ಬೆಂಗಳೂರು, (ಜ.27); ನಿಯಮ ಉಲ್ಲಂಘಿಸಿದ ಆರೋಪದಲ್ಲಿ ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಬಿ.ಶ್ರೀರಾಮುಲು ಮಾಲೀಕತ್ವದ ಸಕ್ಕರೆ ಕಾರ್ಖಾನೆಗೆ ಸರ್ಕಾರ ನೋಟಿಸ್ ಜಾರಿಗೊಳಿಸಿದೆ.
2022ರಲ್ಲಿ ಸಿದ್ದಶ್ರೀ ಸೌಹಾರ್ದ ಸಹಕಾರ ಸಕ್ಕರೆ ಕಾರ್ಖಾನೆಗೆ KSPCB ಷರತ್ತುಗಳಲ್ಲಿ ಅನುಮತಿ ನೀಡಿತ್ತು. ಬಾಯ್ಲರ್, ಕಬ್ಬು ಅರೆಯುವಿಕೆ, ತ್ಯಾಜ್ಯ ಸಂಸ್ಕರಣಾ ಘಟಕ ನಿರ್ಮಾಣ ಹಂತದಲ್ಲಿದ್ದರೂ ಅನುಮತಿ ಪಡೆಯದೇ ಡಿಸ್ಟಿಲರಿ ಘಟಕವನ್ನು ಸ್ಥಾಪಿಸಿರುವುದು ಕಂಡು ಬಂದಿದೆ. ಹಾಗಾಗಿ ಇದೀಗ ಕಾರ್ಖಾನೆ ಮುಚ್ಚುವಂತೆ ಅದು ನೋಟಿಸ್ ನೀಡಿದೆ.
ಈ ಕುರಿತಂತೆ ಬಸನಗೌಡ ಪಾಟೀಲ್ ಯತ್ನಾಳ್ ಟ್ವಿಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರ ರಾಜಕೀಯವಾಗಿ ಎದುರಿಸಲಾಗದೆ ನಮ್ಮ ಎಥನಾಲ್ ಕಾರ್ಖಾನೆಗೆ ನೋಟಿಸ್ ಕೊಡಿಸಿದೆ.
ರೈತರಿಗೆ ನೆರವಾಗಲು ಹಾಗು ಹಿಂದುಳಿದ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿ ಮಾಡಲು ಕಾರ್ಖಾನೆ ಸ್ಥಾಪಿಸಲಾಗಿದೆ.
ಕಾನೂನು ರೀತ್ಯಾ ನ್ಯಾಯಾಲಯದಲ್ಲಿ ಇದನ್ನು ಪ್ರಶ್ನಿಸಲಾಗುತ್ತದೆ. ಈ ನೋಟಿಸ್, ಆದೇಶಗಳಿಗೆ ಹೆದರುವ ಜಾಯಮಾನ ನನ್ನದಲ್ಲ ಕಾಂಗ್ರೆಸ್ ಆಡಳಿತದ ವಿರುದ್ಧ ಹೋರಾಟ ಮಾಡಲು ಶಕ್ತಿ ಇಮ್ಮಡಿಯಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….