ಕಲಬುರಗಿ, (ಫೆ.05): ಮದುವೆ ಮಾಡಿಲ್ಲವೆಂದು ಹೆತ್ತ ತಾಯಿಯನ್ನೇ ಮಗ ಕೊಲೆ ಮಾಡಿರುವ ಹೇಯಾ ಕೃತ್ಯ ಜಿಲ್ಲೆಯ ಚಿಂಚೋಳಿ ತಾಲೂಕಿನ ಪೋಚಾವರಂನಲ್ಲಿ ಸಂಭವಿಸಿದೆ.
ಶೋಭಾ (45 ವರ್ಷ) ಮಗನಿಂದಲೇ ಕೊಲೆಯಾದ ದುರ್ದೈವಿ. ಈಕೆಯ ಮಗ ಅನೀಲ್ ಎಂಬಾತ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದ್ದು, ಮದುವೆ ಮಾಡಿಸಿಲ್ಲ ಎಂದು ಕುಡಿದ ನಶೆಯಲ್ಲಿ ಜಗಳವಾಡಿ ಕಟ್ಟಿಗೆಯಿಂದ ಹೊಡೆದು ತಾಯಿಯನ್ನು ಕೊಂದಿದ್ದಾನೆ ಎಂದು ವರದಿಯಾಗಿದೆ.
ಘಟನೆ ಹಿನ್ನಲೆಯಲ್ಲಿ ಕೊಲೆ ಮಾಡಿದ ಅನೀಲ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಕುಂಚಾವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….