ದೊಡ್ಡಬಳ್ಳಾಪುರ, (ಫೆ.05); ತಾಲೂಕಿನ ಬಾಶೆಟ್ಟಿಹಳ್ಳಿಯ ಅಜಾಕ್ಸ್ ಸರ್ಕಾರಿ ಪಬ್ಲಿಕ್ ಶಾಲೆಯಲ್ಲಿ ಪೋಷಕರಿಗೆ ಕ್ರೀಡಾಕೂಟವನ್ನು ಏರ್ಪಡಿಸಲಾಗಿತ್ತು.
ಶಿಕ್ಷಣ ಸಂಯೋಜಕ ಮೂರ್ತಿ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಪೋಷಕರಿಗೆ ಕ್ರೀಡಾಕೂಟವನ್ನು ಏರ್ಪಡಿಸಿರುವುದು ಸಂತಸದ ವಿಚಾರವೆಂದರು.
ನಮ್ಮ ದೈಹಿಕ ಹಾಗೂ ಮನೋವಿಕಾಸಕ್ಕೆ ಕ್ರೀಡೆಗಳು ಸಹಕಾರಿಯಾಗಲಿದ್ದು, ಪೋಷಕರಿಗೂ ಕ್ರೀಡೆಗಳ ಅಗತ್ಯವಿದೆ. ಸರ್ಕಾರಿ ಶಾಲೆಯಲ್ಲಿ ಇಂತಹ ಕಾರ್ಯಕ್ರಮಗಳು ನಡೆಯುವುದು ಅಪರೂಪ. ಪೋಷಕರು ಕ್ರೀಡಾಕೂಟದಲ್ಲಿ ಭಾಗವಹಿಸಿ ನಿಮ್ಮ ಮಕ್ಕಳಿಗೆ ಸ್ಪೂರ್ತಿ ಮತ್ತು ಪ್ರೇರಣೆ ನೀಡಿ ಎಂದು ಕರೆ ನೀಡಿದರು.
ವಿಜೇತ ಪೋಷಕರಿಗೆ ಬಹುಮಾನ ವಿತರಣೆ ಮಾಡಲಾಯಿತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‍ಡಿಎಂಸಿ ಅಧ್ಯಕ್ಷ ಆನಂದ್ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಶಾಲೆಯ ಗೌರವಾಧ್ಯಕ್ಷ ಕೃಷ್ಣಪ್ಪ, ಸಿಆರ್‍ಪಿ ಮಹಾದೇವರು, ಮುಖ್ಯ ಶಿಕ್ಷಕಿ ರಾಜೇಶ್ವರಿ, ಪರಿಕ್ರಮ ಸಂಸ್ಥೆಯ ಅಮರನಾಥ್, ಗೀತಾ, ಕಿರಣ್ ಸೇರಿದಮಥೆ ಎಸ್‍ಡಿಎಂಸಿ ಸದಸ್ಯರು ಶಾಲಾ ಸಿಬ್ಬಂದಿ ವರ್ಗದವರು ಹಾಜರಿದ್ದರು.
ಶಿಕ್ಷಕ ಎಂ.ಎಸ್.ರಾಜಶೇಖರ್ ಸ್ವಾಗತಿಸಿದರು. ತಾಯಪ್ಪ ನಿರೂಪಣೆ ಮಾಡಿದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….