ಚಿತ್ರದುರ್ಗದ, (ಡಿ.29); ಹಳೇ ಬೆಂಗಳೂರು ರಸ್ತೆ ( jail road ) ಯ ಮನೆಯೊಂದರಲ್ಲಿ 3 ಅಸ್ಥಿಪಂಜರಗಳು ಪತ್ತೆಯಾಗಿವೆ.
ನಗರದ ಚಳ್ಳಕೆರೆ ಟೋಲ್ ಗೇಟ್ ಬಳಿಯ ಹಳೆ ಬೆಂಗಳೂರು ರಸ್ತೆಯ ಜೈಲ್ ರಸ್ತೆಯ ಜಗನ್ನಾಥ ರೆಡ್ಡಿ ಸಾಮೀಲ್ ಬಳಿ ಇಂಜಿನಿಯರ್ ದೊಡ್ಡ ಸಿದ್ದವ್ವನಹಳ್ಳಿ ಎಂಬ ನಾಮಫಲಕ ಹೊಂದಿರುವ ಮನೆಯಲ್ಲಿ ಮೂರು ಅಸ್ಥಿಪಂಜರಗಳು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಇನ್ನೂ ನಿವೃತ್ತ ಇಂಜಿನಿಯರ್ ಜಗನ್ನಾಥ ರೆಡ್ಡಿ ಅವರು ತನ್ನ ಪತ್ನಿ ಅನಾರೋಗ್ಯದಿಂದ ಬಳಲುತ್ತಿದ್ದು, ಸುಮಾರು 2 ಕೋಟಿ ಖರ್ಚು ಮಾಡಿ ಚಿಕಿತ್ಸೆ ಕೊಡಿಸಿದ್ದರು, ಚಿಕಿತ್ಸೆ ಫಲಕಾರಿಯಾಗದೆ ಅರೋಗ್ಯ ಮತ್ತೊಷ್ಟು ಹದಗೆಟ್ಟಿತ್ತು. ಇದರಿಂದ ಬೇಸತ್ತು ಮನಯೆವರ್ಯಾರು ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಮನೆಗೆ ಯಾರೇ ಬಂದರೂ ಬಾಗಿಲು ತೆಗೆಯದೆ ಬಾಗಿಲಲ್ಲೆ ಮಾತಾಡಿಸಿ ಕಳುಹಿಸಿತ್ತಿದ್ದರು.
ಅಷ್ಟಾಗದೆ ಮನೆಯ ಕೊಠಡಿ ಒಳಗಡೆ ಇರುವ ಮಂಚದ ಮೇಲೆ ಒಂದು ಅಸ್ಥಿಪಂಜರ, ನೆಲದ ಮೇಲೆ ಹಾಗೂ ಬಾಗಿಲು ಹಿಂದೆ ಅಸ್ಥಿ ಪಂಜರ ಕಂಡು ಬಂದಿದ್ದು, ಅಸ್ಥಿಪಂಜರ ಬಳಿ ಆಕ್ಸಿಜನ್ ಸಿಲಿಂಡರ್ ಕಂಡು ಬಂದಿದ್ದು, ಜಗನ್ನಾಥ ರೆಡ್ಡಿ, ಕೃಷ್ಣಾರೆಡ್ಡಿ, ಜಗನ್ನಾಥ ರೆಡ್ಡಿ ಪತ್ನಿಯ ಅಸ್ಥಿಪಂಜರಗಳು ಇರಬಹುದು ಎಂದು ಸ್ಥಳೀಯ ಶಂಕಿಸಿದ್ದಾರೆ.
ಇಷ್ಟೆ ಅಲ್ಲದೆ ಸ್ಥಳೀಯರ ಪ್ರಕಾರ ಮನೆಯ ನಿವಾಸಿಗಳು 2019 ರ ಸೆಪ್ಟಂಬರ್ ನಿಂದ ಯಾರಿಗೂ ಸಹ ಕಾಣದೆ ಇರುವುದು ಕಂಡು ಬಂದಿರುತ್ತದೆ. ಆ ನಂತರದ ದಿನಗಳಲ್ಲಿ ಮನೆಯ ಸುತ್ತಮುತ್ತ ಸ್ವಲ್ಪ ದುರ್ವಾಸನೆ ಬಂದಂತಹ ಸ್ಥಿತಿಯಿತ್ತು ನಾವು ಯಾವುದೋ ಪ್ರಾಣಿ ಸತ್ತಿರುವ ವಾಸನೆ ಬರುತ್ತದೆ ಎಂದು ತಿಳಿದುಕೊಂಡಿದ್ದೆವು ಎಂದು ಮಾಹಿತಿ ನೀಡಿದ್ದಾರೆ.
ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಡಿವೈಎಸ್ಪಿ ಅನಿಲ್ ಕುಮಾರ್, ಬಡಾವಣೆ ಪೊಲೀಸ್ ಠಾಣೆಯ ಸಿಪಿಐ ನಯೀಂ ಅಹಮದ್, ಪಿಎಸ್ಐ ರಘು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದರ ಜೊತೆಗೆ ಶ್ವಾನ ದಳದವರು ಬಂದಿದ್ದು ಪತ್ತೆ ಕಾರ್ಯ ಆರಂಭಿಸಿದ್ದಾರೆ.
ಚಿತ್ರದುರ್ಗದ ಪೊಲೀಸರು ವಿಧಿ ವಿಜ್ಞಾನ ತಜ್ಞರು ಅವರು ಬಂದ ಮೇಲೆ ಅಸ್ತಿ ಪಂಜಿರಗಳ ಅಸ್ತಿ ಸಂಗ ಹೀಗಾಲಯಕ್ಕೆ ಕಳುಹಿಸಿ ವರದಿ ಬಂದ ಮೇಲೆ ಸತ್ಯಾಸತ್ಯತೆ ಇನ್ನೂ ತಿಳಿಯಲಿದ್ದು ಪೊಲೀಸರು ಹೆಚ್ಚಿನ ತನಿಖೆ ಮುಂದು ವರೆಸಿದ್ದಾರೆ.
ಇನ್ನೂ ಚಿತ್ರದುರ್ಗದ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಖರಣ ನಡೆದಿದ್ದು ಸಧ್ಯ ಮನೆಯ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಹಾಕಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….