ದೊಡ್ಡಬಳ್ಳಾಪುರ, (ಫೆ.01); ಕನ್ನಡ ಚಿತ್ರರಂಗ ದ ನಟ ಚಿಕ್ಕಣ್ಣ ಹಾಗೂ ನಿರ್ಮಾಪಕ ಉಮಾಪತಿ ಅವರಿಂದು ತಾಲೂಕಿನ ಇತಿಹಾಸ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಈ ವೇಳೆ ದೇವಾಲಯದ ಸಿಬ್ಬಂದಿಗಳು ಹಾಗೂ ಅರ್ಚಕರು ಚಿಕ್ಕಣ್ಣ, ಉಮಾಪತಿ ಅವರಿಗೆ ಪೂಜೆ ಸಲ್ಲಿಸಲು ಅವಕಾಶ ಕಲ್ಪಿಸಿದರೆ, ಅಭಿಮಾನಿಗಳು ಸೆಲ್ಫಿ ಪಡೆದು ಸಂಭ್ರಮಿಸಿದರು.
ಚಿಕ್ಜಣ್ಣ ನಟನೆಯ ಉಪಾಧ್ಯಕ್ಷ’ ರಿಲೀಸ್ ಆಗಿ ಅಬ್ಬರಿಸುತ್ತಿದೆ. ಚಿಕ್ಕಣ್ಣ ಯಾವುದೇ ಪಾತ್ರಕ್ಕೂ ಹೊಂದಿಕೊಳ್ಳುವ ನಟ. ಹೀಗಾಗಿಯೇ ಅವರು ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಗಟ್ಟಿಯಾಗಿ ಬೇರೂರಿದ್ದಾರೆ. ಆದರೆ ಇದೇ ಮೊದಲ ಬಾರಿಗೆ ‘ಉಪಾಧ್ಯಕ್ಷ’ ಸಿನಿಮಾ ಮೂಲಕ ಹೀರೋ ಆಗಿ ಎಂಟ್ರಿ ಕೊಟ್ಟಿದ್ದಾರೆ. ಹೀಗಿದ್ದಾಗ ಚಿಕ್ಕಣ್ಣ ಅವರಿಗೆ ಸಖತ್ ರೆಸ್ಪಾನ್ಸ್ ಸಿಗುತ್ತಿದೆ.
ಹಾಗೇ ‘ಉಪಾಧ್ಯಕ್ಷ’ ಸಿನಿಮಾ ಸಕ್ಸಸ್ ನೋಡಿ ಪ್ರೇಕ್ಷಕರು ಕೂಡ ಈಗ ಜೈಕಾರ ಹಾಕುತ್ತಿದ್ದಾರೆ. ಹಾಗಾದರೆ ‘ಉಪಾಧ್ಯಕ್ಷ’ ಸಿನಿಮಾ 3 ದಿನದಲ್ಲಿ ಎಷ್ಟು ಕಲೆಕ್ಷನ್ ಮಾಡಿದೆ? ಚಿಕ್ಕಣ್ಣ ಹೀರೋ ಆಗಿ ಎಂಟ್ರಿ ಕೊಟ್ಟ ಮೊದಲ ಸಿನಿಮಾ ‘ಉಪಾಧ್ಯಕ್ಷ’.
ಡಿ.ಎನ್ ಸಿನಿಮಾಸ್ ಲಾಂಛನದಲ್ಲಿ ಸ್ಮಿತಾ ಉಮಾಪತಿ ಉಪಾಧ್ಯಕ್ಷ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಈ ಹಿಂದೆ ಶರಣ್ ಅಭಿನಯದ ರ್ಯಾಂಬೋ 2 ಸಿನಿಮಾ ಸೇರಿ ಹಲವು ಸಿನಿಮಾ ನಿರ್ದೇಶನ ಮಾಡಿದ್ದ ನಿರ್ದೇಶಕ ಅನಿಲ್ ಕುಮಾರ್, ಉಪಾಧ್ಯಕ್ಷ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಕಾಮಿಡಿ ಕಥಾಹಂದರವುಳ್ಳ ಈ ಸಿನಿಮಾದಲ್ಲಿ ಚಿಕ್ಕಣ್ಣನ ಜತೆಗೆ ಕಿರುತೆರೆ ನಟಿ ಮಲೈಕಾ ವಸುಪಾಲ್ ನಾಯಕಿಯಾಗಿ ನಟಿಸಿದ್ದಾರೆ. ರವಿಶಂಕರ್ ಮುಖ್ಯ ಭೂಮಿಕೆಯಲ್ಲಿದ್ದಾರೆ. ಅಧ್ಯಕ್ಷ ಶರಣ್ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….