ಸಾಹಿತ್ಯ, ವೈಚಾರಿಕತೆ ಹಾಗೂ ಚಿಂತನೆಗಳ ಮೂಲಕ ಸಾಮಾಜಿಕ ಸಮಾನತೆಯನ್ನು ಹರಡಿದವರು ಕುವೆಂಪು

ದೊಡ್ಡಬಳ್ಳಾಪುರ, (ಡಿ.29); ಕುವೆಂಪುರವರು ಸಾಮಾಜಿಕ ಸಮಾನತೆಯನ್ನು ತಮ್ಮ ಸಾಹಿತ್ಯ, ವೈಚಾರಿಕತೆ ಹಾಗೂ ಚಿಂತನೆಗಳ ಮೂಲಕ ಹರಡಿದ್ದಾರೆ ಎಂದು ಎಂದು ಸಮಾಜವಾದಿ ಚಿಂತಕರು ಹಾಗೂ ಹೈಕೋರ್ಟಿನ ವಕೀಲರಾದ ಜಿ.ಟಿ.ನರೇಂದ್ರಕುಮಾರ್ ತಿಳಿಸಿದರು. 

ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸರ್ಕಾರಿ  ಪ್ರಥಮ ದರ್ಜೆ ಕಾಲೇಜು ವತಿಯಿಂದ ನಡೆದ. ವಿಶ್ವ ಮಾನವ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಶಿಕ್ಷಣ ಉಳ್ಳವರು ಮತ್ತು ಇಲ್ಲದವರ ನಡುವಿನ ಅಂತರವನ್ನು ಕಡಿಮೆ ಮಾಡಬೇಕು ಎಂಬುದನ್ನು  ಕುವೆಂಪುರವರ ಸಾಹಿತ್ಯ ಮತ್ತು ವೈಚಾರಿಕತೆ  ಬರಹಗಳು  ತಿಳಿಸುತ್ತವೆ. ಕುವೆಂಪುವರ ಚಿಂತನೆಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು  ಮೂಲಕ   ಪುರೋಹಿತರನ್ನು ಅವಲಂಬಿಸದೆ, ಜ್ಞಾನವಂತರಾಗಿ ಸರ್ವೋದಯದತ್ತ ಮುಖ ಮಾಡಬೇಕು ಎಂದರು.

ಜಾತಿ ಮತ್ತು ಪುರೋಹಿತಶಾಹಿ ವಂಚನೆಯನ್ನು ಅರಿಯಲು ನಿರಂಕುಶಮತಿಗಳಾಗಬೇಕೆಂದು ಕುವೆಂಪು ಹೇಳಿದರು. ಕುವೆಂಪುರವರ ಶೂದ್ರತಪಸ್ವಿ, ಜಲಗಾರ ಹಾಗೂ ಬೆರಳ್ಗೆ ಕೊರಳ್ ನಾಟಕಗಳು ಸಮಾಜದ ಮೌಢ್ಯ ಹಾಗೂ ಅವಿವೇಕವನ್ನು ಕುರಿತು ಹೇಳುವುದರ ಜೊತೆಗೆ ಸಮಾಜದಲ್ಲಿ ವಿಚಾರಶಕ್ತಿಯನ್ನು ಉದ್ಧೀಪಿಸುತ್ತವೆ. ಸ್ವಸ್ಥ ಸಮಾಜ ನಿರ್ಮಾಣಕ್ಕಾಗಿ ನಾವು ಧರ್ಮಗಳ ಆಚೆಗೂ ಬದುಕುವ ಚೈತನ್ಯವನ್ನು ಹೊಂದಬೇಕಾಗುತ್ತದೆ.

ಇಂದಿನ ವರದಕ್ಷಿಣೆ ಹಾಗೂ ಆಡಂಬರದ ಮದುವೆಯ ಅನಿಷ್ಠಗಳನ್ನು ಮೀರಿ ಮಂತ್ರಮಾಂಗಲ್ಯದಂತಹ ಸರಳ ಹಾಗೂ ವೈಚಾರಿಕ ಜೀವನ ದೃಷ್ಟಿಯ ದೀಕ್ಷೆಯತ್ತ ಯುವಜನ ಆಕರ್ಷಿತರಾಗಬೇಕಾಗುತ್ತದೆ. ಕುವೆಂಪು ವಿಚಾರಧಾರೆಗಳನ್ನು ಇಂದಿನ ಯುವಕರ ಅರಿಯುವುದರಿಂದ ಸಮಾಜ ಆರೋಗ್ಯವಾಗಿರಲು ಸಾಧ್ಯವಾಗುತ್ತದೆ ಎಂದರು. 

ಕವಿ ಮತ್ತು ಚಿಂತಕ  ಡಾ.ಪ್ರಕಾಶ್ ಮಂಟೇದ ಮಾತನಾಡಿ, ಕುವೆಂಪು ಈ ನಾಡು ಹಾಗೂ ನಮ್ಮ ಬದುಕಿನ ಅದಮ್ಯ ಚೇತನ. ವಿದ್ಯಾರ್ಥಿಗಳು ಆತ್ಮಶ್ರೀಗಳಾಗಲು ಇಂತಹ ಮಾನವತವಾದಿ ಲೇಖಕರನ್ನು ಓದುತ್ತ ತಮ್ಮ ಚೈತನ್ಯವನ್ನು ಉದ್ಧೀಪನಗೊಳಿಸಿಕೊಳ್ಳಬೇಕು. ಅಲ್ಲದೆ, ಯುವ ಸಮುದಾಯ ಕುವೆಂಪು ಓದಿನ ಮೂಲಕ ಎಲ್ಲ ಜನರನ್ನು ಪ್ರೀತಿಸುವ ಸಮಾಜವಾದಿ ಚೇತನವಾಗಿ ಹೊರಹೊಮ್ಮಬೇಕೆಂದು ಎಂದರು. 

ಪ್ರಾಂಶುಪಾಲ ಡಾ.ಸದಾಶಿವ ರಾಮಚಂದ್ರಗೌಡ ಮಾತನಾಡಿ,  ಕುವೆಂಪುರವರನ್ನು ಒಂದು  ಜಾತಿ ಮತ್ತು ವೈಚಾರಿಕ ದೃಷ್ಟಿಕೋನಕ್ಕೆ ಕಟ್ಟಿಹಾಕದೆ  ಮುಕ್ತ ಮನಸ್ಸಿನಿಂದ ಓದಿ ತಮ್ಮ ಜ್ಞಾನವನ್ನು ವಿಕಸನ  ಮಾಡಿಕೊಳ್ಳಬೇಕು ಎಂದರು.     

ಇದೇ ಸಂದರ್ಭದಲ್ಲಿ ಕುವೆಂಪುರವರ ವಿಶ್ವಮಾನವತೆ ಎಂಬ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೂ ಬಹುಮಾನ ವಿತರಣೆ ನಡೆಯಿತು.

ಪ್ರಬಂಧ ಸ್ಪರ್ಧೆಯಲ್ಲಿ  ಆಶಾ ಪ್ರಥಮ ಸ್ಥಾನ,  ತೃತೀಯ ಬಿ.ಎ. , ಮೀನ ದ್ವಿತೀಯ ಸ್ಥಾನ  ಬಿ.ಎ. ಮಹಿಳಾ ಕಾಲೇಜು, ಹಾಗೂ ಭವ್ಯ ತೃತೀಯ ಬಿ.ಎ ಪಡೆದರು.

ಕಾರ್ಯಕ್ರಮದಲ್ಲಿ  ಪ್ರೊ.ಉಮೇಶ್, ಪ್ರೊ. ಸತೀಶ್ , ಡಾ. ಬಿ.ಆರ್ ಗಂಗಾಧರಯ್ಯ,  ಕವಿ ಚಿನ್ನುಪ್ರಕಾಶ್,  ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳಾದ. ಉದಯರಾಧ್ಯ, ಫಷೀರ್, ಕಾಲೇಜಿನ  ಅಧ್ಯಾಪಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಕೈಗಾರಿಕಾ ಸಚಿವರಿಂದ ರೂ 2 ಕೋಟಿ ಲಾಭಾಂಶ ಸಿಎಂ ಸಿದ್ದರಾಮಯ್ಯರಿಗೆ ಹಸ್ತಾಂತರ

ಕೈಗಾರಿಕಾ ಸಚಿವರಿಂದ ರೂ 2 ಕೋಟಿ ಲಾಭಾಂಶ ಸಿಎಂ ಸಿದ್ದರಾಮಯ್ಯರಿಗೆ ಹಸ್ತಾಂತರ

ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ ಅವರು ಕೆ.ಐ.ಎ.ಡಿ.ಬಿ.ಯ ರೂ 2 ಕೋಟಿ ಲಾಭಾಂಶವನ್ನು ಮುಖ್ಯಮಂತ್ರಿ ಅವರ ಪರಿಹಾರ ನಿಧಿಗಾಗಿ ಸಿಎಂ ಸಿದ್ದರಾಮಯ್ಯ (Cmsiddaramaiah) ಹಸ್ತಾಂತರಿಸಿದರು.

[ccc_my_favorite_select_button post_id="117055"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ಜಾಲಪ್ಪ ಕಾಲೇಜು ವಸತಿ ಗೃಹದಲ್ಲಿ ವಾಸವಿದ್ದ ವ್ಯಕ್ತಿಯೋರ್ವನ ನಡು ರಸ್ತೆಯಲ್ಲಿ ಕೊಚ್ಚಿಕೊಂದಿರುವ (Brutally Murdered) ಘಟನೆ ಡಿಕ್ರಾಸ್-ಟಿಬಿ ವೃತ್ತದ ನಡುವಿನ ಚರ್ಚ್‌ ಗೇಟ್ ಬಳಿ ಸೋಮವಾರ ರಾತ್ರಿ 11.30ಕ್ಕೆ ನಡೆದಿದೆ

[ccc_my_favorite_select_button post_id="117043"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!