ಚಿಕ್ಕಬಳ್ಳಾಪುರ, (ಡಿ.29); ಶೈಕ್ಷಣಿಕ ಅಧ್ಯಯನ ಪ್ರವಾಸದಲ್ಲಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿಯೊಬ್ಬರು ತನ್ನ ಪುತ್ರನ ವಯಸ್ಸಿನ ಅಪ್ರಾಪ್ತ ವಿದ್ಯಾರ್ಥಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯ ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ.
ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುರಗಮಲ್ಲ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದುಕೊಂಡು ಹೋದಾಗ ನಡೆದ ಈ ಘಟನೆ ವಿಡಿಯೋ ಹಾಗೂ ಫೋಟೋಗಳು ವೈರಲ್ ಆಗಿದ್ದವು.
ಇತ್ತೀಚೆಗೆ ಶಾಲೆಯಿಂದ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ವೇಳೆ ಶಾಲಾ ವಿದ್ಯಾರ್ಥಿಯೊಂದಿಗೆ ಮುಖ್ಯ ಶಿಕ್ಷಕಿ ಈ ರೀತಿ ವರ್ತಿಸಿದ್ದು, ಇದೀಗ ಪೋಟೋಗಳು ಸೋರಿಕೆ ಆಗಿ ವಿದ್ಯಾರ್ಥಿ ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ.
ವಿದ್ಯಾರ್ಥಿ ಜತೆ ಚಲ್ಲಾಟ?: ಶಾಲೆಯ ಮುಖ್ಯ ಶಿಕ್ಷಕಿ ವಿದ್ಯಾರ್ಥಿಯೊಂದಿಗೆ ರೀತಿ ಅಸಭ್ಯವಾಗಿ ವರ್ತಿಸಿದ್ದಾರೆ. ಶಾಲಾ ಪ್ರವಾಸದ ವೇಳೆ ಬಾಲಕನೊಂದಿಗೆ ವಿವಿಧ ಭಂಗಿಗಳಲ್ಲಿ ಮುಖ್ಯಶಿಕ್ಷಕಿ ಪೋಟೋ ತೆಗೆಸಿಕೊಂಡಿದ್ದಾರೆ. ವಿದ್ಯಾರ್ಥಿ ಸಹ ಶಿಕ್ಷಕಿಯನ್ನು ಅಸಭ್ಯವಾಗಿ ವರ್ತಿಸಿದ್ದ ಫೋಟೋಗಳು ಈಗ ತಾಣಗಳಲ್ಲಿ ವೈರಲ್ ಆಗಿವೆ.
ಪ್ರಕರಣದ ಬಗ್ಗೆ ತಮಗೆ ದೂರು ಬಂದ ತಕ್ಷಣ ಶಾಲೆಗೆ ಭೇಟಿ ನೀಡಿ ಮುಖ್ಯ ಶಿಕ್ಷಕಿ ಮತ್ತು ಎಸ್‌ಡಿಎಂಸಿ ಸಮಿತೆ ಜೊತೆ ಮಾತುಕತೆ ನಡೆಸಿದ್ದು, ಶಿಕ್ಷಕಿಯ ಅಸಭ್ಯ ವರ್ತನೆ ಮಾಡಿರುವ ಬಗ್ಗೆ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಿದ್ದಾಗಿ ಬಿಇಒ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಶಿಕ್ಷಕಿಯನ್ನು ಡಿಡಿಪಿಐ ಅಮಾನತುಗೊಳಿಸಿ ಬೈಲಾಂಜನಪ್ಪ ಆದೇಶ ಹೊರಡಿಸಿದ್ದಾರೆ.
ಸಚಿವರ ಪ್ರತಿಕ್ರಿಯೆ: ಗುರುವಾರ ಚಿಕ್ಕಬಳ್ಳಾಪುರದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ವರದಿಗಾರರೊಬ್ಬರು ಘಟನೆ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂಸಿ ಸುಧಾಕರ್ ರನ್ನು ಪ್ರಶ್ನಿಸಿದಾಗ ಸಚಿವರು, ಈ ವಿಷಯ ನನ್ನ ಗಮನಕ್ಕೆ ಬಂದಿಲ್ಲ. ಈಗ ನಿಮ್ಮಿಂದ ವಿಷಯ ತಿಳಿದಿದೆ. ಈ ಕುರಿತು ಡಿಡಿಪಿಐ ರವರಿಂದ ವರದಿ ತರಿಸಿಕೊಂಡು ನಂತರ ಕ್ರಮ ಕೈಗೊಳ್ಳುವುದಾಗಿ ಅವರಯ ತಿಳಿಸಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….