ಬೆಂಗಳೂರು, (ಫೆ.01); ಒಂದು ಕಡೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆ ಮಾಡುತ್ತಿದ್ದರೆ ಇತ್ತ ಕರ್ನಾಟಕದ ನಾಯಕ ಹಾಗೂ ಸಂಸದ ಡಿಕೆ ಶಿವಕುಮಾರ್ ಅವರು ಭಾರತ್ ತೋಡೋ ಬಗ್ಗೆ ನಾಲಿಗೆ ಹರಿಬಿಟ್ಟಿದ್ದಾರೆ ಎಂದು ಆರ್.ಅಶೋಕ್ ಹೇಳಿದ್ದಾರೆ.
ಈ ಕುರಿತಂತೆ ಟ್ವಿಟ್ ಮಾಡಿರುವ ಅವರು, ಕಾಂಗ್ರೆಸ್ ಪಕ್ಷದ ಒಡೆದು ಆಳುವ ನೀತಿಯ ಫಲವಾಗಿ ಈಗಾಗಲೇ ಒಮ್ಮೆ ದೇಶ ವಿಭಜನೆ ಅನುಭವಿಸಿದ್ದು, ಈಗ ಮತ್ತೂಮ್ಮೆ ಭಾರತವನ್ನ ಒಡೆಯುವ ಮಾತನಾಡುತ್ತಿದ್ದಾರೆ.
ದೇಶದ ಅಖಂಡತೆ, ಸಾರ್ವಭೌಮತೆ ಕಾಪಾಡುವ ಪ್ರಮಾಣ ವಚನ ಸ್ವೀಕರಿಸಿದ ಸಂಸದರೊಬ್ಬರು ಈ ರೀತಿ ಮಾತನಾಡುವುದು ಕಾಂಗ್ರೆಸ್ ಪಕ್ಷದ ವಿಭಜನಕಾರಿ ಮನಸ್ಥಿತಿಯನ್ನ ತೋರಿಸುತ್ತದೆ ಎಂದಿದ್ದಾರೆ.
ಇದಕ್ಕೂ ಮುನ್ನ ಸಂಸದ ಡಿ.ಕೆ ಸುರೇಶ್ ಅವರು ಪ್ರತ್ಯೇಕ ರಾಷ್ಟ್ರದ ಕೂಗು ಮೊಳಗಿಸಿದ್ದಾರೆ. ದಕ್ಷಿಣ ಭಾರತದ ಹಣವನ್ನು ಉತ್ತರ ಭಾರತಕ್ಕೆ ಹಂಚಿಕೆ ಮಾಡಲಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದರಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ ಆಗುತ್ತುದೆ. ಇದು ಆರ್ಥಿಕ ತೊಂದರೆಗೂ ಕಾರಣವಾಗುತ್ತಿದೆ. ಹೀಗೆ ಆದರೆ, ಮುಂದೆ ದಕ್ಷಿಣ ಭಾರತದ ಸಂಸದರು ಪ್ರತ್ಯೇಕ ರಾಷ್ಟ್ರದ ಕೂಗನ್ನು ಎತ್ತಬೇಕಾಗುತ್ತದೆ ಎಂದು ಎಚ್ಚರಿಕೆಯ ಮಾತುಗಳನ್ನು ಆಡಿದ್ದರು.
ನಾವು ಕಳುಹಿಸಿದ ಜಿಎಸ್ಟಿ ಹಣ ನಮಗೆ ಸರಿಯಾಗಿ ವಾಪಸ್ ಬರುತ್ತಿಲ್ಲ. ಇದಕ್ಕೆ ಕೇಂದ್ರ ಸರ್ಕಾರ ಸರಿಯಾದ ನ್ಯಾಯವನ್ನು ಒದಗಿಸುತ್ತಿಲ್ಲ ಎಂದು ಡಿ.ಕೆ ಸುರೇಶ್ ಆರೋಪಿಸಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….