ಬೆಂಗಳೂರು, (ನ.26); ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸೇರಿದಂತೆ ಹಲವು ಪ್ರಭಾವಿ ರಾಜಕಾರಣಿಗಳ ಪರಿಚಯವಿದೆ ಎಂದು ಹೇಳಿ ಉದ್ಯಮಿಗಳ ಬಳಿ ಹಣ ಪಡೆದು ವಂಚಿಸುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ಮಲ್ಲೇಶ್ವರಂ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಯೂಸುಫ್ ಬಂಧಿತ ಆರೋಪಿಯಾಗಿದ್ದು, ಈತನ ವಿರುದ್ಧ ಹಲವು ವಂಚನೆ ಪ್ರಕರಣಗಳು ದಾಖಲಾಗಿವೆ.
ಟ್ರಾವೆಲ್ ಕಂಪನಿ ಮಾಲಿಕರಿಗೆ ಜಿಎಸ್‌ಟಿ ಹಣದ ಹೆಸರಿನಲ್ಲಿ ವಂಚಿಸಿದ್ದ ಯೂಸುಫ್, ಬ್ಯಾಂಕ್ ಲೋನ್ ಪಡೆಯಲು ಯತ್ನಿಸುತ್ತಿದ್ದ ಉದ್ಯಮಿಗಳಿಗೆ ಮ್ಯಾನೇಜರ್ ಪರಿಚಿತರು ಎಂದು ಹೇಳಿಕೊಂಡು ವಂಚಿಸಿದ್ದ ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ದೂರು ದಾಖಲಾಗಿತ್ತು.
ಈತ ಬಿಜೆಪಿಯ ಪ್ರಭಾವಿ ರಾಜಕಾರಣಿಗಳ ಹೆಸರು ಹೇಳಿಕೊಂಡು ವಂಚಿಸಿರುವ ಹಲವು ಪ್ರಕರಣಗಳು ಮೇಲ್ನೋಟಕ್ಕೆ ಬಯಲಾಗಿರುವ ಹಿನ್ನೆಲೆಯಲ್ಲಿ ದೂರನ್ನು ಸಿಸಿಬಿಗೆ ವರ್ಗಾಯಿಸಲಾಗಿದೆ ಎಂದು ವರದಿಯಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….