ದೊಡ್ಡಬಳ್ಳಾಪುರ, (ಜ.08); ಚಿರತೆ ದಾಳಿ ನಡೆಸಿದ ಪರಿಣಾಮ ಮೇಕೆಯೊಂದು ಸಾವನಪ್ಪಿರುವ ಘಟನೆ ತಾಲೂಕಿನ ಹೊಸಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಇತ್ತಿಚೆಗಷ್ಟೆ ಇದೇ ವ್ಯಾಪ್ತಿಯ ಕುಕ್ಕಲಹಳ್ಳಿ ಗ್ರಾಮಕ್ಕೆ ನುಗ್ಗಿ ಮೇಕೆ ಎಳೆದೊಯ್ದಿದ್ದ ಚಿರತೆ, ಸೋಮವಾರ ಬೆಳಗ್ಗಿನ ಜಾವ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದ ಮುನಿರಾಜು ಎನ್ನುವವರು ಮನೆಯಲ್ಲಿನ ಕೊಟ್ಟಿಗೆಗೆ ನುಗ್ಗಿ ಮೇಕೆಯ ಕುತ್ತಿಗೆಗೆ ಬಾಯಿ ಹಾಕಿ ರಕ್ತ ಕುಡಿದು, ಕೊಂದುಹಾಕಿದೆ.
ಈ ಘಟನೆಯಿಂದ ಮುನಿರಾಜು ಎನ್ನುವವರಿಗೆ ಸಾವಿರಾರು ರೂ. ನಷ್ಟವಾಗಿದ್ದರೆ, ಪದೇ ಪದೇ ಈ ವ್ಯಾಪ್ತಿಯಲ್ಲಿ ಚಿರತೆ ದಾಳಿ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ.
ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಗೆ ಕ್ರಮಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….