28ಕ್ಕೆ 28 ಲೋಕಸಭೆ ಕ್ಷೇತ್ರಗಳನ್ನು ಗೆಲ್ಲುತ್ತೇವೆ: ಹೆಚ್.ಡಿ.ಕೆ, ವಿಜಯೇಂದ್ರ

ರಾಮನಗರ, (ನ.26): ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಅವರು ಬಿಡದಿಯ ತೋಟಕ್ಕೆ ಆಗಮಿಸಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಲೋಕಸಭೆ ಚುನಾವಣೆ, ಎರಡೂ ಪಕ್ಷಗಳ ಮೈತ್ರಿ ಹಾಗೂ ರಾಜ್ಯದ ಪ್ರಸಕ್ತ ರಾಜಕೀಯ ಬೆಳವಣಿಗೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಮಾತುಕತೆ ನಡೆಸಿದ್ದಾಗಿ ಇಬ್ಬರೂ ನಾಯಕರು ಭೇಟಿಯ ಬಳಿಕ ಮಾಧ್ಯಮಗಳಿಗೆ ತಿಳಿಸಿದರು.

ದೇಶದ ಹಿತದೃಷ್ಟಿಯಿಂದ ಮುಂದಿನ ಅವಧಿಗೂ ನರೇಂದ್ರ  ‌ಮೋದಿಯವರೇ ಪ್ರಧಾನಿ ಆಗಬೇಕು ಎನ್ನುವ ನಿಟ್ಟಿನಲ್ಲಿ ಚರ್ಚಿಸಿದ್ದೇವೆ. ಕ್ಷೇತ್ರ ಹಂಚಿಕೆ ಕುರಿತು ‌ಹೈಕಮಾಂಡ್ ನಲ್ಲಿ ‌ಚರ್ಚಿಸುತ್ತಾರೆ. ರಾಜ್ಯದಲ್ಲಿ ನಮ್ಮ ಮೈತ್ರಿಕೂಟ 28ಕ್ಕೆ‌ 28 ಕ್ಷೇತ್ರದಲ್ಲಿಯೂ ಗೆಲುವು ಸಾಧಿಸಲಿದ್ದೇವೆ ಎಂದರು ಕುಮಾರಸ್ವಾಮಿ.

2006ರಲ್ಲಿ ಮೈತ್ರಿ ಸರಕಾರದ ಕಾಲದಲ್ಲಿ ಯಡಿಯೂರಪ್ಪ ‌ಹಾಗೂ ನಾನು ಜೊತೆಯಾಗಿ ಅತ್ಯುತ್ತಮ ‌ಕೆಲಸ ನಿರ್ವಹಿಸಿದ್ದೇವೆ. ಅದು ಪುನಾ ಮರುಕಳಿಸಬೇಕು ಎಂಬುದು ರಾಜ್ಯದ ಜನರ ಆಸೆಯಾಗಿದೆ. ವಿಜಯೇಂದ್ರ‌, ‌ನಿಖಿಲ್‌ ಕುಮಾರಸ್ವಾಮಿ ಅವರುಗಳು, ‌ನಾನು‌ ಎರಡೂ ಪಕ್ಷಗಳ ಎಲ್ಲಾ ನಾಯಕರು ಜೊತೆಗೂಡಿ ‌ 2006-07ರ ಉತ್ತಮ ಸ್ಥಿತಿಯನ್ನು ಮರಳಿ ತರಲು ಶ್ರಮಿಸುತ್ತೇವೆ ಎಂದರು ಮಾಜಿ ಮುಖ್ಯಮಂತ್ರಿಗಳು.

ವಿಜಯೇಂದ್ರ ಮತ್ತು ನಿಖಿಲ್ ಕುಮಾರಸ್ವಾಮಿ ಇಬ್ಬರೂ ಸಹೋದರರ ರೀತಿ ರಾಜ್ಯದಲ್ಲಿ ಓಡಾಡಲಿದ್ದಾರೆ. ಎರಡೂ ಪಕ್ಣಗಳು ಒಟ್ಟಾಗಿ ‌ಹೋರಾಟ ನಡೆಸಲಿವೆ. ಆಡಳಿತ ಪಕ್ಷದ ತಪ್ಪುಗಳನ್ನು ದಾಖಲೆ ಸಮೇತ‌ ಎತ್ತಿ ಹಿಡಿಯುತ್ತೇವೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ಸಿನ ಏಕೈಕ ಸಂಸದರೂ ಇರಬಾರದು: ರಾಜ್ಯದ 28ಕ್ಕೆ 28 ಲೋಕಸಭೆ ಕ್ಷೇತ್ರಗಳನ್ನು ಗೆಲ್ಲಬೇಕಿದೆ. ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ಪಾಠ ಕಲಿಸುವ ನಿಟ್ಟಿನಲ್ಲಿ ಚರ್ಚಿಸಿದ್ದೇವೆ. ಒಟ್ಟಾಗಿ‌ ಹೋಗುವ ಕುರಿತು ಇಬ್ಬರು‌ ಮಾತುಕತೆ ನಡೆಸಿದ್ದೇವೆ. ದೆಹಲಿಯಲ್ಲಿ ‌ವರಿಷ್ಠರು ಸೀಟು‌ ಹಂಚಿಕೆ ‌ಬಗ್ಗೆ ಚರ್ಚಿಸುತ್ತಾರೆ ಎಂದು ವಿಜಯೇಂದ್ರ ಅವರು ತಿಳಿಸಿದರು.

ಮೋದಿ,‌ ನಡ್ಡಾ,‌ ಅಮಿತ್ ಶಾ,‌ಹೆಚ್ ಡಿಕೆ ಅವರು ಈಗಾಗಲೇ ದೆಹಲಿಯಲ್ಲಿ ‌ಚರ್ಚೆ ನಡೆಸಿದ್ದಾರೆ. ಬಿಜೆಪಿ- ಜೆಡಿಎಸ್ ಒಗ್ಗಟ್ಟಾಗಲು ನಿರ್ಧರಿಸಲಾಗಿದೆ. ನಾನು ಕೂಡ ಈಗಾಗಲೇ ಮಾಜಿ ಪ್ರಧಾನಿಗಳಾದ ದೇವೇಗೌಡರನ್ನು  ಭೇಟಿಯಾಗಿ ಚರ್ಚಿಸಿದ್ದೇನೆ. ಹಿರಿಯರಾದ‌ ಹೆಚ್.ಡಿ.ಕುಮಾರಸ್ವಾಮಿ ಅವರ‌ ಜತೆಯೂ ಚರ್ಚಿಸಿದ್ದೇನೆ. ಲೋಕಸಭೆ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ ಎಂದರು ಅವರು.

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ, ರಾಜ್ಯದಲ್ಲಿರುವ ಕಾಂಗ್ರೆಸ್ ಪಕ್ಷದ ಏಕೈಕ ಸಂಸದ ಡಿ.ಕೆ.ಸುರೇಶ್ ಅವರನ್ನು ಎದುರಿಸುವ ಕುರಿತು ನಾಲ್ಕು ಗೋಡೆಗಳ ಮಧ್ಯೆ ಕೂತು ಕಾರ್ಯತಂತ್ರ  ಮಾಡಲಾಗುವುದು ಎಂದರು ವಿಜಯೇಂದ್ರ‌. ಅಲ್ಲದೆ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಏಕೈಕ ಸಂಸದನೂ ಇರಬಾರದು. ದೇಶದ – ರಾಜ್ಯದ ಹಿತದೃಷ್ಟಿಯಿಂದ ಜೆಡಿಎಸ್ – ಬಿಜೆಪಿ ಮೈತ್ರಿಯಾಗಿದೆ ಎಂದರು ಅವರು.

ಸಿಎಂ ಜನತಾ‌ದರ್ಶನಕ್ಕೆ ಹೆಚ್ ಡಿಕೆ ಕೌಂಟರ್; ಸಿಎಂ ಸಿದ್ಧರಾಮಯ್ಯ ಅವರು ಜನತಾದರ್ಶನ ಮಾಡುವುದಾಗಿ ಜಾಹೀರಾತು ಕೊಟ್ಟು ಹೇಳಿದ್ದಾರೆ. ಅವರ ಜನತಾದರ್ಶನ ಜಾಹೀರಾತಿಗೆ ಸೀಮಿತವಾಗಿದೆ ಎಂದು ಟಾಂಗ್ ನೀಡಿದ ಕುಮಾರಸ್ವಾಮಿ ಅವರು; ಜನರ ತೆರಿಗೆ ಖರ್ಚು ಮಾಡಿ ಜಾಹಿರಾತು‌ ನೀಡ್ತಿದಾರೆ. ಪ್ರತಿ ದಿನ ಆ ಜಾಹೀರಾತುಗಳಲ್ಲಿ ಸುಳ್ಳು‌ ಹೇಳುತ್ತಿದ್ದಾರೆ ಎಂದು ಕಿಡಿ ಕಾರಿದರು.

ನಾನು, ಯಡಿಯೂರಪ್ಪ ಇದ್ದಾಗ ಹೇಗೆ ಜನತಾದರ್ಶನ ನಡೆಸಿದೆವು ಎನ್ನುವುದು ರಾಜ್ಯದ ಜನತೆಗೆ ಗೊತ್ತಿದೆ. ಬೆಳಗ್ಗೆಯಿಂದ ಸಂಜೆಯವರೆಗೆ ಬಿಡುವು ಪಡೆಯದೇ ಅಸಂಖ್ಯಾತ ಜನರ ಅಹವಾಲು ಸ್ವೀಕರಿಸಿ ಸ್ಥಳದಲ್ಲೇ ಪರಿಹಾರ ಕೊಡುತ್ತಿದ್ದ ಆ ದಿನಗಳನ್ನು ಜನರು ಮರೆತಿಲ್ಲ ಎಂದರು.

ಜೆಡಿಎಸ್ ಯುವ ಘಟಕದ ಅಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ಪಕ್ಷದ ರಾಮನಗರ ಜಿಲ್ಲಾಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಎ.ಮಂಜುನಾಥ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಹೆಚ್ಚು ಹೊತ್ತು ಗ್ರಹಣ ಹಿಡಿಯಲ್ಲ. ನಾನ್ ಬರ್ತಿದೀನಿ ಚಿನ್ನ: ದರ್ಶನ್| ದಿ ಡೆವಿಲ್ ಟ್ರೈಲರ್ ಇಲ್ಲಿದೆ ನೋಡಿ

ಹೆಚ್ಚು ಹೊತ್ತು ಗ್ರಹಣ ಹಿಡಿಯಲ್ಲ. ನಾನ್ ಬರ್ತಿದೀನಿ ಚಿನ್ನ: ದರ್ಶನ್| ದಿ ಡೆವಿಲ್

ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ನಟನೆಯ ‘ ದಿ ಡೆವಿಲ್’ (The Devil) ಸಿನಿಮಾ ಇದೇ ತಿಂಗಳ 11ರಂದು ಬಿಡುಗಡೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ.

[ccc_my_favorite_select_button post_id="117049"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ಜಾಲಪ್ಪ ಕಾಲೇಜು ವಸತಿ ಗೃಹದಲ್ಲಿ ವಾಸವಿದ್ದ ವ್ಯಕ್ತಿಯೋರ್ವನ ನಡು ರಸ್ತೆಯಲ್ಲಿ ಕೊಚ್ಚಿಕೊಂದಿರುವ (Brutally Murdered) ಘಟನೆ ಡಿಕ್ರಾಸ್-ಟಿಬಿ ವೃತ್ತದ ನಡುವಿನ ಚರ್ಚ್‌ ಗೇಟ್ ಬಳಿ ಸೋಮವಾರ ರಾತ್ರಿ 11.30ಕ್ಕೆ ನಡೆದಿದೆ

[ccc_my_favorite_select_button post_id="117043"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!