ದೊಡ್ಡಬಳ್ಳಾಪುರ, (ನ.01): ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ವಿಶೇಷ ರೀತಿಯಲ್ಲಿ ಆಚರಿಸಲಾಗುತ್ತಿದೆ.
ಈ ನಿಟ್ಟಿನಲ್ಲಿ ತಾಲೂಕಿನ ಇತಿಹಾಸ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಮಂಗಳವಾರ ಭಕ್ತ ಮಂಡಳಿ ವತಿಯಿಂದ ಸುಬ್ರಹ್ಮಣ್ಯ ಸ್ವಾಮಿಗೆ ವಿಶೇಷ ಮುತ್ತಿನ ಅಲಂಕಾರ ಹಾಗೂ ಲಕ್ಷ್ಮಿ ನರಸಿಂಹಸ್ವಾಮಿಗೆ ವಿಶೇಷ ಬೆಣ್ಣೆ ಅಲಂಕಾರ ಮಾಡಲಾಗಿದೆ.
ಮಂಗಳವಾರ ಭಕ್ತ ಮಂಡಳಿ ವತಿಯಿಂದ ಪ್ರತಿ ವರ್ಷ ನವೆಂಬರ್ 01ರಂದು ಸ್ವಾಮಿಗೆ ವಿಶೇಷ ಬೆಣ್ಣೆ ಅಲಂಕಾರ ನಡೆಸಲಾಗುತ್ತಿದ್ದು, 26ನೇ ವರ್ಷದ ಅಲಂಕಾರ ಇಂದು ನಡೆಸಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….