ದೊಡ್ಡಬಳ್ಳಾಪುರ, (ನ.01): ಬಸ್ ನಿಲ್ದಾಣದಲ್ಲಿರುವ ಎರಡು ಕಿರಾಣಿ ಅಂಗಡಿಗಳ ದೋಚಿರುವ ಘಟನೆ ತಾಲೂಕಿನ ದೊಡ್ಡಬೆಳವಂಗಲ ಬಸ್ ನಿಲ್ದಾಣದಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಸನ್ನಾಉಲ್ಲಾ ಖಾನ್ ಹಾಗೂ ರಾಜಣ್ಣ ಎನ್ನುವವರ ಅಂಗಡಿ ಬಾಗಿಲು ಮೀಟಿರುವ ಕಳ್ಳರು ಸಿಗರೇಟ್ ಪ್ಯಾಕ್, ಹಣ ದೋಚಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಘಟನೆ ಕುರಿತಂತೆ ದೊಡ್ಡಬೆಳವಂಗಲ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆಂದು ತಿಳಿದು ಬಂದಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….