ಕೊಪ್ಪಳ, (ಜ27): ದಕ್ಷಿಣ ಭಾರತದ ಕುಂಭಮೇಳ ಎಂದು ಕರೆಯಲ್ಪಡುವ ಗವಿಮಠದ ಗವಿಸಿದ್ದೇಶ್ವರ ಜಾತ್ರೆಗೆ ಧ್ವಜಾರೋಹಣ ಮೂಲಕ ಸುತ್ತೂರು ಶ್ರೀಗಳಿಂದ ಚಾಲನೆ ನೀಡಿದರು. ಪಲ್ಲಕ್ಕಿಯಲ್ಲಿ ಗವಿಸಿದ್ದೇಶ್ವರ ಮೂರ್ತಿ ತಂದು ರಥದಲ್ಲಿ ಪ್ರತಿಷ್ಠಾಪಿಸಲಾಗಿತ್ತು.
ಮೈದಾನ, ಬೆಟ್ಟ, ಕಟ್ಟಡ ಎಲ್ಲಿ ನೋಡಿದರಲ್ಲಿ ನಿಂತು ಲಕ್ಷಾಂತರ ಜನರು ರಥೋತ್ಸವವನ್ನು ನೋಡಿ ಕಣ್ತುಂಬಿಕೊಂಡಿದ್ದಾರೆ.
ಕೊಪ್ಪಳದ ಹನ್ನೊಂದನೆ ಪೀಠಾಧಿಪತಿಯಾಗಿರುವ ಗವಿಸಿದ್ದೇಶ್ವರ ಸ್ವಾಮೀಜಿ ಸ್ಮರಣಾರ್ಥವಾಗಿ ಪ್ರತಿ ವರ್ಷ ಗವಿಸಿದ್ದೇಶ್ವರರ ಜಾತ್ರೆ ವೈಭವಯುತವಾಗಿ ನಡೆಸಲಾಗುತ್ತದೆ. ಅದರಂತೆ ಈ ವರ್ಷ ಕೂಡ ಜಾತ್ರೆ ಅದ್ದೂರಿಯಾಗಿ ಆರಂಭವಾಗಿದ್ದು, ಮುಂಜಾನೆಯಿಂದಲೇ ಮಠಕ್ಕೆ ಲಕ್ಷಾಂತರ ಭಕ್ತರ ದಂಡು ಹರಿದು ಬಂದಿದೆ.
ಶ್ರೀ ಗವಿಸಿದ್ದೇಶ್ವರ ಮಠ ಅಥವಾ ಗವಿಮಠವು ಕೊಪ್ಪಳದ ಪೂರ್ವ ಬೆಟ್ಟದ ಮೇಲಿರುವ ಸುಮಾರು ಒಂದು ಸಾವಿರ ವರ್ಷಗಳ ಭವ್ಯ ಇತಿಹಾಸ ಹೊಂದಿ ಇಂದಿಗೂ ಜನಮಾನಸದಲ್ಲಿ ಭಕ್ತಿ, ಭಾವ, ಅಭಿಮಾನಗಳನ್ನು ಉಳಿಸಿಕೊಂಡು ಬೆಳೆಸಿಕೊಂಡು ಮುನ್ನೇಡೆಯುತ್ತಿರುವ ಮಹಾಸಂಸ್ಥಾನ.
ತ್ರಿವಿಧ ದಾಸೋಹದ (ಅನ್ನ, ಅರಿವು, ಆಧ್ಯಾತ್ಮ) ಗಂಗೋತ್ರಿ ಕರ್ನಾಟಕದ ಅಗ್ರಮಾನ್ಯ ಮಠ ಪರಂಪರೆಯ ಸಂಸ್ಥಾನಗಳಲ್ಲಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಠವು ಒಂದು.
ದಕ್ಷಿಣ ಭಾರತದ ಕುಂಭಮೇಳವೇಂದೆ ಖ್ಯಾತವಾಗಿರುವ ಜಾತ್ರ ಮಹೋತ್ಸವವು ದಾಸೋಹ, ಜಾಗೃತಿ ಮತ್ತು ಸರ್ವಧರ್ಮ ಸಮನ್ವಯದ ಸಮಾಗಮನ. ಧಾರ್ಮಿಕ ಆಚರಣೆಗಳೊಂದಿಗೆ ಪ್ರತಿ ಜಾತ್ರೆಯಲ್ಲಿಯು ಭಕ್ತರಲ್ಲಿ, ಅಭಿಮಾನಿಗಳಲ್ಲಿ ಹಾಗೂ ಜನರಲ್ಲಿ ವಿಶಿಷ್ಟ ರೀತಿಯ ಜಾಗೃತಿ ಮೂಡಿಸುತ್ತ ಜಾತ್ರೆಗೊಂದು ಹೊಸರೂಪ-ಹೊಸಮೆರುಗು ನೀಡುವ ಮೂಲಕ ಶ್ರೀ ಮಠವು ದೇಶ, ವಿದೇಶಗಳ ಗಮನ ಸೆಳೆದಿದೆ.
ಒಂದು ತಿಂಗಳ ಕಾಲ ನಿರಂತರ ನಡೆಯುವ ಗವಿಮಠದ ಆವರಣದಲ್ಲಿ ಗವಿಸಿದ್ದೇಶ್ವರ ಜಾತ್ರೆಗೆ ಧ್ವಜಾರೋಹಣ ಮೂಲಕ ಸುತ್ತೂರುಶ್ರೀಗಳಿಂದ ಚಾಲನೆ ನೀಡಲಾಗಿದ್ದು, ಪಲ್ಲಕ್ಕಿಯಲ್ಲಿ ಗವಿಸಿದ್ದೇಶ್ವರ ಮೂರ್ತಿ ತಂದು ರಥದಲ್ಲಿ ಪ್ರತಿಷ್ಠಾಪಿಸಲಾಗಿತ್ತು.
ಜಾತ್ರೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಕೇಂದ್ರ ಸಚಿವ ಭಗವಂತ ಖುಭಾ, ಸಂಸದ ಸಂಗಣ್ಣ ಕರಡಿ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ಶಾಸಕರಾದ ಜಿ.ಜನಾರ್ಧಾನ ರೆಡ್ಡಿ, ರಾಘವೇಂದ್ರ ಹಿಟ್ನಾಳ, ದೊಡ್ಡನಗೌಡ ಪಾಟೀಲ ಇದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….