ಹುಬ್ಬಳ್ಳಿ, (ಫೆ.01): ಕಾಂಗ್ರೆಸ್ಗೆ ನನ್ನ ಜೊತೆ ಸೇರಿದವರೆಲ್ಲ ವಾಪಸ್ ಬರುತ್ತಾರೆ. ನಾವು ನಿಮ್ಮ ಜೊತೆ ಬಿಜೆಪಿಗೆ ಬರುತ್ತೇವೆ ಎನ್ನುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನ ಬಹಳಷ್ಟು ಜನ ನನ್ನ ಸಂಪರ್ಕದಲ್ಲಿದ್ದಾರೆ. ಅವರೆಲ್ಲರೂ ಆದಷ್ಟು ಶೀಘ್ರದಲ್ಲಿ ಬಿಜೆಪಿ ಸೇರಲಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿದ್ದರೂ ಪಕ್ಷದ ವರ್ಚಸ್ಸು ಬೆಳೆಯುತ್ತಿಲ್ಲ. ಹೀಗಾಗಿ ಕಾಂಗ್ರೆಸ್ ತೊರೆಯಲು ಅಲ್ಲಿನವರು ಮನಸ್ಸು ಮಾಡುತ್ತಿದ್ದಾರೆ. ಬೇರೆ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಬಿಜೆಪಿ ಸೇರುವುದಕ್ಕೆ ಆಸೆ ವ್ಯಕ್ತಪಡಿಸುತ್ತಿದ್ದಾರೆ.
ಗ್ಯಾರಂಟಿ ಯೋಜನೆ ಕುರಿತು ಶಾಸಕ ಬಾಲಕೃಷ್ಣ ಹೇಳಿಕೆ ಕಾಂಗ್ರೆಸ್ನ ಮನಸ್ಥಿತಿ ತೋರಿಸುತ್ತದೆ. ಚುನಾವಣೆಗಾಗಿ ಭಾಗ್ಯಗಳನ್ನು ಕೊಟ್ಟರು ಎನ್ನುವುದು ಭಾವನೆ ಜನರಲ್ಲಿ ಮೂಡಿದೆ. ಲೋಕಸಭೆ ಚುನಾವಣೆ ನಂತರ ಭಾಗ್ಯಗಳು ಇರಲ್ಲಾ ಅನ್ನುವ ಪರಿಸ್ಥಿತಿ ಕಾಣಿಸುತ್ತಿದೆ ಎಂದಿದ್ದಾರೆ.
ಮೋದಿಯವರು ಮತ್ತೊಮ್ಮೆ ಪ್ರಧಾನಮಂತ್ರಿ ಮಾಡುವುದೇ ನಮ್ಮ ಗುರಿ. ನಾನು ಪಕ್ಷ ಕೊಡುವ ಯಾವುದೇ ಜವಾಬ್ದಾರಿಯನ್ನಾದರೂ ನಿರ್ವಹಿಸಲು ಸಿದ್ಧ. ಪಕ್ಷ ಹೇಳಿದರೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧ. ಬಿಜೆಪಿ ವರಿಷ್ಠರು ಗೌರವಯುತ ಸ್ಥಾನ ಕೊಡುತ್ತೇವೆ ಅನ್ನುವಂತಹ ಭರವಸೆ ನೀಡಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….