ಸುಮಲತಾ ನನಗೇನು ಶತ್ರು ಅಲ್ಲ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು, (ಜ.08); ನಮ್ಮ ಅಕ್ಕಿ ಬಳಸಿಕೊಂಡು ಜನತೆಗೆ ಬಿಜೆಪಿ ಮಂತ್ರಾಕ್ಷತೆ ಹಂಚುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ನೀಡಿರುವ ಹೇಳಿಕೆಗೆ ತಿರುಗೇಟು ಕೊಟ್ಟ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಇವರ ಅಕ್ಕಿ ಎಂದರೆ ದೊಡ್ಡ ಆಲದಹಳ್ಳಿಯ ಅವರ ತೋಟದಲ್ಲಿ ಬೆಳೆದಿರುವುದಾ? ಎಂದು ಟಾಂಗ್ ಕೊಟ್ಟರು.

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು ರಾಜಕೀಯ ಮಾಡುತ್ತಿರುವುದು ಅವರು. ಇವರು ಅಕ್ಕಿಯನ್ನು ತಮ್ಮ ಸ್ವಗ್ರಾಮ ದೊಡ್ಡ ಆಲದಹಳ್ಳಿಯಲ್ಲಿ ಬೆಳೆದು ಕಳಿಸಿ ಕೊಟ್ಟಿದ್ದಾರೆಯೇ? ಎಂದು ಅವರು ಡಿಕೆಶಿ ವಿರುದ್ದ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ರಾಮ ಮಂದಿರಕ್ಕೆ ನಮಗೆ ಆಹ್ವಾನ ನೀಡಿಲ್ಲ ಎಂದು ದೂರಿರುವ ಡಿಕೆಶಿ ಆರೋಪದ ಬಗ್ಗೆ ಪ್ರತ್ಯುತ್ತರ ನೀಡಿದ ಅವರು; ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಕರೆಯಬೇಕಾ ಅವರನ್ನು? ಪ್ರಧಾನಿಗಳು ಈಗಾಗಲೇ ಹೇಳಿದ್ದಾರೆ. ಉದ್ಘಾಟನೆ ದಿನ ಗೊಂದಲ ಆಗುವುದು  ಬೇಡ. ಮುಂದೆ ದೇವಾಲಯವನ್ನು ಸಾರ್ವಜನಿಕರ ಪ್ರವೇಶಕ್ಕೆ ಮುಕ್ತಗೊಳಿಸಿದಾಗ ಎಲ್ಲರೂ ಶ್ರೀರಾಮ ದೇವರ ದರ್ಶನ ಪಡೆಯಬಹುದು. ಆಗ ಯಾರು ಬೇಕಾದರೂ  ಹೋಗಬಹುದು. ಅದಕ್ಕೇನು ಪರ್ಮಿಷನ್ ಬೇಕಾ? ಎಂದು ಚಾಟಿ ಬೀಸಿದರು.

ಉದ್ಘಾಟನೆ ಕಾರ್ಯಕ್ರಮದಲ್ಲಿ ಜಾಸ್ತಿ ಜನ ಇರುತ್ತಾರೆ. ಸಮಸ್ಯೆ ಆಗಬಾರದು ಎಂದು ಪ್ರಧಾನಿಗಳೇ ಮನವಿ ಮಾಡಿಕೊಂಡಿದ್ದಾರೆ. ರಾಮನ ಬಗ್ಗೆ ಭಕ್ತಿ ಇರುವವರು, ದೇವರ ಬಗ್ಗೆ ನಂಬಿಕೆ ಇರುವವರು ಅಲ್ಲಿಗೆ ಹೋಗಬಹುದು. ಡಿ.ಕೆ. ಶಿವಕುಮಾರ್ ಮನೆಯಲ್ಲಿ ಬರೀ ದೇವರ ಪೋಟೋಗಳು ಇವೆ. ದೇವರ ರಕ್ಷಣೆ ಇಲ್ಲದೆ ಹೋದರೆ ಅವರು ಉಳಿಯಬೇಕಲ್ಲವಾ? ಅದಕ್ಕೆ ಫೋಟೋಗಳನ್ನು ಹಾಕಿಕೊಂಡಿದ್ದಾರೆ ಕುಮಾರಸ್ವಾಮಿ ಅವರು ಡಿಕೆಶಿ ಅವರಿಗೆ ತಿರುಗೇಟು ನೀಡಿದರು.

ಸುಮಲತಾ ಅವರು ನನಗೇನು ಶತ್ರು ಅಲ್ಲ; ಅಗತ್ಯಬಿದ್ದರೆ ಸಂಸದೆ ಸುಮಲತಾ ಅವರನ್ನು ಭೇಟಿ ಮಾಡುತ್ತೇನೆ ಎಂದು ತಾವು ನೀಡಿರುವ ಹೇಳಿಕೆಯ ಬಗ್ಗೆ ಮತ್ತೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು, ಸುಮಲತಾ ಅವರು ನನಗೇನು ಶತ್ರು ಅಲ್ಲ. ಅವರು ಕಳೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡಿದ್ದಾರೆ. ಅವರನ್ನು ಭೇಟಿ ಮಾಡುವುದರಲ್ಲಿ ತಪ್ಪೇನು? ಆ ಹಿನ್ನೆಲೆಯಲ್ಲಿ ಈ ಹೇಳಿಕೆ ಅಷ್ಟೇ ಎಂದರು ಮಾಜಿ ಮುಖ್ಯಮಂತ್ರಿಗಳು.

ಅಯೋಧ್ಯೆಗೆ ದೇವೇಗೌಡರು ಹೋಗುವ ವಿಚಾರ: ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿಗಳಾದ  ದೇವೇಗೌಡರು ಹೋಗುವ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು; ಮಾಜಿ ಪ್ರಧಾನಿಗಳ ಆರೋಗ್ಯದ ಪರಿಸ್ಥಿತಿಗಳ ಆಧಾರದ ಮೇಲೆ ಹೋಗುವ  ಬಗ್ಗೆ ಮುಂದೆ ನಿರ್ಧಾರ ಮಾಡುತ್ತೇವೆ. ದೇವೇಗೌಡರು ಪ್ರಯಾಣ ಮಾಡುವುದಕ್ಕೆ ಅವರಿಗೆ ಚಿಕಿತ್ಸೆ ನೀಡುತ್ತಿರುವ  ವೈದ್ಯರ ಸಲಹೆ ಏನಿದೆ, ಅದರ ಮೇಲೆ ಹೋಗಬೇಕಾ? ಬೇಡವಾ ಅಂತ ತೀರ್ಮಾನ ಮಾಡುತ್ತೇವೆ ಎಂದರು ಅವರು.

ಮಾಜಿ ಸಚಿವ ಬಂಡೆಪ್ಪ ಕಾಶೇಂಪೂರ್, ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್. ಎಂ. ರಮೇಶ್ ಗೌಡ ಸೇರಿದಂತೆ ಅನೇಕ ಮುಖಂಡರು ಹಾಜರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ನನ್ನ ಆಯಸ್ಸನ್ನು ಭಗವಂತ ನನ್ನ ತಂದೆಗೆ ಧಾರೆ ಎರಿಬೇಕು; ನಿಖಿಲ್‌ ಕುಮಾರಸ್ವಾಮಿ

ನನ್ನ ಆಯಸ್ಸನ್ನು ಭಗವಂತ ನನ್ನ ತಂದೆಗೆ ಧಾರೆ ಎರಿಬೇಕು; ನಿಖಿಲ್‌ ಕುಮಾರಸ್ವಾಮಿ

ಕುಮಾರಣ್ಣ ಆರೋಗ್ಯ ಸರಿ ಇಲ್ಲ ಅಂತ ರಾಜ್ಯದಲ್ಲೆಡೆ ಚರ್ಚೆಗಳು ಶುರುವಾಗಿದೆ, ಅವರ ತಂದೆ ತಾಯಿ ಆಶೀರ್ವಾದ, ಭಗವಂತನ ಕೃಪೆ, ನಿಮ್ಮೆಲ್ಲರ ಪ್ರೀತಿಯ ಹಾರೈಕೆಯಿಂದ ಕುಮಾರಣ್ಣ ಆರೋಗ್ಯವಾಗಿದ್ದಾರೆ: ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="113069"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ಮತ್ತೊಂದು ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಸಾಗುತ್ತಿದ್ದ ಯುವಕನ ಮೇಲೆರಗಿದ (Accident) ಲಾರಿ, ಸ್ಥಳದಲ್ಲಿಯೇ ಬಲಿ ಪಡೆದಿರುವ ಘಟನೆ

[ccc_my_favorite_select_button post_id="113040"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!