ನವದೆಹಲಿ, (ಡಿ.28); ಕಾಂಗ್ರೆಸ್ ಈಗ ಭಾರತ್ ನ್ಯಾಯ್ ಯಾತ್ರೆ ಕೈಗೊಳ್ಳಲು ಹೊರಟಿದೆ. ಇದರ ಅಡಿಯಲ್ಲಿ ರಾಹುಲ್ ಗಾಂಧಿ ಜನವರಿ 14 ರಿಂದ ಮಾರ್ಚ್ 20 ರವರೆಗೆ ಮಣಿಪುರದಿಂದ ಮುಂಬೈಗೆ ಪ್ರಯಾಣಿಸಲಿದ್ದಾರೆ.
ಈ ವೇಳೆ ರಾಹುಲ್ 14 ರಾಜ್ಯಗಳ 85 ಜಿಲ್ಲೆಗಳಲ್ಲಿ ಸಂಚರಿಸಲಿದ್ದಾರೆ. ಆರ್ಥಿಕ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಈ ಯಾತ್ರೆ ನಡೆಯಲಿದೆ ಎಂದು ಕಾಂಗ್ರೆಸ್ ಹೇಳಿದೆ. ಈ ಯಾತ್ರೆ ಬಸ್‌ನಲ್ಲಿ ನಡೆಯಲಿದೆ.
ಇದಕ್ಕೂ ಮುನ್ನ ರಾಹುಲ್ ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್ ಜೋಡೋ ಯಾತ್ರೆ ಕೈಗೊಂಡಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….