ಬೆಂಗಳೂರು, (ನ.01): ಶೀಘ್ರದಲ್ಲೇ ಪುನೀತ್ ಹೃದಯ ಜ್ಯೋತಿ ಯೋಜನೆ ಜಾರಿಯಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುನೀತ್ ಹೃದಯ ಜ್ಯೋತಿ ಯೋಜನೆ ಘೋಷಣೆ ಮಾಡಿದ್ದರು. ಅದರಂತೆ ಕೆಲವೇ ದಿನಗಳಲ್ಲಿ ಈ ಯೋಜನೆ ಜಾರಿಯಾಗಿಲಿದ್ದು, ಎಮರ್ಜೆನ್ಸಿ ಇದ್ದಾಗ ಜನರು ಈ ಸೇವೆ ಬಳಸಬಹುದು. ಈ ಕಾರ್ಯಕ್ರಮವನ್ನು ಮುಂದಿನ ತಿಂಗಳು ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟನೆ ಮಾಡಲಿದ್ದಾರೆ ಎಂದರು.
ಇತ್ತೀಚಿನ ದಿನಗಳಲ್ಲಿ ಹೃದಯಾಘಾತಕ್ಕೀಡಾಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರ, ಎಲ್ಲಾ ವಯೋಮಾನದವರಿಗೆ ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳಿಗೆ ಉಚಿತ ಚಿಕಿತ್ಸೆ ನೀಡಲು ʻಪುನೀತ್ ರಾಜ್‌ಕುಮಾರ್ ಹೃದಯ ಜ್ಯೋತಿ ಯೋಜನೆʼಯನ್ನು ಜಾರಿಗೊಳಿಸಿದೆ.
ಈ ಯೋಜನೆಯ ಮೂಲಕ, ರಾಜ್ಯದ 31 ಜಿಲ್ಲೆಗಳಲ್ಲಿನ 85 ಸರ್ಕಾರಿ ಆಸ್ಪತ್ರೆ ಹಾಗೂ 50ಕ್ಕೂ ಅಧಿಕ ಖಾಸಗಿ ಆಸ್ಪತ್ರೆಗಳ ಸ್ಪೋಕ್ ಹಾಗೂ ಹಬ್ಸ್ ಕೇಂದ್ರಗಳಲ್ಲಿ ತಪಾಸಣೆ, ಇಸಿಜಿ , ಆಂಜಿಯೋಪ್ಲ್ಯಾಸ್ಟಿ ಸೇರಿದಂತೆ ಟೆನೆಕ್ಟ್ ಪ್ಲಸ್‌ನಂಥಹ ದುಬಾರಿ ಇಂಜೆಕ್ಷನ್ ಸಹ ಉಚಿತವಾಗಿ ದೊರೆಯಲಿದೆ.
ಹೃದಯಾಘಾತ ಸೇರಿದಂತೆ ಯಾವುದೇ ಕಾಯಿಲೆಗಳ ಚಿಕಿತ್ಸೆಗೂ ಸಾರ್ವಜನಿಕರು ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡುವ ವಾತವರಣವನ್ನು ನಮ್ಮ ಸರ್ಕಾರ ನಿರ್ಮಿಸಿದೆ. ದುಬಾರಿ ವೆಚ್ಚದ ಚಿಕಿತ್ಸೆಗಳು ಸಂಪೂರ್ಣವಾಗಿ ಉಚಿತವಾಗಿ ಲಭ್ಯವಾಗುತ್ತಿದೆ. ರಾಜ್ಯದ ಜನತೆಯ ಆರೋಗ್ಯ ರಕ್ಷಣೆ ನಮ್ಮ ಹೊಣೆ. ನಾವು ಜವಾಬ್ಧಾರಿಯನ್ನು ಅರಿತು ಮುನ್ನಡೆಯುತ್ತಿದ್ದೇವೆ ಎಂದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….