ದೊಡ್ಡಬಳ್ಳಾಪುರ, (ನ.01); ಹಲವಾರು ಮಹನೀಯರ ಶ್ರಮದ ಫಲವಾಗಿ ಕರ್ನಾಟಕ ಏಕೀಕರಣವಾಗಿದೆ ಎಂದು ಜವಾಹರ ನವೋದಯ ಶಾಲೆಯ ನಿವೃತ್ತ ಅಧ್ಯಾಪಕ ವಿ.ಎಸ್.ಹೆಗಡೆ ಹೇಳಿದರು.
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಗರದ ಡಾ.ರಾಜಕುಮಾರ್ ಕಲಾಮಂದಿರದಲ್ಲಿ ನಡೆದ 68ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಭಾಷಣಕಾರರಾಗಿ ಅವರು ಮಾತನಾಡಿದರು.
ಈ ವರ್ಷ ಕರ್ನಾಟಕ ನಾಮಕರಣವಾಗಿ 50 ವರ್ಷಗಳ ಆಚರಣೆ ನಡೆಯುತ್ತಿರುವುದು ವಿಶೇಷವಾಗಿದೆ. ವಚನ ಸಾಹಿತ್ಯ ಹಾಗೂ 8 ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದು ಸಾಹಿತ್ಯದ ಹಿರಿಮೆ ಹೆಚ್ಚಿರುವುದು ಒಂದೆಡೆಯಾದರೆ, ಆಧುನಿಕ ತಂತ್ರಜ್ಞಾನ, ವೈಜ್ಞಾನಿಕ ಕ್ಷೇತ್ರಗಳಿಲ್ಲಿಯೂ ಸಹ ರಾಜ್ಯ ಮುನ್ನಡೆ ಸಾಧಿಸಿದೆ. ಆದರೆ ಕನ್ನಡ ಭಾಷೆ ಮಾತನಾಡುವ ಪ್ರಮಾಣ ಕಡಿಮೆಯಾಗುತ್ತಿರುವುದು ಆತಂಕಕಾರಿಯಾಗಿದ್ದು, ಭಾಷೆ ಬಳಸದಿದ್ದರೆ ಅದಕ್ಕೆ ಉಳಿಗಾಲವಿಲ್ಲ. ನಾವು ನವೆಂಬರ್ ಕನ್ನಡಿಗರಾಗದೇ ವರ್ಷವಿಡೀ ಕನ್ನಡಿಗರಾಗಬೇಕಿದೆ ಎಂದರು.
ಸಮಾರಂಭದಲ್ಲಿ ಶಾಸಕ ಧೀರಜ್ ಮುನಿರಾಜು, ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ್, ಉಪಾಧ್ಯಕ್ಷೆ ಫರ್ಹಾನಾ ತಾಜ್ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ ಹಾಗೂ ತಹಸೀಲ್ದಾರ್ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ , ತಾ.ಪಂ ಇ.ಓ ಎನ್.ಮುನಿರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ರಂಗಪ್ಪ, ನಗರಸಭೆ ಪೌರಾಯುಕ್ತ ಕೆ.ಪರಮೇಶ್ ಸೇರಿದಂತೆ ನಗರಸಭಾ ಸದಸ್ಯರು ಹಾಗೂ ವಿವಿಧ ಕನ್ನಡಪರ ಸಂಘಟನೆಗಳು ಮುಖಂಡರು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಸಲ್ಲಿಸಿದ ಸಾಧಕರಿಗೆ ಸನ್ಮಾನಿಸಲಾಯಿತು.
ಸಮಾರಂಭಕ್ಕೂ ಮುನ್ನ ತಾಲೂಕು ಕಚೇರಿ ಆವರಣದಲ್ಲಿ ಉಪವಿಭಾಗಾಧಿಕಾರಿ ಎಂ.ಶ್ರೀನಿವಾಸ್ ಧ್ವಜಾರೋಹಣ ನೆರವೇರಿಸಿದರು.
ಕನ್ನಡ ರಾಜ್ಯೋತ್ಸವದ ಅಂಗವಾಗಿ ಭುವನೇಶ್ವರಿದೇವಿಯ ಭವ್ಯ ಮೆರವಣಿಗೆ ತಾಲೂಕು ಕಚೇರಿ ಬಳಿಯಿಂದ ವೀರಾಗಾಸೆ, ಗಾರುಡಿ ಗೊಂಬೆ, ಮಂಗಳ ವಾದ್ಯ ಮೊದಲಾದ ಕಲಾತಂಡಗಳೊಡನೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಡಾ.ರಾಜ್‍ಕುಮಾರ್ ಕಲಾಭವನ ತಲುಪಿತು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….