ನವದೆಹಲಿ, (ನ.01): ಶಾಸಕರು ದುಬೈಗೆ ಓಡಿ ಹೋಗೋದನ್ನು ತಡೆಯಲು ಕಾಂಗ್ರೆಸ್ ನವರು ಸಭೆ ಮಾಡುತ್ತಿದ್ದಾರೆ ಮಾಡಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ರಾಜ್ಯೋತ್ಸವದ ದಿನದಂದು ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ. ಇಡೀ ದಿನ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗುವುದನ್ನು ಬಿಟ್ಟು ರಾಜಕೀಯ ಆರಂಭಿಸಿದೆ. ಕಾಂಗ್ರೆಸ್ ಒಳಬೇಗುದಿ ಕಡಿಮೆ ಮಾಡಲು ಮತ್ತು ಸಿಎಂ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಸಭೆ ಮಾಡುತ್ತಿದ್ದಾರೆ ಎಂದು ಕರಂದ್ಲಾಜೆ ಹೇಳಿದ್ದಾರೆ.
ಸಿಎಂ, ಡಿಸಿಎಂ ಪರಸ್ಪರ ಕಿತ್ತಾಟ ಮಾಡುತ್ತಿದ್ದಾರೆ. ಡಿಕೆ ಶಿವಕುಮಾರ್ ಅವರ ಸಿಬಿಐ ಕೇಸ್ ತಡೆ ರದ್ದಾಗಿದೆ. ಇದರ ಹಿಂದೆ ಯಾರ ಕೈವಾಡ ಇದೆ ಎಂದು ಪ್ರಶ್ನಿಸಿದ ಅವರು, ಸಿಎಂ ಹಾಗೂ ಡಿಸಿಎಂ ಅಧಿಕಾರಕ್ಕಾಗಿ ಹೊಡೆದಾಡುತ್ತಿದ್ದಾರೆ ಎಂದಿದ್ದಾರೆ.
ವಿಪಕ್ಷ ಶಾಸಕರಿಗೆ ಗೌರವ ಕೊಡ್ತಿಲ್ಯ ಅನುದಾನ ಇಲ್ಲ. ಹಿಂದೆ ಕನಿಷ್ಠ 2-3 ಕೋಟಿ ರೂ. ಬರುತ್ತಿತ್ತು ಇಂದು ಅದು ಕೂಡಾ ಬರುತ್ತಿಲ್ಲ ಎಂದು ಕಿಡಿಕಾರಿದ್ದಾರೆ.
ಕೆಲವು ಸಚಿವರು ಇನ್ನು ಮೂರು ಉಪಮುಖ್ಯಮಂತ್ರಿಗಳು ಬೇಕು ಎನ್ನುತ್ತಾರೆ. ಇನ್ನು ಕೆಲವರು ಸಿಎಂ ಬದಲಾವಣೆ ಬಗ್ಗೆ ಮಾತನಾಡುತ್ತಿದ್ದಾರೆ. ನಿಮಗೆ ಸರ್ಕಾರ ನಡೆಸಲು ಸಾಧ್ಯವಾಗದಿದ್ದರೇ ಬಿಟ್ಟು ತೊಲಗಿ ಎಂದು ಅವರು ಹೇಳಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….