ದುಬೈ, (ನ.01): ಪ್ರವಾಸದಲ್ಲಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ದುಬೈ ಕನ್ನಡ ಬಂಧುಗಳ ಜೊತೆ ಕನ್ನಡ ರಾಜ್ಯೋತ್ಸವ ಆಚರಿಸಿದರು.
ಇದೇ ವೇಳೆ ಎಕ್ಸ್ ಮೂಲಕ ಶುಭಾಶಯ ಕೋರಿರುವ ಅವರು, ನಾಡಿನ ಹಾಗೂ ಜಗತ್ತಿನೆಲ್ಲೆಡೆ ನೆಲೆಸಿರುವ ಸಮಸ್ತ ಕನ್ನಡ ಬಂಧುಗಳಿಗೆ 68ನೇ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಹಾಗೆಯೇ, ‘ಕರ್ನಾಟಕ’ವೆಂದು ಹೆಸರಾಗಿ ಇಂದಿಗೆ 50 ವರ್ಷ.
ಸಾಧಿಸಿದ್ದು ಸಾಕಷ್ಟು, ಸಾಧಿಸಬೇಕಾದದ್ದು ಬಹಳಷ್ಟು. ಕನಸು ನನಸುಗಳ ಈ ಮಹಾಯಾನದಲ್ಲಿ ಸಾರ್ಥಕ ಹೆಜ್ಜೆಗಳನ್ನು ಇಡುತ್ತಾ ಕನ್ನಡಾಂಬೆಯ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರೈಸೋಣ.
ಪ್ರತಿ ಹೊಸಿಲಿನಲ್ಲಿಯೂ ಕನ್ನಡದ ನಂದಾದೀಪ ಬೆಳಗಲಿ, ಆ ಹೊನಲು ಜಗವೆಲ್ಲಾ ತುಂಬಿಕೊಳ್ಳಲಿ ಎಂದು ಆಶಿಸುತ್ತೇನೆ. ಜೈ ಕರ್ನಾಟಕ ಎಂದಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….