ನವದೆಹಲಿ, (ಫೆ.08); ಕಳೆದ ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಯಾವುದೇ ಜವಾಬ್ದಾರಿ ಇಲ್ಲದೆ ಬಿಟ್ಟಿ ಭಾಗ್ಯಗಳನ್ನು ಘೋಷಿಸಿದ್ದು, ಬಿಟ್ಟಿ ಭಾಗ್ಯಕ್ಕೆ ಎಲ್ಲಿಂದ ಹಣ ತರುತ್ತೀರಾ ಎಂದರೆ ಕಾಂಗ್ರೆಸ್ ನಾಯಕರ ಬಳಿ ಉತ್ತರವಿಲ್ಲ. ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಸಂಸದೆ ತೇಜಸ್ವಿ ಸೂರ್ಯ ಆರೋಪಿಸಿದ್ದಾರೆ.
ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ಹಿನ್ನಲೆಯಲ್ಲಿ ದಿಢೀರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಿಂದಿನ ಯುಪಿಎ ಸರ್ಕಾರದ ಅವಧಿ ಯಲ್ಲಿ 2004-14 ರ ನಡುವೆ ರಾಜ್ಯಕ್ಕೆ 81,795 ಕೋಟಿ ರೂ. ಅನುದಾನ ಬಂದಿತ್ತು. ಆದರೆ, ಎನ್ಡಿಎ ಅವಧಿಯಲ್ಲಿ 2,85,000 ಕೋಟಿ ರೂ. ಬಂದಿದೆ.
ಕಳೆದ 70 ವರ್ಷಗಳಲ್ಲಿ ಕೇಂದ್ರದಿಂದ ಎಷ್ಟು ಹಣ ರಾಜ್ಯಕ್ಕೆ ಬಂದಿದೆಯೊ ಅಷ್ಟು ಹಣ ಕೇವಲ ಕಳೆದ 10 ವರ್ಷದಲ್ಲಿ ಬಂದಿದೆ. ಆರ್ಟಿಕಲ್ 281ರ ಅಡಿಯಲ್ಲಿ ರಾಜ್ಯಕ್ಕೆ ಅನ್ಯಾಯವಾದ್ರೆ ಸುಪ್ರಿಂಕೋರ್ಟ್ ಗೆ ಹೋಗಬೇಕು. ಅದನ್ನು ಬಿಟ್ಟು ಜಂತರ್ಮಂತರ್ ಬಂದು ನಾಟಕ ಮಾಡ್ತಿದ್ದಾರೆ ಎಂದು ಆರೋಪಿಸಿದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….