ಚಿಕ್ಕಬಳ್ಳಾಪುರ, (ಫೆ.05); ಹದಗೆಟ್ಟ ರಸ್ತೆಗೆ ಕಾಮಗಾರಿ ನಡೆಸುವಂತೆ ಒತ್ತಾಯಿಸಿ, ವ್ಯಕ್ತಿಯೋರ್ವ ನೀರು ನಿಂತ ರಸ್ತೆ ಗುಂಡಿಯಲ್ಲಿ ಕುಳಿತು ಧರಣಿ ನಡೆಸಿರುವ ಘಟನೆ ಬಾಗೇಪಲ್ಲಿ ಪಟ್ಟಣದ ಪಾತ ಬಾಗೇಪಲ್ಲಿ ವೃತ್ತದಲ್ಲಿ ನಡೆದಿದೆ.
ಬಾಗೇಪಲ್ಲಿ ವ್ಯಾಪ್ತಿಯ ಗೂಳೂರು ರಸ್ತೆ ಸೇರಿದಂತೆ ಹಲವು ರಸ್ತೆಗಳು ಹದಗೆಟ್ಟಿದ್ದಕ್ಕೆ ಆಕ್ರೋಶಗೊಂಡ ಕದಿರನ್ನಗಾರಿಪಲ್ಲಿ ಸೂರಿ ಎನ್ನುವಾತ ಅಹೋರಾತ್ರಿ ಧರಣಿ ನಡೆಸಿದ್ದಾರೆ ಎಂದು ವರದಿಯಾಗಿದೆ.
ಗುಂಡಿ ರಸ್ತೆಯಲ್ಲಿ ಬೈಕ್ ನಿಂದ ಬಿದ್ದು ಗಾಯಗೊಂಡಿದ್ದ ಸೂರಿ ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಸ್ತೆ ಮಧ್ಯೆ ನೀರು ನಿಂತ ಗುಂಡಿಯಲ್ಲಿ ಏಕಾಂಗಿಯಾಗಿ ಕುಳಿತು ಸೂರಿ ಹದಗೆಟ್ಟ ರಸ್ತೆಗಳನ್ನು ಸರಿಪಡಿಸುವಂತೆ ಆಗ್ರಹಿಸಿ ಧರಣಿ ನಡೆಸಿರುವ ವೀಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….