ಬೆಂಗಳೂರು, (ಡಿ.29); ಕಾಡುಗೊಲ್ಲ, ಅಡವಿಗೊಲ್ಲ ಮತ್ತು ಹಟ್ಟಿಗೊಲ್ಲ ಸಮುದಾಯವನ್ನು ಪರಿಶಿಷ್ಟ ವರ್ಗದ ಪಟ್ಟಿಗೆ ಸೇರಿ ಸುವ ಸಂಬಂಧಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರನ್ನು ಭೇಟಿಯಾಗಿ ಸಮುದಾಯದ ಸಲ್ಲಿಸಿದರು. ಮುಖಂಡರು ಕೃತಜ್ಞತೆ
ಗುರುವಾರ ಪದ್ಮನಾಭನಗರ ನಿವಾಸದಲ್ಲಿ ಸಮು ದಾಯದ ಮುಖಂಡರು ಭೇಟಿಯಾದರು. ಈ ವೇಳೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಉಪಸ್ಥಿತರಿದ್ದರು. ಪ್ರಧಾನಿಗಳಿಗೆ ಮನವಿ ಸಲ್ಲಿಸುವ ವೇಳೆಯಲ್ಲಿಯೂ ಕುಮಾರಸ್ವಾಮಿ ಹಾಜರಿದ್ದರು.
ಮುಖಂಡರ ಜತೆ ಚರ್ಚೆ ನಡೆಸಿದ ದೇವೇಗೌಡ, ನನ್ನ ಮನವಿಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂ ದಿಸಿದೆ. ಅದರಲ್ಲಿಯೂ ಪ್ರಧಾನಿ ನರೇಂದ್ರ ಮೋದಿ ಅವರು ನಾನು ಸಲ್ಲಿಸಿದ ಮನವಿ ಪತ್ರವನ್ನು ಬುಡ ಕಟ್ಟು ಸಮುದಾಯ ವ್ಯವಹಾರಗಳ ಖಾತೆ ಸಚಿವ ಅರ್ಜುನ್ ಮುಂಡಾ ಅವರಿಗೆ ಕಳಿಸಿಕೊಟ್ಟರು. ತಕ್ಷಣವೇ ಮನವಿಗೆ ಕೇಂದ್ರ ಸಚಿವರು ಸ್ಪಂದಿಸಿದ್ದಾರೆ ಎಂದು ಹೇಳಿದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….