ದೊಡ್ಡಬಳ್ಳಾಪುರ, (ಜ.08); ಡೆತ್ ನೋಟ್ ಬರೆದಿಟ್ಟ ಪಿಯುಸಿ ವಿದ್ಯಾರ್ಥಿನಿಯೋರ್ವರು ನೇಣಿಗೆ ಶರಣಾಗಿರುವ ಘಟನೆ ತ್ಯಾಗರಾಜ ನಗರದಲ್ಲಿ ಸಂಭವಿಸಿದೆ.
ಮೃತ ಯುವತಿಯನ್ನು ಜಾನ್ಸಿ (17 ವರ್ಷ) ಎಂದು ಗುರುತಿಸಲಾಗಿದ್ದು, ನಗರದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ PUC ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.
ಇಂದು ಕಾಲೇಜಿನಿಂದ ಬಂದ ಯುವತಿ, ಮನೆಯಲ್ಲಿ ಯಾರು ಇರದ ವೇಳೆ ಡೆತ್ ನೋಟ್ ಬರೆದಿಟ್ಟು, ಮನೆಯ ಹಾಲ್‌ನಲ್ಲಿ ಸಿಮೆಂಟ್ ಶೀಟ್ ಗೆ ಅಳವಡಿಸಿದ್ದ ಕಂಬಿಗೆ ನೇಣು ಬಿಗಿದು ಕೊಂಡು ಸಾವನಪ್ಪಿದ್ದಾರೆಂದು ಮೂಲಗಳು ತಿಳಿಸಿದ್ದು, ಘಟನೆಗೆ ಕಾರಣ ತಿಳಿದು ಬಂದಿಲ್ಲ.
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಸ್ಥಳಕ್ಕೆ ಇನ್ಸ್‌ಪೆಕ್ಟರ್ ಅಮರೇಶ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….