ದೊಡ್ಡಬಳ್ಳಾಪುರ, (ಫೆ.01): ಕೆಐಎಡಿಬಿ ಸ್ವಾಧೀನ ಮಾಡಿಕೊಳ್ಳುತ್ತಿರುವುದನ್ನು ಕೈಬಿಡಿಸುವಂತೆ ಧರಣಿ ನಿರತ ರೈತರು, ಜೆಡಿಎಸ್ ರಾಜ್ಯ ನಾಯಕ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.
ತಾಲ್ಲೂಕಿನ ಆದಿನಾರಾಯಣಹೊಸಹಳ್ಳಿ, ನಾಗದೇನಹಳ್ಳಿ, ಕೊನಘಟ್ಟ ಸುತ್ತಲಿನ ಕೃಷಿ ಭೂಮಿಯನ್ನು ಕೆಐಎಡಿಬಿ ಸ್ವಾಧೀನ ಮಾಡಿಕೊಳ್ಳುತ್ತಿರುವುದನ್ನು ಕೈಬಿಡಿಸುವಂತೆ ಅನೇಕ ದಿನಗಳಿಂದ ರೈತರು ಧರಣಿ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ ಬುಧವಾರ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಹರೀಶ್‌ಗೌಡ ನೇತೃತ್ವದಲ್ಲಿ ಬಿಡದಿಯಲ್ಲಿನ ತೋಟದ ಮನೆಯಲ್ಲಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.
ಮನವಿ ಸ್ವೀಕರಿಸಿದ ಕುಮಾರಸ್ವಾಮಿ ಅವರು ಈ ವಿಚಾರವಾಗಿ ಸಂಬಂಧ ಪಟ್ಟ ಕೈಗಾರಿಕಾ ಸಚಿವರು ಹಾಗೂ ಅಧಿಕಾರಿಗಳ ಜೊತೆ ಚರ್ಚಿಸಿದ ಅವರು ರೈತರ ಮನವಿಗೆ ಸ್ಪಂದಿಸುವಂತೆ ಹಾಗೂ ರೈತರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸೂಕ್ತ ರೀತಿಯಲ್ಲಿ ಕ್ರಮಜರುಗಿಸುವಂತೆ ಭರವಸೆ ನೀಡಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….