ರಾಜ್ಯದಲ್ಲಿ ₹50 ಸಾವಿರ ಕೋಟಿ ಹೂಡಿಕೆ, 58 ಸಾವಿರ ಉದ್ಯೋಗಸೃಷ್ಟಿ: ಮೈಸೂರು ಲ್ಯಾಂಪ್ಸ್: ಖಾಸಗಿ ಒಡೆತನದ ಷೇರು ಖರೀದಿಗೆ ಕ್ರಮ – ಎಂ.ಬಿ.ಪಾಟೀಲ

ಬೆಂಗಳೂರು, (ಫೆ.13): 2023-24ನೇ ಸಾಲಿನಲ್ಲಿ ಒಟ್ಟು 241 ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, ಇವುಗಳಿಂದ ₹50,025 ಕೋಟಿ ಬಂಡವಾಳ ಹರಿದುಬಂದಿದೆ. ಇವುಗಳ ಮೂಲಕ 58,051 ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಕೇಶವಪ್ರಸಾದ್ ಮಂಗಳವಾರ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು.

ಏಕಗವಾಕ್ಷಿ ಅನುಮೋದನಾ ಸಮಿತಿಯು ಹಸಿರು ನಿಶಾನೆ ನೀಡಿರುವ ಈ ಯೋಜನೆಗಳ ಪೈಕಿ 24 ಯೋಜನೆಗಳು ಮಾತ್ರ ಬೆಂಗಳೂರು ಜಿಲ್ಲೆಯಲ್ಲಿದ್ದು, ಉಳಿದ 217 ಯೋಜನೆಗಳು ಹೊರಗಿನ ಜಿಲ್ಲೆಗಳಲ್ಲಿವೆ. ಬೆಂಗಳೂರು ಜಿಲ್ಲೆಯಲ್ಲಿ 21,537 ಕೋಟಿ ರೂ. ಹೂಡಿಕೆ ಆಗುತ್ತಿದ್ದು, 19,243 ಉದ್ಯೋಗ ಸೃಷ್ಟಿ ಆಗಲಿವೆ. ಉಳಿದ ಜಿಲ್ಲೆಗಳಲ್ಲಿ 28,488 ಕೋಟಿ ರೂ. ಬಂಡವಾಳ ಹೂಡಿಕೆ ಆಗುತ್ತಿದ್ದು, 38,808 ಮಂದಿಗೆ ಉದ್ಯೋಗ ಸಿಗಲಿವೆ ಎಂದು ಅವರು ಅಂಕಿಅಂಶಗಳ ಸಮೇತ ವಿವರಿಸಿದರು.

ಬೆಂಗಳೂರನ್ನು ಹೊರತುಪಡಿಸಿ ರಾಜ್ಯದ ಮಿಕ್ಕ ಭಾಗಗಳಲ್ಲಿ ಉದ್ದಿಮೆಗಳು ನೆಲೆಯೂರಿ, ಉದ್ಯೋಗ ಸೃಷ್ಟಿಯಾಗುವಂತೆ ಮಾಡಲು ಸರಕಾರವು ಬಿಯಾಂಡ್ ಬೆಂಗಳೂರು ಉಪಕ್ರಮವನ್ನು ಆರಂಭಿಸಿದ್ದು, ವಿವಿಧೆಡೆಗಳಲ್ಲಿ ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಇದಕ್ಕಾಗಿ ಕೈಗಾರಿಕಾ ನೀತಿಯಲ್ಲಿ ಹಲವು ಪ್ರೋತ್ಸಾಹಧನ ಮತ್ತು ವಿನಾಯಿತಿಗಳನ್ನು ನೀಡಲಾಗುತ್ತಿದೆ ಎಂದು ಸಚಿವರು ಹೇಳಿದ್ದಾರೆ.

ಮೈಸೂರು ಲ್ಯಾಂಪ್ಸ್ ಖಾಸಗಿ ಒಡೆತನದ ಷೇರು ಖರೀದಿಗೆ ಕ್ರಮ: ಸರ್ಕಾರಿ ಸ್ವಾಮ್ಯದ ಮೈಸೂರು ಲ್ಯಾಂಪ್ಸ್ ಕಂಪನಿಯಲ್ಲಿ ಶೇ5.6ರಷ್ಟು ಷೇರುಗಳು ಖಾಸಗಿಯವರ ಒಡೆತನದಲ್ಲಿದ್ದು ಅಷ್ಟೂ ಷೇರುಗಳನ್ನು ಸರ್ಕಾರವೇ ಖರೀದಿ ಮಾಡಿ ಸಂಸ್ಥೆಯನ್ನು ಶೇ 100ರಷ್ಟು ಸರ್ಕಾರಿ ಸಂಸ್ಥೆಯನ್ನಾಗಿ ಮಾಡುವ ನಿಟ್ಟಿನಲ್ಲಿ ಪ್ರಯತ್ನ ನಡೆದಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ವಿಧಾನ ಪರಿಷತ್ ಗೆ ತಿಳಿಸಿದರು.

ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್‌ನ ಎಸ್.ಎಲ್.ಬೋಜೇಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಮೈಸೂರು ಲ್ಯಾಂಪ್ಸ್ಗೆ ಸಂಬಂಧಿಸಿದಂತೆ ಸರ್ಕಾರ ಹೆಚ್ಚು ಜಾಗರೂಕತೆಯ ಹೆಜ್ಜೆಗಳನ್ನು ಇಡುತ್ತಿದ್ದು, ಅದರ ಆಸ್ತಿ ಯಾವುದೇ ಖಾಸಗಿ ವ್ಯಕ್ತಿ/ಸಂಸ್ಥೆಗಳ ಪಾಲಾಗಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಸದ್ಯ ಈ ಕಂಪನಿಯಲ್ಲಿ ಸರ್ಕಾರದ ಷೇರು ಪ್ರಮಾಣ ಶೇ 91.07ರಷ್ಟು ಇದೆ. ಸರ್ಕಾರಿ ಸ್ವಾಮ್ಯದ ಎನ್‌ಜಿಇಎಫ್ ಸಂಸ್ಥೆ ಶೇ 3.33ರಷ್ಟು ಷೇರು ಬಂಡವಾಳ ಹೊಂದಿದೆ. ಉಳಿದ ಶೇ 5.6ರಷ್ಟು ಷೇರು ಬಂಡವಾಳ ಸಾರ್ವಜನಿಕರದ್ದಾಗಿದೆ ಎಂದು ಅವರು ವಿವರಿಸಿದರು.

ಮೈಸೂರು ಲ್ಯಾಂಪ್ಸ್ ಮತ್ತು ಎನ್‌ಜಿಇಎಫ್ ಸಂಸ್ಥೆಗೆ ಸೇರಿದ ಜಾಗಗಳಲ್ಲಿ ಸಾರ್ವಜನಿಕ ಉದ್ದೇಶದ ವಿನೂತನ ಯೋಜನೆಗಳನ್ನು ಅನುಷ್ಠಾನಗೊಳಿಸಲು 2021ರಲ್ಲಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್ ಸ್ಥಾಪಿಸಲಾಗಿತ್ತು. ಸರ್ಕಾರದ ಮುಖ್ಯ ಕಾರ್ಯದರ್ಶಿ ಇದರ ಅಧ್ಯಕ್ಷರಾಗಿದ್ದಾರೆ. ಇವರಲ್ಲದೆ, ಸರ್ಕಾರದ ಕಡೆಯಿಂದ ಏಳು ಮತ್ತು ನಾಗರಿಕರ ವಲಯದಿಂದ ಐದು ಟ್ರಸ್ಟಿಗಳನ್ನು ನೇಮಿಸಲು ಅವಕಾಶ ಇದೆ. ಇದುವರೆಗೂ ಈ ಟ್ರಸ್ಟ್ ಗೆ ಯಾವುದೇ ಚಟುವಟಿಕೆಗಳನ್ನು ಸರ್ಕಾರದ ಕಡೆಯಿಂದ ವಹಿಸಿರುವುದಿಲ್ಲ ಎಂದು ಅವರು ವಿವರಿಸಿದರು.

ಮೊದಲ ಆದ್ಯತೆ ಕಂಪನಿಯನ್ನು ಪೂರ್ಣ ಪ್ರಮಾಣದಲ್ಲಿ ಸರ್ಕಾರಿ ಸಂಸ್ಥೆಯನ್ನಾಗಿ ಮಾಡುವುದು. ಅದರ ನಂತರವೇ ಅದರ ಅಸ್ತಿಗಳನ್ನು ಸಾರ್ವಜನಿಕ ಉದ್ದೇಶಗಳಿಗೆ ಹೇಗೆ ಬಳಸಿಕೊಳ್ಳಬೇಕು ಎಂಬುದರ ಬಗ್ಗೆ ತೀರ್ಮಾನ ಮಾಡಲಾಗುವುದು. ಒಟ್ಟಿನಲ್ಲಿ ಖಾಸಗಿಯವರಿಗಂತೂ ಕೊಡುವುದಿಲ್ಲ ಎಂದು ತಿಳಿಸಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!