ರಾಮನಗರ, (ಜ.12); ಮೈಸೂರು ಲೋಕಸಭೆ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರು ಇಂದು ಬೆಳಗ್ಗೆ ಬಿಡದಿಯ ತೋಟದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಕಮಲ-ದಳ ಮೈತ್ರಿ ಮಾಡಿಕೊಂಡಿದ್ದು, ಅಂದಿನಿಂದ ಅನೇಕ ಬಿಜೆಪಿ ಮುಖಂಡರು ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತಿದ್ದಾರೆ.
ಇತ್ತೀಚೆಗಷ್ಟೇ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹ ಅವರ ಮೇಲೆ ಕೇಳಿ ಬಂದಿದ್ದ ಮರಗಳ ಕಳವು ಪ್ರಕರಣದ ಕುರಿತಂತೆ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದು, ಪ್ರತಾಪ್ ಸಿಂಹರ ಪರ ವಕಾಲತ್ತು ವಹಿಸಿದ್ದರು.
ಈ ಹಿನ್ನಲೆಯಲ್ಲಿ ಇಂದಿನ ಭೇಟಿ ಮಹತ್ವದ್ದಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….