ವಿಜಯಪುರ, (ಜ.08): ದೆಹಲಿಯ ಭೇಟಿ ಫಲಪ್ರದವಾಗಿದೆ. ನಾನು ಬಿಜೆಪಿಗೆ ಮರಳಿ ಸೇರಲು ಪ್ರಮುಖ ಕಾರಣವೇ ಅಮಿತ್ ಶಾ. ಭವಿಷ್ಯದಲ್ಲಿ ಏನೆಲ್ಲಾ ಆಗುತ್ತದೆ ಎಂದು ನನಗೆ ಹೇಳಿದ್ದಾರೆ ಎಂದು ಹೈಕಮಾಂಡ್ ಭೇಟಿ ಬಳಿಕ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ದೆಹಲಿಯ ಭೇಟಿ ಫಲಪ್ರದವಾಗಿದೆ. ದೆಹಲಿಗೆ ಬರಲು ರಾಷ್ಟ್ರೀಯ ಅಧ್ಯಕ್ಷರಿಂದ ನನಗೆ ಕರೆ ಬಂದಿದ್ದ ಕಾರಣ ಹೋಗಿದ್ದೆ. ರಾಷ್ಟ್ರೀಯ ಅಧ್ಯಕ್ಷರ ಭೇಟಿಗೂ ಮುನ್ನ ಅರುಣ್ ಸಿಂಗ್ ಹಾಗೂ ರಾಧಾಮೋಹನ್ ಅಗರವಾಲ್ ಅವರನ್ನು ಭೇಟಿ ಮಾಡಲು ತಿಳಿಸಿದ್ದರು. ಅವರಿಬ್ಬರ ಬಳಿ ಮಾತನಾಡಿದ ಮಾಹಿತಿಯನ್ನು ತಿಳಿದುಕೊಂಡ ಬಳಿಕ ಅಮಿತ್ ಶಾ ಹಾಗೂ ನಡ್ಡಾ ಅವರನ್ನ ಭೇಟಿಯಾಗಿದ್ದು, 25 ನಿಮಿಷಗಳ ಕಾಲ ಸುದೀರ್ಘ ಮಾತುಕತೆ ನಡೆಯಿತು. ಈ ವೇಳೆ ಎಲ್ಲಾ ವಿಚಾರಗಳನ್ನ ಕೇಂದ್ರದ ನಾಯಕರ ಮುಂದೆ ಹೇಳಿದ್ದೇನೆ ಎಂದರು
ಎಲ್ಲವನ್ನೂ ಮುಂದಿನ ದಿನಗಳಲ್ಲಿ ಸರಿಪಡಿಸುವುದಾಗಿ ಕೇಂದ್ರದ ನಾಯಕರು ಭರವಸೆ ನೀಡಿದ್ದಾರೆ. ಏನಾದರೂ ಹೇಳುವುದಿದ್ದರೆ ನನಗೆ ನೇರವಾಗಿ ಹೇಳಿ ಎಂದು ನಡ್ಡಾ ಹೇಳಿದ್ದಾರೆ. ಈ ವೇಳೆ ನಿಮ್ಮ ಅಪ್ಪೋಯಿಂಟೆಂಟ್ ಸಿಗಲ್ಲ ಯಡಿಯೂರಪ್ಪ, ವಿಜಯೇಂದ್ರಗೆ ಮಾತ್ರ ಸಿಗುತ್ತದೆ ಎಂದು ನಡ್ಡಾ ಅವರಿಗೆ ನಾನು ಮನವಿ ಮಾಡಿಕೊಂಡೆ. 2 ದಿನ ಮುಂಚಿತವಾಗಿ ಮಾಹಿತಿ ನೀಡಿ ನಾನು ಭೇಟಿಯಾಗಲು ಸಮಯ ನೀಡುವೆ ಎಂದು ಹೇಳಿದ್ದಾರೆ ಎಂದರು.
ಏನೇ ಇದ್ದರೂ ನಮಗೆ ತಿಳಿಸಬೇಕು ಯಾರ ಮುಲಾಜಿ ಇಲ್ಲದೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ. ನನಗೆ ಯಾವುದೇ ನೋಟಿಸ್ ಇಲ್ಲ. ಎಚ್ಚರಿಕೆ ಇಲ್ಲ. ನನ್ನ ಜೊತೆ ಇಬ್ಬರು ನಾಯಕರು ಗೌರವಯುತವಾಗಿ ನಡೆದುಕೊಂಡಿದ್ದಾರೆ ಎಂದು ತಿಳಿಸಿದರು.
ಇದಷ್ಟೇ ಅಲ್ಲ ಬಹಳ ವಿಚಾರ ಪ್ರಸ್ತಾಪ ಮಾಡಿದ್ದೇನೆ. ಇಲ್ಲಿ ಎಲ್ಲವನ್ನೂ ಹೇಳಲಾಗಲ್ಲ ಇಲ್ಲಿ ಏನೆಲ್ಲ ಮಾಹಿತಿ ನೀಡಬೇಕೆಂದು ಹೇಳಿದ್ದಾರೆ.
ರಾಜ್ಯ ಬಿಜೆಪಿ ಉಸ್ತುವಾರಿ ಬದಲಾವಣೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಈ ಕುರಿತು ನನಗೆ ಯಾವುದೇ ಮಾಹಿತಿ ಇಲ್ಲ. ಅದೆಲ್ಲಾ ಹೈಕಮಾಂಡ್ ನಿರ್ಣಯ. ಬದಲಾವಣೆ ಯಾರು ಮಾಡುತ್ತಾರೆ ಗೊತ್ತಿಲ್ಲ.
ಕೇಂದ್ರ ವರಿಷ್ಠ ಮಂಡಳಿಗೆ ಏನು ಮಾಹಿತಿ ಇರುತ್ತದೆಯೋ ಆ ಆಧಾರದ ಮೇಲೆ ಬದಲಾವಣೆ ಮಾಡುತ್ತಾರೆ. ನಾನು ಬದಲಾವಣೆ ಆಗಲಿ ಎಂದು ಹೇಳಿದರು ಆಗಲ್ಲ. ಬದಲಾವಣೆ ಮಾಡಬೇಡಿ ಎಂದರು ಆಗಲ್ಲ ಎಂದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….