ಫೆ.10ರಂದು ಹೆಗ್ಗಡಿಹಳ್ಳಿಯಲ್ಲಿ ಸಂವಿಧಾನ ಜಾಗೃತಿ ಜಾಥಾಗೆ ಚಾಲನೆ: ಅದ್ಧೂರಿ ಸಿದ್ಧತೆ

ದೊಡ್ಡಬಳ್ಳಾಪುರ, (ಫೆ.08); ತಾಲೂಕಿನ ಹೆಗ್ಗಡಿಹಳ್ಳಿ ಗ್ರಾಮ ಪಂಚಾಯಿತಿವತಿಯಿಂದ ಸಂವಿಧಾನ ಜಾಗೃತಿ ಜಾಥಾವನ್ನು ಫೆ.10ರಂದು ಚಾಲನೆ ನೀಡಲಾಗುತ್ತಿದೆ.

ಸಂವಿಧಾನ ಜಾಗೃತಿ ಜಾಥಾ ಅಂಗವಾಗಿ ರಥವನ್ನು ಗ್ರಾಮಸ್ಥರು ಕಳಶಗಳನ್ನು ಹೊರುವ ಮೂಲಕ ಫೆ.10ರಂದು ಬೆಳಗ್ಗೆ 09 ಗಂಟೆಗೆ ನಂದಿಬೆಟ್ಟ ಕ್ರಾಸ್ ನಿಂದ ಸ್ವಾಗತಿಸಲಾಗುತ್ತದೆ ಮತ್ತು ಮೆರವಣಿಗೆಯಲ್ಲಿ ಸಾಗಲಾಗುತ್ತದೆ.

ನಂತರ ಸಂವಿಧಾನ ಪೀಠಿಕೆಯನ್ನು ಗ್ರಾಮಸ್ಥರಿಗೆ ಬೋಧಿಸಲಾಗುವುದು‌. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಹಿಳೆಯರಿಗೆ ರಂಗೋಲಿ ಸ್ಪರ್ಧೆಯನ್ನು ಆಯೋಜಿಸಿ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಗುತ್ತದೆ.

ಶಾಲಾ ಮಕ್ಕಳಿಗೆ ಪ್ರಬಂಧ ಸ್ಪರ್ಧೆ ಹಾಗೂ ರಸಪ್ರಶ್ನೆಗಳು ಸ್ಪರ್ಧೆ ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಿ, ಸಂಪನ್ಮೂಲ ವ್ಯಕ್ತಿಗಳಿಂದ ಸಂವಿಧಾನದ ಬಗ್ಗೆ ಭಾಷಣ ಮಾಡಿಸಲಾಗುತ್ತಿದೆ.

ಈ ಜಾಥಾದಲ್ಲಿ ಹೆಗ್ಗಡಿಹಳ್ಳಿ ಗ್ರಾಮಪಂಚಾಯಿತಿ ಹಾಲಿ, ಮಾಜಿ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಮುಖಂಡರು ಭಾಗವಹಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

error: Content is protected !!