ಬೆಂಗಳೂರು, (ನ.01); ಕಳೆದ ಮೂರು ದಿನಗಳಿಂದ ಕಣ್ಣಾಮುಚ್ಚಾಲೆ ಆಡುತ್ತಿದ್ದ ಚಿರತೆ ಇಂದು ಅರಣ್ಯ ಇಲಾಖೆ ಸಿಬ್ಬಂದಿ ಹಾರಿಸಿದ ಗುಂಡಿಗೆ ಬಲಿಯಾಗಿದೆ.
ಹೊಸೂರು ರಸ್ತೆಯ ಕೂಡ್ಲುಗೇಟ್ ಸುತ್ತ ಮತ್ತಲಿನ ಜನರು ಆತಂಕಗೊಂಡಿದ್ದರು. ಇಲ್ಲಿನ ಪ್ರತಿಷ್ಠಿತ ಅಪಾರ್ಟ್ ಮೆಂಟ್‌ನಲ್ಲಿ ಚಿರತೆ ಪ್ರತ್ಯಕ್ಷದಿಂದಾಗ ನಾಗರಿಕರು ಮತ್ತಷ್ಟು ಭೀತಿಗೊಂಡಿದ್ದರು. ಬೆಳಗ್ಗೆ ಹೊತ್ತಿನಲ್ಲಿ ಕಾಣಿಸಿಕೊಳ್ಳದ ಚಿರತೆ ರಾತ್ರಿಯಾದಂತೆ ಪ್ರತ್ಯಕ್ಷವಾಗುತ್ತಿತ್ತು. ಕತ್ತಲಲ್ಲಿ ರಾಜಾರೋಷವಾಗಿ ಓಡಾಡುವ ಚಿರತೆ ಸ್ಥಳೀಯರಲ್ಲಿ ಭಯ ಹುಟ್ಟಿಸಿತ್ತು.
ಈ ಕುರಿತಂತೆ ಕೂಡ್ಲುಗೇಟ್ ಬಳಿ ಅರಣ್ಯ ಇಲಾಖೆ ಅಧಿಕಾರಿಗಳು, ಚಿರತೆ ಸೆರೆಗೆ ಮೈಸೂರಿನಿಂದ ಆಗಮಿಸಿದ DFC ಸೌರಭ್ ಕುಮಾರ್ ನೇತೃತ್ವದ ಟಾಸ್ಕ್ ಫೋರ್ಸ್ ಒಟ್ಟಾಗಿ ಚಿರತೆ ಕಾರ್ಯಾಚರಣೆ ನಡೆಸಿದ್ದರು.
ಬೊಮ್ಮನಹಳ್ಳಿಯ ಕೈಗಾರಿಕಾ ಪ್ರದೇಶದ ಕೂಡ್ಲುಗೇಟ್ನ ಕೃಷ್ಣಾರೆಡ್ಡಿಪಾಳ್ಯದ ಪಾಳುಬಿದ್ದ ಕಟ್ಟಡದಲ್ಲಿ ಸೆರೆ ಸಿಕ್ಕಿತ್ತು. ಆದರೆ ಅರಣ್ಯ ಸಿಬ್ಬಂದಿ ಗುಂಡೇಟಿಗೆ ಚಿರತೆ ಮೃತಪಟ್ಟಿದೆ. ಚಿರತೆ ಸೆರೆ ಹಿಡಿಯುವಾಗ ಅರಣ್ಯ ಸಿಬ್ಬಂದಿ ಗುಂಡು ಹಾರಿಸಿದ್ದು, ಚಿರತೆ ಸ್ಥಳದಲ್ಲೇ ಮೃತಪಟ್ಟಿದೆ.
ಬನ್ನೇರುಘಟ್ಟ ಜೈವಿಕ ಉದ್ಯಾನವನದ ಆಸ್ಪತ್ರೆಯಲ್ಲಿ ಚಿರತೆ ಮರಣೋತ್ತರ ಪರೀಕ್ಷೆಯನ್ನು ವೈದ್ಯರು ನಡೆಸುತ್ತಿದ್ದು, ಸಿಸಿಎಫ್ ಲಿಂಗರಾಜು, ಡಿಆರ್ಎಫ್ ರವೀಂದ್ರಕುಮಾರ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಸಿಸಿಎಫ್ ಲಿಂಗರಾಜು ಮಾಧ್ಯಮಗಳೊಂದಿಗೆ ಮಾತನಾಡಿ, ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಸಿಸಿಎಫ್ ಲಿಂಗರಾಜು ಪ್ರತಿಕ್ರಿಯೆ ನೀಡಿದ್ದು, ಅರಣ್ಯ ಸಿಬ್ಬಂದಿ ಮೇಲೆ ದಾಳಿ ಮಾಡಿದ್ದಕ್ಕೆ ಗುಂಡು ಹಾರಿಸಲಾಗಿದೆ. ಬೆಳಗ್ಗೆಯಿಂದ ಸಿಬ್ಬಂದಿ ಮೇಲೆ 2 ಸಲ ಚಿರತೆ ದಾಳಿ ನಡೆಸಿತ್ತು. ಚಿರತೆ ದಾಳಿಯಿಂದ ಸಿಬ್ಬಂದಿಗೆ ಮಾರಣಾಂತಿಕ ಗಾಯವಾಗಿತ್ತು ಎಂದಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….