ಲಕ್ಷ್ಮೇಶ್ವರ್, (ಜ.08); ನಟ ಯಶ್ ಅವರ ಜನ್ಮದಿನದ ಪ್ರಯುಕ್ತ ಶುಭ ಕೋರಲು ಕಟೌಟ್ ನಿಲ್ಲಿಸುವಾಗ ವಿದ್ಯುತ್ ತಂಗಿ ತಗುಲಿ ಮೂವರು ಅಭಿಮಾನಿಗಳು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಮಧ್ಯರಾತ್ರಿ ಗದಗ ಜಿಲ್ಲೆಯ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ.
ಹನುಮಂತ ಹರಿಜನ ( 21ವರ್ಷ), ಮುರಳಿ ನಡವಿನಮನಿ ( 20 ವರ್ಷ), ನವೀನ್ ಗಾಜಿ (19 ವರ್ಷ) ಮೃತರಾಗಿದ್ದಾರೆ. ಇನ್ನುಳಿದಂತೆ ಮೂವರಿಗೆ ಗಂಭೀರ ಗಾಯವಾಗಿದ್ದು, ಲಕ್ಷ್ಮೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಯಶ್ ಜನ್ಮದಿನ ಇದೆ ಎಂದು ಸೂರಣಗಿ ಗ್ರಾಮದ ಅಂಬೇಡ್ಕರ್ ನಗರದಲ್ಲಿ ಅವರ ಅಭಿಮಾನಿಗಳು ಮಧ್ಯರಾತ್ರಿಯೇ ಕಟೌಟ್ ಹಾಕಬೇಕು ಅಂತ ಮುಂದಾಗಿದ್ದರು. ಆಗ ಕಟೌಟ್ ವಿದ್ಯುತ್ ತಂತಿಗೆ ತಗುಲಿದ್ದು, ವಿದ್ಯುತ್ ಹರಿದು ಶಾಕ್ ಆಗಿದೆ. ಅಲ್ಲಿಯೇ ಮೂವರು ಒದ್ದಾಡಿ ಪ್ರಾಣ ಬಿಟ್ಟಿದ್ದಾರೆ.
ಈ ವಿಡಿಯೋ ಸ್ಥಳೀಯ ಮೊಬೈಲ್‌ನಲ್ಲಿ ಸೆರೆಯಾಗಿದೆ ಎನ್ನಲಾಗಿದೆ. ಇನ್ನು ಲಕ್ಷ್ಮೇಶ್ವರದಲ್ಲಿ ಪ್ರಕರಣ ದಾಖಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….