ನವದೆಹಲಿ, (ಜ.08); 2024ರ ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯು ಜ.14ರಿಂದ ಮೆಲ್ಬೋರ್ನ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ಸ್ಪೇನ್ ನ ಸ್ಟಾರ್ ಟೆನಿಸ್ ಆಟಗಾರ ರಾಫೆಲ್ ನಡಾಲ್ ಈ ಟೂರ್ನಿಯಲ್ಲಿ ಆಡುತ್ತಿಲ್ಲ. ತನಗೆ ಸ್ನಾಯು ನೋವು ಇದೆ. ಇದರಿಂದಾಗಿ ಆಸ್ಟ್ರೇಲಿಯನ್ ಓಪನ್‌ನಿಂದ ತಮ್ಮ ಹೆಸರನ್ನು ಹಿಂಪಡೆದಿರುವುದಾಗಿ ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.
ನಡಾಲ್ ಕಳೆದ ಒಂದು ವರ್ಷದಿಂದ ಹೊರಗುಳಿದಿದ್ದರು. ಬಳಿಕ ಅವರು ಬ್ರಿಸ್ಬೇನ್ ಅಂತಾರಾಷ್ಟ್ರೀಯ ಪಂದ್ಯಾವಳಿಯ ಮೂಲಕ ಟೆನಿಸ್ ಅಂಗಣಕ್ಕೆ ಮರಳಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….