ದೊಡ್ಡಬಳ್ಳಾಪುರ, (ಜ.08); ಅನ್ನಭಾಗ್ಯ ಯೋಜನೆಯಡಿ ಘೋಷಣೆ ಮಾಡಿದಂತೆ ಹೆಚ್ಚುವರಿ ಅಕ್ಕಿ ವಿತರಿಸಲು ಸದ್ಯಕ್ಕೆ ಅಕ್ಕಿ ಸಿಗುತ್ತಿಲ್ಲ. ಅಕ್ಕಿ ಖರೀದಿಗೆ ಆಂಧ್ರಪ್ರದೇಶದೊಂದಿಗೆ ಮಾತುಕತೆ ನಡೆಸಲಾಗಿದೆ. ಅಲ್ಲಿಯೂ ಅಕ್ಕಿ ಕೊರತೆ ಇದೆ. ಅಕ್ಕಿ ಖರೀದಿಯ ಮಾತುಕತೆಗಳು ಇನ್ನು ಅಂತಿಮವಾಗಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು.
ಅವರು ತಾಲ್ಲೂಕಿನ ಹೆಗ್ಗಡಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೂಳ್ಯ ಗ್ರಾಮದಲ್ಲಿ ನಿರ್ಮಿಸಲಾಗಿರುವ ನೂತನ ಶಾಲಾ ಕಟ್ಟಡ ಉದ್ಘಾಟನೆ ಹಾಗೂ ಜಿಕೆವಿಕೆ ವಿದ್ಯಾರ್ಥಿಗಳ ಕೃಷಿ ಕಾರ್ಯಾನುಭವ ಸಮಾರೋಪ ಸಭೆಯಲ್ಲಿ ಮಾತನಾಡಿದರು.
ರಾಜ್ಯದಲ್ಲಿ ಮಳೆ ಕೊರತೆಯಾದ ನಂತರ ಪಡಿತರ ವ್ಯವಸ್ಥೆಯಲ್ಲಿ ಬಿಪಿಎಲ್ ಕಾರ್ಡ್ಗಳನ್ನು ಹೊಂದಿರುವ ಫಲಾನುಭವಿಗಳಿಗೆ ಐದು ಕೆ.ಜಿ. ಅಕ್ಕಿ ಬದಲಿಗೆ ಈಗ ಬ್ಯಾಂಕ್ ಖಾತೆಗಳಿಗೆ ಹಣ ಜಮೆ ಮಾಡಲಾಗುತ್ತಿದೆ. ಆದರೆ ಸಾಕಷ್ಟು ಜನ ಅಕ್ಕಿಯನ್ನೇ ನೀಡುವಂತೆ ಕೇಳುತ್ತಿದ್ದಾರೆ.
ನಮ್ಮ ರಾಜ್ಯವು ಸೇರಿದಂತೆ ಬಹುತೇಕ ರಾಜ್ಯಗಳಲ್ಲಿ ಈ ವರ್ಷದ ಮುಂಗಾರಿನಲ್ಲಿ ಮಳೆ ಕೊರತೆಯಿಂದಾಗಿ ಬರ ಪರಿಸ್ಥಿತಿ ತಲೆದೊರಿದೆ. ಹೀಗಾಗಿ ಸದ್ಯಕ್ಕೆ ಅಕ್ಕಿ ವಿತರಿಸುವುದು ಕಷ್ಟವಾಗಲಿದೆ ಎಂದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….