ಬೆಂಗಳೂರು, (ಜ.08): ಮಧ್ಯರಾತ್ರಿ ವರೆಗೆ ಪಬ್ನಲ್ಲಿ ಪಾರ್ಟಿ ಮಾಡಿದ ಆರೋಪ ಎದುರಿಸುತ್ತಿರುವ ಕಾಟೇರ ಚಿತ್ರತಂಡಕ್ಕೆ ಸಂಕಷ್ಟ ಎದುರಾಗಿದೆ. ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಸೇರಿದಂತೆ ಚಿತ್ರತಂಡದ ಕೆಲವರಿಗೆ ವಿಚಾರಣೆಗೆ ಹಾಜರಾಗುವಂತೆ ಸುಬ್ರಮಣ್ಯನಗರ ಪೊಲೀಸರು ನೋಟಿಸ್ ನೀಡಿದ್ದಾರೆ.
ಇತ್ತೀಚಿಗೆ ಕಾಟೇರ ಚಿತ್ರತಂಡ ರಾಜಾಜಿನಗರದ ಖಾಸಗಿ ರೆಸ್ಟೋಬಾರ್ ನಲ್ಲಿ ಸಕ್ಸಸ್ ಪಾರ್ಟಿ ಮಾಡಿತ್ತು. ನಿಯಮ ಉಲ್ಲಂಘಿಸಿ ಬೆಳಗ್ಗಿನವರೆಗೂ ಪಾರ್ಟಿ ನಡೆಸಿದ ಆರೋಪದಡಿ ಮಾಲೀಕರ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾರ್ಟಿಯಲ್ಲಿದ್ದ ನಟ ಹಾಗೂ ಚಿತ್ರತಂಡಕ್ಕೆ ಪೊಲೀಸರು ನೋಟಿಸ್ ನೀಡಿದ್ದಾರೆ. ಜೊತೆಗೆ ನಿಗದಿತ ಸಮಯದಲ್ಲಿ ಪಬ್ ಬಂದ್ ಮಾಡಿಸದ ಪೊಲೀಸ್ ಸಿಬ್ಬಂದಿಗೂ ಕೂಡ ನೋಟಿಸ್ ಜಾರಿ ಆಗಿದೆ ಎಂದು ಮೂಲಗಳು ತಿಳಿಸಿವೆ.
ಅಬಕಾರಿ ಕಾಯಿದೆ ಷರತ್ತುಗಳ ಪ್ರಕಾರ ಬೆಳಗ್ಗೆ 10 ಗಂಟೆಯಿಂದ ರಾತ್ರಿ 1 ಗಂಟೆಯವರೆಗೆ ಮಾತ್ರ ರೆಸ್ಕೋಬಾರ್ ತೆರೆಯಲು ಅವಕಾಶವಿದೆ, ಆದರೆ ಜಟ್ಲಾಗ್ ರೆಸ್ಟೋಬಾರ್ ಈ ನಿಮಯಮ ಉಲ್ಲಂಘಿಸಿ ಬೆಳಗಿನ ಜಾವ 3.30ರವರೆಗೂ ಪಾರ್ಟಿ ಮಾಡಲು ಸೆಲೆಬ್ರಿಟಿಗಳಿಗೆ ಅವಕಾಶ ಕೊಟ್ಟಿತ್ತು ಎನ್ನಲಾಗಿದೆ.
ಇನ್ನು ಕಾಟೇರ ಚಿತ್ರ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಚಿತ್ರದ ಪ್ರಚಾರಕ್ಕಾಗಿ ನಟ ದರ್ಶನ್ ಸೇರಿದಂತೆ ಚಿತ್ರತಂಡ ವಿದೇಶಕ್ಕೆ ಹಾರಿದ್ದಾರೆ. ಅಲ್ಲಿಂದ ವಾಪಾಸ್ ಬಂದ ಬಳಿಕ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….