ನಾಡದೇವಿ ಭುವನೇಶ್ವರಿ ಹೆಸರಿನಲ್ಲಿ ದೊಡ್ಡ ಕನ್ನಡ ಭವನ ನಿರ್ಮಾಣ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು, (ನ.1); ಕರ್ನಾಟಕ  ಸಂಭ್ರಮ 50ರ ಸವಿನೆನಪಿಗಾಗಿ ನಾಡದೇವಿ ಭುವನೇಶ್ವರಿ ಹೆಸರಿನಲ್ಲಿ ದೊಡ್ಡ ಕನ್ನಡ ಭವನವನ್ನು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಅವರು ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

1956ರ ನವೆಂಬರ್ 1 ರಂದು ಕನ್ನಡ ಭಾಷಿಕ ಪ್ರದೇಶಗಳು ಏಕೀಕರಣಗೊಂಡು ಮೈಸೂರು ರಾಜ್ಯ ಉದಯವಾಯಿತು‌. ನಂತರ 1973ರಲ್ಲಿ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸು ಅವರ ಅವಧಿಯಲ್ಲಿ ಮೈಸೂರು ರಾಜ್ಯವನ್ನು ‘ಕರ್ನಾಟಕ’ ಎಂದು ಮರು ನಾಮಕರಣ ಮಾಡಲಾಯಿತು ಎಂದರು.

ಕನ್ನಡದ ಹಿರಿಮೆ ಬಿಂಬಿಸುವ ಕರ್ನಾಟಕ ಸಂಭ್ರಮ – 50:‌ ಕರ್ನಾಟಕಕ್ಕೆ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಈ ಹಿಂದಿನ ಸರ್ಕಾರ ಸಂಭ್ರಮಾಚರಣೆ ಮಾಡಬೇಕಿತ್ತು. ಆದರೆ ಅವರು ಮಾಡಲಿಲ್ಲ. ನಮ್ಮ ಸರ್ಕಾರ ಈ ಸಂಭ್ರಮಾಚರಣೆಯನ್ನು ಆಚರಿಸುವು ನಮ್ಮ ಕರ್ತವ್ಯವೆಂದು ಭಾವಿಸಿ, ಇಡೀ ವರ್ಷಕನ್ನಡ ನೆಲ, ಜಲ ಸಾಹಿತ್ಯ, ಸಂಸ್ಕೃತಿ, ಪರಂಪರೆಗಳನ್ನು ಬಿಂಬಿಸುವ ‘ಕರ್ನಾಟಕ ಸಂಭ್ರಮ- 50’ ಕಾರ್ಯಕ್ರಮಗಳನ್ನು ಸರ್ಕಾರ ರೂಪಿಸಿದೆ. ‘ಹೆಸರಾಯಿತು ಕರ್ನಾಟಕ- ಉಸಿರಾಗಲಿ ಕನ್ನಡ’ ಎಂಬ ಘೋಷ ವಾಕ್ಯದಡಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ನಮ್ಮ ಉಸಿರು ಕನ್ನಡವಾಗಬೇಕು. ಇಡೀ ರಾಜ್ಯದಲ್ಲಿ ಕನ್ನಡದ ವಾತಾವರಣ ನಿರ್ಮಾಣವಾಗಬೇಕು ಎಂದು ತಿಳಿಸಿದರು.

ಅವಕಾಶ ವಂಚಿತರು ಮುಖ್ಯವಾಹಿನಿಗೆ ಬರಬೇಕು: ವಚನಗಳು ಭಾರತಕ್ಕೆ ಮಾತ್ರವಲ್ಲ. ಇಡೀ ವಿಶ್ವಕ್ಕೆ ಅಗತ್ಯ. ಜಾತಿ ವ್ಯವಸ್ಥೆ ಕಾರಣಕ್ಕಾಗಿ, ಸಾಮಾಜಿಕ, ಆರ್ಥಿಕ, ರಾಜಕೀಯ ಅಸಮಾನತೆ ನಿರ್ಮಾಣವಾಗಿದೆ. ಶತಮಾನಗಳಿಂದ ಶೂದ್ರರು ಹಾಗೂ ಮಹಿಳೆಯರು ಶಿಕ್ಷಣ ಸಂಸ್ಕೃತಿಯಿಂದ ವಂಚಿತರಾಗಿದ್ದರು.ಸಮ ಸಮಾಜ ನಿರ್ಮಾಣವಾಗಬೇಕಾದರೆ ಅವಕಾಶವಂಚಿತರು, ದುರ್ಬಲರು ಮುಖ್ಯವಾಹಿನಿಗೆ ಬರಬೇಕು. ಅಂತಹ ಜನರನ್ನು ಗುರುತಿಸಿ, ಸಾಮಾಜಿಕ, ಆರ್ಥಿಕ ನ್ಯಾಯ ಕೊಡುವ ಬಗ್ಗೆ ಸಂವಿಧಾನದಲ್ಲಿ ಉಲ್ಲೇಖಿಸಲಾಗಿದೆ ಎಂದರು.

ವಚನ ಸಂಸ್ಕೃತಿ ಅಭಿಯಾನ: ಅಸಮಾನತೆ ಇರುವ ಸಮಾಜದಲ್ಲಿ ಕೇವಲ ರಾಜಕೀಯ ಸ್ವಾತಂತ್ರ್ಯವಲ್ಲ. ಪ್ರತಿಯೊಬ್ಬರಿಗೂ ಸಾಮಾಜಿಕ, ಆರ್ಥಿಕ ಸ್ವಾತಂತ್ರ್ಯ ಸಿಕ್ಕಾಗ ಮಾತ್ರ ಸ್ವಾತಂತ್ರ್ಯ  ಸಾರ್ಥಕವಾಗುತ್ತದೆ. ಇಂತಹ ಾಶಯಗಳನ್ನೇ ಬಸವಣ್ಣನವರು, ಅಂಬೇಡ್ಕರ್ ರವರು ತಿಳಿಸಿದರು. ಶ್ರೀ ನಿಜಗುಣ ಸ್ವಾಮೀಜಿ ಅವರು ಹೇಳಿದಂತೆ ವಚನ ಸಂಸ್ಕೃತಿ ಅಭಿಯಾನ ಸರ್ಕಾರ ಹಮ್ಮಿಕೊಳ್ಳಲಿದೆ ಎಂದು ತಿಳಿಸಿದರು.

ಶಕ್ತಿಯಿಲ್ಲದವರಿಗೆ ಶಕ್ತಿ ತುಂಬುವ ಯೋಜನೆಗಳು: ಸರ್ಕಾರದ ಪಂಚಗ್ಯಾರಂಟಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯಡಿ 86 ಕೋಟಿ ಮಹಿಳೆಯರು ಸರ್ಕಾರಿ ಬಸ್ ನಲ್ಲಿ ಉಚಿತ ಪ್ರಯಾಣ ಮಾಡಿದ್ದಾರೆ. ಶಕ್ತಿ ‌ಇರುವವರಿಗೆ ಶಕ್ತಿ ಕೊಡುವುದಲ್ಲ. ಶಕ್ತಿ ಇಲ್ಲದವರಿಗೆ ಶಕ್ತಿ ತುಂಬ ಬೇಕೆನ್ನುವುದೇ ಪಂಚ ಗ್ಯಾರಂಟಿ ಯೋಜನೆಗಳ ಉದ್ದೇಶ ಎಂದರು.

ಸಮಾಜಸೇವೆಯ ಮೂಲಕ ಋಣ ತೀರಿಸಲು ಸಾಧ್ಯ: ಪ್ರೀತಿ, ವಿಶ್ವಾಸ, ಮನುಷ್ಯತ್ವ ಬಹಳ ಮುಖ್ಯ. ಮನುಷ್ಯತ್ವ ಇಲ್ಲದಿದ್ದರೆ ಅದು ಸಮಾಜವೇ ಅಲ್ಲ. ನಾವೆಲ್ಲರೂ ಕೂಡ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ಕೊಟ್ಟರೆ ಮಾತ್ರ ಬದುಕು ಸಾರ್ಥಕವಾಗುತ್ತದೆ. ನಾವು ಹುಟ್ಟಿದ ಮೇಲೆ ಸಮಾಜದಿಂದ ಎಲ್ಲವನ್ನೂ ಪಡೆದಿದ್ದೇವೆ ಎಂದ ಮೇಲೆ , ಸಮಾಜದ ಪರ ಕೆಲಸ ಮಾಡುವ ಮೂಲಕ ಸಮಾಜದ ಋಣ ತೀರಿಸಲು ಸಾಧ್ಯ. ಇಂತಹ ಕೆಲಸವೇ ಸಮಾಜ ಸೇವೆ ಎಂದರು.

ಅರ್ಹತೆಯುಳ್ಳವರಿಗೆ ಪ್ರಶಸ್ತಿ: ಕರ್ನಾಟಕ ಸಂಭ್ರಮದ ಶುಭಸಂದರ್ಭದಲ್ಲಿ ಪ್ರಶಸ್ತಿಗೆ ಭಾಜನರಾಗಿರುವ ಎಲ್ಲ 68 ಪ್ರಶಸ್ತಿ ಪುರಸ್ಕೃತರ ಸಾಧನೆ ಎಲ್ಲರಿಗೂ ಮಾದರಿಯಾಗಿದೆ. ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷ ಪೂರೈಸಿದ  ಹಿನ್ನೆಲೆಯಲ್ಲಿ ಈ ಬಾರಿ 10 ಸಂಘ- ಸಂಸ್ಥೆಗಳಿಗೆ ಈ ವಿಶೇಷವಾಗಿ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ. ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗೆ ಹೆಚ್ಚು ಅರ್ಹತೆ ಇದ್ದವರನ್ನು ಆಯ್ಕೆ ಮಾಡಬೇಕೆಂಬ ಸೂಚನೆಯನ್ನು ನೀಡಲಾಗಿತ್ತು. ರಾಜ್ಯದ ಮುಖ್ಯಮಂತ್ರಿಯಾಗಿ ನಾನು ಒಂದು ಹೆಸರನ್ನು ಬಿಟ್ಟು ಬೇರೆ ಯಾರ ಹೆಸರನ್ನು ನಾನು ಸೂಚಿಸಿಲ್ಲ‌. ಬಹುತೇಕವಾಗಿ  ಆಯ್ಕೆ ಸಮಿತಿ ಶಿಫಾರಸ್ಸು ಮಾಡಿದವರಿಗೆ ಪ್ರಶಸ್ತಿ ನೀಡಲಾಗಿದೆ ಎಂದು ತಿಳಿಸಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್

“ಮೂಲಸೌಕರ್ಯ, ಮಾನವ ಸಂಪನ್ಮೂಲ, ನವೋದ್ಯಮ, ಅನ್ವೇಷಣೆ ವಿಚಾರದಲ್ಲಿ ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ. ಬೇರೆಯವರು ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ” ಎಂದು ಆಂಧ್ರ ಐಟಿ ಸಚಿವ ನಾರಾ ಲೋಕೇಶ್ (Nara

[ccc_my_favorite_select_button post_id="115011"]

ಬೆದರಿಕೆ ಕರೆ.. Video ಪೋಸ್ಟ್ ಮಾಡಿದ ಸಚಿವ

[ccc_my_favorite_select_button post_id="115009"]

300 ರೂ. ಊಟ ಕೊಟ್ಟು 300 ಕೋಟಿ

[ccc_my_favorite_select_button post_id="114973"]

Bihar Election; ಬಿಜೆಪಿ ಪಟ್ಟಿ ಬಿಡುಗಡೆ

[ccc_my_favorite_select_button post_id="114963"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ಅರಸಮ್ಮ ದೇವಾಲಯದ (Arasamma Temple) ಬಾಗಿಲಿನ ಬೀಗ ಹೊಡೆದು ಹುಂಡಿ ಹಾಗೂ ದೇವರ ಆಭರಣಗಳನ್ನು ಕಳವು ಮಾಡಿರುವ ಪ್ರಕರಣ ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="114950"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!