ್ಟಿ ಬಿಡುಗಡೆ

[ccc_my_favorite_select_button post_id="114963"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ಅರಸಮ್ಮ ದೇವಾಲಯದ (Arasamma Temple) ಬಾಗಿಲಿನ ಬೀಗ ಹೊಡೆದು ಹುಂಡಿ ಹಾಗೂ ದೇವರ ಆಭರಣಗಳನ್ನು ಕಳವು ಮಾಡಿರುವ ಪ್ರಕರಣ ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="114950"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!