ತುಮಕೂರು, (ನ.26): ರಾಜ್ಯ ಬಿಜೆಪಿ ನಾಯಕರ ವಿರುದ್ಧ ಮುನಿಸಿಕೊಂಡಿರುವ ಮಾಜಿ ಸಚಿವ ವಿ.ಸೋಮಣ್ಣ ಅವರು ಈಗ ತಮ್ಮ ಆಕ್ರೋಶವನ್ನು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವ್ಯಕ್ತಪಡಿಸಿದ್ದಾರೆ.
ಸಿದ್ದಗಂಗಾ ಮಠದಲ್ಲಿ ಸಿದ್ದಲಿಂಗ ಸ್ವಾಮೀಜಿಗಳನ್ನು ಶನಿವಾರ ಭೇಟಿ ಮಾಡಿ ಆಶೀರ್ವಾದ ಪಡೆದ ಸಂದರ್ಭದಲ್ಲಿ ತಮ್ಮ ಬೇಸರ, ನೋವು ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸಚಿವ ಅಮಿತ್ ಶಾ ಬಂದು ಮನೆಯಲ್ಲಿ ಕುಳಿತುಕೊಂಡು ಜೀವ ತೆಗೆದರು. ಎರಡು ತಾಸು ಮನೆಯಲ್ಲಿ ಕುಳಿತುಕೊಂಡಿದ್ದರು. ಏನೂ ಮಾಡಲಾಗಲಿಲ್ಲ. ಪ್ರಧಾನಿ ಮೋದಿಯವರು ಹೊಸದಿಲ್ಲಿಗೆ ಕರೆಸಿಕೊಂಡು ನಾಲ್ಕು ದಿನ ಇರಿಸಿಕೊಂಡು ನೀನು ಚುನಾವಣೆಗೆ ನಿಂತುಕೊ ಅಂದರು. ಹೀಗಾಗಿ ಅನಿವಾರ್ಯವಾಗಿ ಒಪ್ಪಿಕೊಳ್ಳಬೇಕಾಯಿತು ಎಂದು ಬೇಸರದ ಮಾತುಗಳನ್ನಾಡಿದ್ದಾರೆ.
ಎರಡು ಕಡೆ ಸ್ಪರ್ಧೆ ಮಾಡಿದ್ದಕ್ಕೆ ನನಗೆ ಬೇಸರವಾಗಿದೆ. ಸ್ವಕ್ಷೇತ್ರ ಬಿಟ್ಟು ಬೇರೆ ಕಡೆ ಸ್ಪರ್ಧಿಸಿ ಮಹಾ ಅಪರಾಧವಾಗಿದೆ ಎಂದು ಸ್ವಾಮೀಜಿ ಬಳಿ ನೋವು ವ್ಯಕ್ತಪಡಿಸಿದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….